ವಿಶ್ವಕಪ್‌ ಗೆದ್ದ ಬಳಿಕ ಧೋನಿಯನ್ನು ನಾಯಕತ್ವದಿಂದ ಇಳಿಸಲು ನಿರ್ಧರಿಸಿದ್ದ ಬಿಸಿಸಿಐ


Team Udayavani, Aug 17, 2020, 5:24 PM IST

Dhoni-Srinivasan

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ವಿಶ್ವಕಪ್‌ ಗೆದ್ದ ಬಳಿಕ ಎಂ.ಎಸ್‌. ಧೋನಿ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಲು ಬಿಸಿಸಿಐ ಮುಂದಾಗಿತ್ತು ಎಂಬ ಮಾಹಿತಿ ಬಿಸಿಸಿಐನ ಮಾಜಿ ಅಧ್ಯಕ್ಷರಿಂದಲೇ ಬಹಿರಂಗೊಂಡಿದೆ.

2011ರ ವಿಶ್ವಕಪ್‌ ಬಳಿಕ ಮಹೇಂದ್ರ ಸಿಂಗ್‌ ಧೋನಿ ಟೀಮ್‌ ಇಂಡಿಯಾದ ನಾಯಕನಾಗಲು ಆಯ್ಕೆ ಸಮಿತಿ ಬಯಸುತ್ತಿರಲಿಲ್ಲ.

ಆದರೆ ನಾನು ಅವರ ನಾಯಕತ್ವವನ್ನು ಉಳಿಸಲು ಮಂಡಳಿಯ ಅಧ್ಯಕ್ಷನಾಗಿ ನನ್ನ ಅಧಿಕಾರವನ್ನು ಬಳಸಿಕೊಂಡೆ ಎಂದು ಭಾರತದ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನ ಮಾಜಿ ಅಧ್ಯಕ್ಷ ಎನ್‌. ಶ್ರೀನಿವಾಸನ್‌ ಬಹಿರಂಗಪಡಿಸಿದ್ದಾರೆ.

2011ರಲ್ಲಿ ಧೋನಿ ನಾಯಕತ್ವದಲ್ಲಿ 28 ವರ್ಷಗಳ ಅನಂತರ ಟೀಮ್‌ ಇಂಡಿಯಾ ಎರಡನೆ ಬಾರಿ ಏಕದಿನ ವಿಶ್ವಕಪ್‌ ಗೆದ್ದಿತ್ತು. ಆದರೆ ವಿಶ್ವ ಚಾಂಪಿಯನ್‌ ಆಗಿದ್ದ ಭಾರತ ತಂಡವು 2011-12ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿತ್ತು. ಅಲ್ಲಿ ಟೆಸ್ಟ್‌ ಸರಣಿಯನ್ನು 0-4ರಿಂದ ಕಳೆದುಕೊಂಡಿತು. ಇದರಿಂದ ಅಸಮಧಾನಗೊಂಡ ಬಿಸಿಸಿಐ ಸ್ವಲ್ಪ ಸಮಯದ ಬಳಿಕ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿತ್ತು ಎಂದಿದ್ದಾರೆ.

ಆಗಿನ ಬಿಸಿಸಿಐ ಕಾರ್ಯದರ್ಶಿ ಸಂಜಯ್‌ ಜಗ್ಡೇಲ್‌ ಅವರು “ಸರ್‌ ಧೋನಿ ಅವರನ್ನು ಭಾರತೀಯ ಕ್ರಿಕೆಟ್‌ ತಂಡಕ್ಕೆ ನಾಯಕನನ್ನಾಗಿ ಮಾಡಲು ಆಯ್ಕೆ ಸಮಿತಿ ಸದಸ್ಯರು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದರು. ಬಳಿಕ ನಾನು ನೇರವಾಗಿ ಸಭೆಗೆ ಹೋಗಿ ಮಂಡಳಿಯ ಅಧ್ಯಕ್ಷನಾಗಿ ನನ್ನ ಹಕ್ಕುಗಳನ್ನು ಚಲಾಯಿಸಿ, ಧೋನಿ ತಂಡದ ನಾಯಕನಾಗಿರುತ್ತೇನೆ ಎಂದು ಹೇಳಿ ಸಭೆಯಿಂದ ನಿರ್ಗಮಿಸಿದ್ದೆ ಎಂದು ಶ್ರೀನಿವಾಸನ್‌ ನೆನಪಿಸಿಕೊಂಡಿದ್ದಾರೆ.

ಧೋನಿ ಅವರನ್ನು ತೆಗೆದುಹಾಕಲು ಕಾರಣ?
28 ವರ್ಷಗಳ ಬಳಿಕ ಭಾರತ ವಿಶ್ವಕಪ್‌ ಗೆದ್ದಿತ್ತು. ಆದರೆ ಬಳಿಕ ನಾವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್‌ ಸರಣಿಯನ್ನು ಕಳೆದುಕೊಂಡೆವು. ಆದ್ದರಿಂದ ಆಯ್ಕೆ ಸಮಿತಿ ಸಭೆಯಲ್ಲಿ ಧೋನಿ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಲು ಒತ್ತಾಯಗಳು ಕೇಳಿಬಂದಿದ್ದವು. ಆದರೆ ನಾನು ಅದಕ್ಕೆ ಸೊಪ್ಪು ಹಾಕಿಲ್ಲ. ನೀವು ಅವರನ್ನು ಏಕದಿನ ತಂಡದ ನಾಯಕತ್ವದಿಂದ ಹೇಗೆ ತೆಗೆದು ಹಾಕುತ್ತೀರಿ? ಎಂದು ಪ್ರಶ್ನಿಸಿದ್ದೆ ಎಂದರು. ಧೋನಿಯನ್ನು ನಾಯಕತ್ವ ಸ್ಥಾನದಿಂದ ತೆಗೆದುಹಾಕಲು ಅವರಲ್ಲಿ ಬಲವಾದ ಕಾರಣಗಳು ಇರಲಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ಧೋನಿ ಅವರ ಬದಲಿ ಯಾರು ಎಂಬುದಕ್ಕೆ ಆಯ್ಕೆದಾರರು ಯೋಚಿಸಿರಲಿಲ್ಲ ಎಂದರು.

ಬಿಸಿಸಿಐನ ಹಳೆಯ ಸಂವಿಧಾನದ ಪ್ರಕಾರ, ತಂಡವನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯು ಮಂಡಳಿಯ ಅಧ್ಯಕ್ಷರ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಲೋಧಿ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಬಳಿಕ ಆಯ್ಕೆ ಪ್ರಕರಣದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ಮುಖ್ಯ ಆಯ್ಕೆಗಾರನಿಗೆ ನೀಡಲಾಗಿತ್ತು.

ಇದೀಗ ಶ್ರೀನಿವಾಸನ್‌ ಅವರ ಈ ಹೇಳಿಕೆಯು ಧೋನಿ ಅವರನ್ನು 2011ರಲ್ಲಿ ಏಕದಿನ ತಂಡದ ನಾಯಕತ್ವದಿಂದ ತೆಗೆದುಹಾಕುವ ಯೋಚನೆಯಲ್ಲಿ ಬಿಸಿಸಿಐ ಹೊಂದಿತ್ತು ಎಂಬ ಊಹಾಪೋಹಗಳನ್ನು ಖಚಿತಪಡಿಸುತ್ತದೆ. ಬಿಸಿಸಿಐ ಅಧ್ಯಕ್ಷರಾಗಿ ಮತ್ತು ಐಪಿಎಲ್‌ ಚೆನ್ನೆç ಸೂಪರ್‌ ಕಿಂಗ್ಸ್‌ ಮಾಲಕರಾಗಿದ್ದ ಶ್ರೀನಿವಾಸನ್‌ ಅವರು ಮಧ್ಯಪ್ರವೇಶಿಸಿ ಧೋನಿ ನಾಯಕತ್ವವನ್ನು ಉಳಿಸಿದ್ದನ್ನು ಇದು ಖಚಿತಪಡಿಸುತ್ತದೆ.

ಬಳಿಕದ ಬೆಳವಣಿಗೆಯಲ್ಲಿ ಮೊಹಿಂದರ್‌ ಅಮರನಾಥ್‌ ಅವರನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕಲಾಗಿತ್ತು. ಯಾಕೆಂದರೆ ಅವರು ಶ್ರೀಕಾಂತ್‌ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ತೆರೆಮರೆಯಲ್ಲಿ ಕೆಲಸಮಾಡುತ್ತಿದ್ದರು. ಆ ಸಮಯದಲ್ಲಿ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಬೇಕೆಂದು ಪ್ರತಿಪಾದಿಸುವವರ ಸಾಲಿನಲ್ಲಿ ಅಮರನಾಥ್‌ ಮುಂಚೂಣಿಯಲ್ಲಿದ್ದರು.

 

 

 

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.