ರಕ್ಷಣಾ ಉತ್ಪನ್ನಗಳ ರಫ್ತು ಉತ್ತೇಜನಕ್ಕೆ ಭಾರತ ಸನ್ನದ್ಧ
Team Udayavani, Aug 18, 2020, 12:52 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರಕ್ಷಣಾ ಕ್ಷೇತ್ರದಲ್ಲೂ ಭಾರತ ವೇಗವಾಗಿ ಸ್ವಾವಲಂಬಿ ಹೆಜ್ಜೆ ಇಟ್ಟಿದೆ. ರಾಜತಾಂತ್ರಿಕ ಮಾರ್ಗದಲ್ಲಿ ರಕ್ಷಣಾ ಉತ್ಪನ್ನಗಳ ರಫ್ತು ಮೂಲಕ ದೇಶೀ ಉದ್ಯಮವನ್ನು ಉತ್ತೇಜಿಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ.
ದೇಶೀ ಉದ್ಯಮ ಸಂಸ್ಥೆಗಳನ್ನು ಉದ್ದೇಶಿಸಿ ವೆಬಿನಾರ್ನಲ್ಲಿ ಮಾತನಾಡಿದ ರಕ್ಷಣಾ ಇಲಾಖೆಯ ಉತ್ಪಾದನಾ ವಿಭಾಗದ ಕಾರ್ಯದರ್ಶಿ ರಾಜ್ಕುಮಾರ್, “ಮಿತ್ರ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವೆಬ್ ಸಂವಹನ ನಡೆಸಿ, ಅವರ ರಕ್ಷಣಾ ಬೇಡಿಕೆಗಳನ್ನು ಪರಿಶೀಲಿಸಲಾಗುತ್ತಿದೆ. ರಾಯಭಾರಿ ಕಚೇರಿಗಳ ನೆರವಿನೊಂದಿಗೆ ಮಿತ್ರ ರಾಷ್ಟ್ರಗಳಿಗೆ ಅಗತ್ಯವಿರುವ ರಕ್ಷಣಾ ಉತ್ಪನ್ನಗಳು, ಶಸ್ತ್ರಾಸ್ತ್ರಗಳ ಪಟ್ಟಿಯನ್ನು ತಯಾರಿಸುತ್ತಿದ್ದೇವೆ. ರಕ್ಷಣಾ ಉತ್ಪನ್ನಗಳ ನಿರ್ಮಾಣಕ್ಕೆ ಹೂಡಿಕೆ ಮಾಡಲು ಸಂಸ್ಥೆಗಳು ಮುಂದೆ ಬರಬೇಕು’ ಎಂದು ಕರೆ ನೀಡಿದರು.
ಮತ್ತಷ್ಟು ನಿಷೇಧ?: ಆಮದು ಮಾಡಿಕೊಳ್ಳುತ್ತಿದ್ದ 101 ಶಸ್ತ್ರಾಸ್ತ್ರಗಳನ್ನು ಈಗಾಗಲೇ ನಿಷೇಧಿಸಲಾಗಿದೆ. ಲಘು ಯುದ್ಧ ಹೆಲಿಕಾಪ್ಟರ್ಗಳು, ಸಾಂಪ್ರ ದಾಯಿಕ ಜಲಾಂತರ್ಗಾಮಿ ನೌಕೆಗಳು ಮತ್ತು ಕ್ರೂಸ್ ಕ್ಷಿಪಣಿಗಳನ್ನೊಳೊಂಡ ಮತ್ತಷ್ಟು ರಕ್ಷಣಾ ಉತ್ಪನ್ನಗಳ ಆಮದು ನಿಷೇಧದ 2ನೇ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.