ಮಹಾ ಮಳೆಗೆ ಮತ್ತೆ ತುಂಬಿ ಹರಿಯುತ್ತಿದೆ ಕೃಷ್ಣಾ ನದಿ : ಪ್ರವಾಹದ ಭೀತಿ
ಹಿಪ್ಪರಗಿ ಜಲಾಶಯಕ್ಕೆ 1ಲಕ್ಷ, 85 ಸಾವಿರ ಕ್ಯೂಸೆಕ್ಸ್ ನೀರು
Team Udayavani, Aug 18, 2020, 2:20 PM IST
ಬನಹಟ್ಟಿ : ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಹಾಗೂ ವಿವಿಧ ಜಲಾಶಯಗಳಿಂದ ಬಿಡುಗಡೆ ಮಾಡಿರುವ ನೀರಿನಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಸಂಖ್ಯೆಯ ಜನ ಮತ್ತು ಜಾನುವಾರುಗಳಿಗೆ ಹಿಪ್ಪರಗಿ ಜಲಾಶಯ ಸಂಜೀವಿನಿಯಾಗಿದ್ದು, ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಹಿಪ್ಪರಗಿ ಜಲಾಶಯದ ಹಿನ್ನಿರಿನಿಂದಾಗಿ ನದಿ ಪಾತ್ರದ ಗ್ರಾಮಗಳ ಹೋಲ ಗದ್ದೆಗಳಿಗೆ ನೀರು ನುಗ್ಗಲಾರಂಬಿಸಿದೆ.
ಕಳೆದ ವಾರವಷ್ಟೇ ತುಂಬಿ ಹರೆದಿದ್ದ ಕೃಷ್ಣೆ ಕಳೆದ ಕೆಲ ದಿನಗಳಿಂದ ನೀರಿನ ಹರಿವಿನಲ್ಲಿ ಕುಷಿತವಾಗಿತ್ತು. ಈಗ ಕೃಷ್ಣೆ ಮತ್ತೋಮ್ಮೆ ತನ್ನ ಆರ್ಭಟವನ್ನು ತೋರಲಾರಂಬಿಸಿದೆ. ಕೋವಿಡ್ ಸಂಕಷ್ಟದ ನಡುವೆ ನದಿಯ ಅಕ್ಕ ಪಕ್ಕದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮತ್ತಷ್ಟು ಭಯ ಪಡುವಂತಾಗಿದೆ.
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಬಾರಿ ಪ್ರಮಾಣದ ಮಳೆಯಾಗುತ್ತಿರುವುದರಿಂದ ಇಂದು ಹಿಪ್ಪರಗಿ ಜಲಾಶಯಕ್ಕೆ ಒಟ್ಟು 1,85,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಅದೇ ರೀತಿಯಾಗಿ ಜಲಾಶಯದಿಂದ 1,85,000 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಮುಂದೆ ಹರಿ ಬೀಡಲಾಗುತ್ತದೆ. ಜಲಾಶಯದ ನೀರಿನ ಮಟ್ಟ 523.70 ಮೀ ಆಗಿದೆ. ನದಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ನದಿ ಪಾತ್ರದ ಜನರು ಸುರಕ್ಷತೆಯ ದೃಷ್ಠಿಯಿಂದ ನದಿಯ ಹತ್ತಿರ ತೆರಳುವುದಾಗಲಿ, ಜಾನುವಾರುಗಳನ್ನು ತೆಗೆದುಕೊಂಡು ಹೋಗುವುದಾಗಲಿ ಮಾಡಬಾರದು. ಒಂದು ವೇಳೆ ಪ್ರವಾಹ ಉಂಟಾದರೂ ಅದನ್ನು ಎದುರಿಸಲು ತಾಲೂಕು ಆಡಳಿತ ಸಿದ್ದವಾಗಿದೆ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ ಪ್ರಶಾಂತ ಚನಗೋಂಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.