![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 18, 2020, 3:44 PM IST
ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೊವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಸೋಂಕು ದೃಢವಾಗಿದೆ. ಸದ್ಯ ಇವರು ಬೆಂಗಳೂರಿನ ನಿವಾಸದಲ್ಲಿ ಐಸೊಲೇಷನ್ ನಲ್ಲಿದ್ದಾರೆ.
ಈ ಕುರಿತಂತೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.