ಕಲಬುರಗಿ-ರಾಯಚೂರು ಸಂಪರ್ಕ ಕಡಿತ
Team Udayavani, Aug 18, 2020, 4:53 PM IST
ಶಹಾಪುರ: ನಾರಾಯಣಪುರದ ಬಸವಸಾಗರ ಜಲಾಶಯದಿಂದ 2.60 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಕೊಳ್ಳೂರ(ಎಂ) ಸೇತುವೆ ಮುಳಗಡೆಯಾಗಿದ್ದು, ಕಲಬುರಗಿ-ರಾಯಚೂರು ಸಂಪರ್ಕ ಕಡಿತಗೊಂಡಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್ ಜಗನ್ನಾಥರಡ್ಡಿ, ನದಿ ತೀರದ ಜನತೆ ಎಚ್ಚರದಿಂದ ಇರಬೇಕು. ಜನರು ಸೇರಿದಂತೆ ಜಾನುವಾರುಗಳನ್ನು ನದಿ ತೀರಕ್ಕೆ ಬಿಡಬಾರದು ಎಂದು ತಿಳಿಸಿದರು. ಅಲ್ಲದೆ ಸ್ಥಳದಲ್ಲಿದ್ದ ಗ್ರಾಮಲೇಖ ಪಾಲಕರಿಗೆ ಪ್ರವಾಹದಿಂದ ಹಾನಿಗೊಳಗಾದ ಬೆಳೆ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು.
ಅಲ್ಲದೆ ಸೇತುವೆ ಬಳಿ ಯಾರೊಬ್ಬರು ಸುಳಿಯದಂತೆ ಎಚ್ಚರ ವಹಿಸಬೇಕು. ದಂಡೆಯಲ್ಲಿ ಪೊಲೀಸ್ ಕಾವಲು ಇರಲಿದೆ. ಅಧಿಕಾರಿಗಳು ತೀವ್ರ ನಿಗಾವಹಿಸಬೇಕು. ಮಹಾರಾಷ್ಟ್ರದಲ್ಲಿ ಸತತ ಮಳೆಯಾಗಿದ್ದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೂ ಬರಬಹುದು. ಹೀಗಾಗಿ ಕಂದಾಯ ಇಲಾಖೆ ಗ್ರಾಮಲೇಖಪಾಲಕರು ನೀರು ಹರಿಬಿಡುವ ಕುರಿತು ಕ್ಷಣ ಕ್ಷಣ ಮಾಹಿತಿ ಪಡೆದು ಗ್ರಾಮಗಳ ಜನರಿಗೆ ಎಚ್ಚರ ವಹಿಸಲು ಸೂಚಿಸುತ್ತಿರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.