ಬಿಜೆಪಿ ಹಿರಿಯ ಮುಖಂಡ ಸಿ.ಗುರುಸ್ವಾಮಿ ನಿಧನಕ್ಕೆ ಮುರುಗೇಶ್ ನಿರಾಣಿ ಸಂತಾಪ ಸೂಚನೆ
Team Udayavani, Aug 19, 2020, 1:28 PM IST
ಬೆಂಗಳೂರು: ಮಾಜಿ ಸಚಿವ ಹಾಗೂ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುರುಗೇಶ್ ನಿರಾಣಿ, ಬಿಜೆಪಿ ಹಿರಿಯ ಮುಖಂಡರಾದ ಸಿ.ಗುರುಸ್ವಾಮಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ಹಿರಿಯ ಮುಖಂಡರಾದ ಸಿ. ಗುರುಸ್ವಾಮಿ ಅವರು ಅನುಭವಿ ಹಾಗೂ ಜನಾನುರಾಗಿ ರಾಜಕಾರಣಿಯಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರಲ್ಲದೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿಯ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇವರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ಅತ್ಯಂತ ದುಖದ ವಿಚಾರವಾಗಿದ್ದು, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುರುಗೇಶ್ ಆರ್ ನಿರಾಣಿ ಸಂತಾಪ ಸೂಚನೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.