ಸರಳವಾಗಿ ಗಣೇಶ ಪ್ರತಿಷ್ಠಾಪಿಸಿ
Team Udayavani, Aug 19, 2020, 3:16 PM IST
ಚಿಕ್ಕನಾಯಕನಹಳ್ಳಿ: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವವರು ನಾಲ್ಕು ಅಡಿ, ಮನೆಯಲ್ಲಿ ಪ್ರತಿಷ್ಠಾಪಿಸುವವರು 2 ಆಡಿ ಎತ್ತರ ಮೀರದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಲು ಅವಕಾಶ ನೀಡಲಾ ಗಿದೆ ಎಂದು ತಹಶೀಲ್ದಾರ್ ತೇಜಸ್ವಿನಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 19ರ ಸಂಕ್ರಾಮಿಕ ರೋಗದ ಹರಡುವಿಕೆಯ ಭೀತಿಯಿಂದ ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ನೀಡಿದೆ. ಸಂಘಟನೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು, ಮುನ್ಸಿಪಲ್, ಸ್ಥಳೀಯ ಆಡಳಿತ ಹಾಗೂ ಪೊಲೀಸ್‌ನಿಂದ ಅನುಮತಿ ಕಡ್ಡಾಯವಾಗಿದೆ. ಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು, ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು, ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಹಾಗೂ ಗಣಪತಿ ಮೆರವಣಿಗೆ ನಿಷೇಧಿಸಲಾಗಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸ್ಥಳ ಹಾಗೂ ದೇವಸ್ಥಾನವನ್ನು ಸ್ಯಾನಿಟೈಸೇಷನ್ ಮಾಡುವುದು, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು, ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕಾಪಾಡಬೇಕು. ಸರ್ಕಾರದ ಆದೇಶ ಪಾಲಿಸದಿದ್ದರೆ ಕಾನೂನು ಜರುಗಿಸಲಾಗುತ್ತದೆ ಎಂದು ತಿಳಿಸಿದರು. ಸಿಪಿಐ ವೀಣಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.