469 ಮನೆಗಳಿಗೆ ಮಂಜೂರಾತಿ

Team Udayavani, Aug 19, 2020, 4:06 PM IST

469 ಮನೆಗಳಿಗೆ ಮಂಜೂರಾತಿ

ಖಾನಾಪುರ: ಪಟ್ಟಣದ ಝೋಪಡಪಟ್ಟಿ ನಿವಾಸಿಗಳಿಗಾಗಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ 469 ಮನೆಗಳ ಮಂಜೂರಾತಿ ಪಡೆಯಲಾಗಿದೆ ಎಂದು ಶಾಸಕಿ ಡಾ| ಅಂಜಲಿ ನಿಂಬಾಳಕರ ನುಡಿದರು.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 360 ಚದುರ ಅಡಿ ಮನೆ ನಿರ್ಮಾಣಕ್ಕೆ 6.80 ಲಕ್ಷ ರೂ. ನೀಡಲಾಗುತ್ತದೆ. ಪಟ್ಟಣದ ಡೊಹರ ಗಲ್ಲಿ, ಹರಿಜನ ಗಲ್ಲಿ, ಶಾಹುನಗರ, ಡೊಂಬಾರಿ ಮಾಳದಲ್ಲಿ ಹೊಸ ಮನೆ ನಿರ್ಮಾಣಕ್ಕೆ ಅನುದಾನ ದೊರೆಯಲಿದೆ. ಈ ಕುರಿತು ಟೆಂಡರ್‌ ಕಾರ್ಯ ಪ್ರಗತಿಯಲ್ಲಿದೆ ಎಂದರು.

ತಾಲೂಕಿನ ತಾಲುಕಿನ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆ ಕೊಠಡಿಗಳ ನಿರ್ಮಾಣಕ್ಕೆ ನಬಾರ್ಡ್‌ ಯೋಜನೆಯಡಿ 15.12 ಕೋಟಿ ರೂ. ದೊರೆತಿದೆ. ಕಳೆದ ವರ್ಷ ಪ್ರವಾಹದಿಂದ ನಷ್ಟವಾದ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. 72 ಶಾಲೆಗಳಲ್ಲಿ 139 ಕೊಠಡಿ ನಿರ್ಮಿಸಲಾಗುವುದು. ಈ ವರ್ಷ 70 ಶಾಲಾ ಕೊಠಡಿಗಳು ಮತ್ತು 57 ಹೊಸ ಶಾಲೆಗಳಿಗೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ತಾಲೂಕಿನ ಪಾರಿಶ್ವಾಡ ಖಾನಾಪುರ ರಸ್ತೆ ಕಾಮಗಾರಿಗೆ 20 ಕೋಟಿ, ಕರಂಬಾಳ ಚಾಪಗಾಂವ ರಸ್ತೆ 523.00 ಲಕ್ಷ ರೂಪಾಯಿ, ಜಾಂಬೋಠಿ ಚಾಪಗಾಂವ 569.00 ಲಕ್ಷ ರೂಪಾಯಿ, ಹತ್ತರಗುಂಜಿ-ಡುಕ್ಕರವಾಡಿ ಮತ್ತು ಮುಡೆವಾಡಿ ಕಾಟಗಾಳಿ ಗ್ರಾಮದಿಂದ ಮೊದೆಕೋಪ್ಪ ಗ್ರಾಮ ರಸ್ತೆಗೆ 712 ಲಕ್ಷ ರೂ. ಮಂಜೂರಾಗಿದೆ ಎಂದರು. ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಕರಿಕಟ್ಟಿ ಗ್ರಾಮ ಆಯ್ಕೆ ಮಾಡಲಾಗಿದ್ದು ಆದರ್ಶ ಗ್ರಾಮದ ಎಲ್ಲ ಯೋಜನೆಗಳು ಈ ಗ್ರಾಮಕ್ಕೆ ಲಭಿಸಲಿವೆ ಎಂದು ತಿಳಿಸಿದರು.

ಮನೆ ಮನೆಗೆ ಜಲ ಜೀವನ ಮಿಶನ್‌ ಯೋಜನೆ ಅಡಿಯಲ್ಲಿ 58 ಗ್ರಾಮಗಳನ್ನು ಗುರುತಿಸಿದ್ದು, ಗಂಗೆ ಯೋಜನೆ ವೆಚ್ಚ 11 ಕೋಟಿ ಇದ್ದು ಸರ್ವೆ ನಂತರ ಇದು ಅಂತಿಮ ಹಂತದಲ್ಲಿ 25.00 ಕೋಟಿಯಾಗಲಿದೆ. ಏತ ನಿರಾವರಿ ಯೋಜನೆಗೆ 27.78 ಕೋಟಿ ಪ್ರಾಸ್ತಾವನೆಗೆ ಆಡಳಿತ ಮಂಜೂರಾತಿ ಸಿಕ್ಕಿದ್ದು, ಇಟಗಿ 7.22 ಕೋಟಿ, ಮಂಗೇನಕೋಪ್ಪ 2.60 ಕೋಟಿ, ಮುಗಳಿಹಾಳ 2.12 ಕೋಟಿ ಇದ್ದು ಒಟ್ಟು 15.71 ಕೋಟಿಯಾಗಲಿದೆ. ಖಾನಾಪುರ ಹೈಟೆಕ್‌ ಬಸ್‌ ನಿಲ್ದಾಣಕ್ಕೆ 7 ಕೋಟಿ ಮಂಜೂರಾಗಿದ್ದು, ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದೆ. ಮಳೆ ಪ್ರವಾಹದಲ್ಲಿ ಹಾನಿಗಿಡಾದ 16 ಅಂಗನವಾಡಿ ಕಟ್ಟಡಗಳಿಗೆ ನಬಾರ್ಡ್‌ ಅಡಿಯಲ್ಲಿ ಪ್ರತಿ ಕಟ್ಟಡಕ್ಕೆ 17 ಲಕ್ಷದಂತೆ ಒಟ್ಟು 2.72 ಕೋಟಿ ದೊರೆತಿದೆ. ಹೆಸ್ಕಾಂ ಯೋಜನೆಯಲ್ಲಿ ಕೊಡಚವಾಡ 110ಕೆವಿಎ ಸಬ್‌ಡಿವಿಜನ್‌ ನಿರ್ಮಾಣಕ್ಕೆ 10 ಕೋಟಿ, ಹಲಸಿ 33 ಕೆವಿಎ ಕೇಂದ್ರ ನಿರ್ಮಾಣಕ್ಕೆ 4 ಕೋಟಿ, ಬೈಲೂರ 33 ಕೆವಿಎ ಸಬ್‌ ಸ್ಟೇಶನ್‌ಗೆ 4 ಕೋಟಿ ರೂ. ಮಂಜೂರಾತಿ ದೊರಕಿದೆ. ಮಲೆನಾಡ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸಿಸಿ ರಸ್ತೆ ಮತ್ತು ಪೇವರ್‌ ನಿರ್ಮಾಣಕ್ಕೆ ಅವರೊಳ್ಳಿ ಮತ್ತು ಬೆಡರಹಟ್ಟಿ ಪರಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ 17 ಲಕ್ಷ ರೂ.ಅನುಮೋದನೆ ದೊರಕಿದೆ. ಜಾಂಬೋಟಿಯಿಂದ ಚಿಗುಳಿ ಸಂಪರ್ಕ ರಸ್ತೆಗೆ 73.00 ಲಕ್ಷ ರೂಪಾಯಿ ಮಂಜುರಾತಿ ದೊರಕಿದೆ ಎಂದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.