ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರದ ಕಾರ್ಯರಂಭಕ್ಕೆ ಶೀಘ್ರ ಅನುಮತಿ

Team Udayavani, Aug 19, 2020, 4:54 PM IST

ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರದ ಕಾರ್ಯರಂಭಕ್ಕೆ ಶೀಘ್ರ ಅನುಮತಿ

ನವದೆಹಲಿ : ಬಹುದಿನಗಳ ಬೇಡಿಕೆಯಾದ ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರ ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೋಕ್ರಿಯಾಲ್ ಆಶ್ವಾಸನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕನ್ನಡ, ಸಂಸ್ಕೃತಿ, ಯುವಜನ ಕ್ರೀಡೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಡಾ.ರಮೇಶ್ ಪೋಕ್ರಿಯಾಲ್ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಶಾಶ್ವತ ಕನ್ನಡ ಅಧ್ಯಯನ ಪೀಠದ ಕಟ್ಟಡ ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೋಕ್ರಿಯಾಲ್ ಅವರು, ಕನ್ನಡಿಗರ ಬಹುದಿನಗಳ ಬೇಡಿಕೆಯಂತೆ ಆದಷ್ಟು ಶೀಘ್ರದಲ್ಲಿ ಕಟ್ಟಡ ಪ್ರಾರಂಭಿಸಲು ಕೇಂದ್ರದಿಂದ ಅನುಮತಿ ನೀಡಲಾಗುವುದು. ಇನ್ನು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂಬ ಭರವಸೆ ನೀಡಿದರು.

ರಾಜ್ಯ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಇಲಾಖೆ ಕೈ ಸೇರಿದೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯ ಅನುಮೋದನೆ ಪಡೆಯಲಾಗುವುದು. ಬಳಿಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ನೆರವು ಕೇಂದ್ರದಿಂದ ಸಿಗಲಿದೆ ಎಂದು ಅಭಯ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶಾಶ್ವತ ಕನ್ನಡ ಶಾಸ್ತ್ರೀಯ ಅಧ್ಯಯನ ಪೀಠ ಪ್ರಾರಂಭಿಸಲು ಸರ್ಕಾರ ಉತ್ಸುಕತೆ ತೋರಿರುವುದು ನನ್ನ ಗಮನಕ್ಕೆ ಬಂದಿದೆ. ವಿವಿಯು ಜಾಗವನ್ನು ಹಸ್ತಾಂತರ ಮಾಡಲು ತೀರ್ಮಾನಿಸಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರದಿಂದ ವಿಳಂಬವಾಗದಂತೆ ಎಷ್ಟು ಸಾಧ್ಯವೋ ಅಷ್ಟು ಶೀಘ್ರವಾಗಿ ಅನುಮತಿ ನೀಡುವುದಾಗಿ ಹೇಳಿದ್ದಾರೆ.

ಪ್ರಸ್ತುತ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವು ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಶೋಧನಾ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ಕಾರ್ಯ ಚಟುವಟಿಕೆಗಳು ನಡೆಯುವಂತೆ ಶಾಶ್ವತ ಕಟ್ಟಡ ನಿರ್ಮಾಣ ಮಾಡಬೇಕೆಂಬುದು ಕನ್ನಡಿಗರ ಬಹುದಿನಗಳ ಬೇಡಿಕೆಯಾಗಿದೆ. ಈ ಕನಸನ್ನು ನನಸು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಬಹು ಉದ್ದೇಶಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ.ಇದರಿಂದಾಗಿ ದೇಶದ ಪ್ರತಿಯೊಂದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮನ್ನಣೆ ಸಿಗಲಿದೆ.ನಾಡು, ನುಡಿ, ಇತಿಹಾಸ, ಪರಂಪರೆಗಳು, ಸಂಪ್ರಾದಾಯ ಸೇರಿದಂತೆ ಸ್ಥಳೀಯ ಸೊಗಡಿಗೆ ಎಲ್ಲಿಯೂ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಹೊಸ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆನ್ನುವುದು ಕೇಂದ್ರ ಸರ್ಕಾರ ಆಕಾಂಕ್ಷೆಯಾಗಿದೆ. ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿಸುವುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಐದು ವರ್ಷದ ಒಳಗಿನ ಮಕ್ಕಳಿಗೆ ‘ಬಾಲವಾಟಿಕಾ’ ಆರಂಭಿಸುವುದು, ಹಂತ-ಹಂತವಾಗಿ ಕಲಿಕೆ ಆಗಲೆಂಬ ಕಾರಣಕ್ಕೆ 10+2 ಪದ್ಧತಿಯ ಬದಲಿಗೆ 5+3+3+4 ಪದ್ಧತಿ ಪರಿಚಯ ಮಾಡಿಕೊಡಲಾಗುತ್ತಿದೆ. ಆರನೇ ತರಗತಿ ನಂತರ ವೃತ್ತಿಪರ ಶಿಕ್ಷಣ ಕಲಿಕೆ ಪ್ರಾರಂಭಗೊಳಿಸುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಹೊಸ ಶಿಕ್ಷಣ ನೀತಿಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆಗೆ ಮಹತ್ವ ಕೊಡಲಾಗಿದೆ. ಬಹುವಿಧದ ಪರೀಕ್ಷೆಗೆ ತೀರ್ಮಾನ ಮಾಡಲಾಗಿದೆ. ವಾರ್ಷಿಕ, ಅರ್ಧವಾರ್ಷಿಕ, ಮಾಡ್ಯುಲ್ ಮಾದರಿ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯ ಪ್ರಾಮುಖ್ಯತೆ ಕಡಿಮೆ ಮಾಡುವ ಚಿಂತನೆಯಿದೆ. ವರ್ಷದಲ್ಲಿ ಎರಡು ಬಾರಿ ಮುಖ್ಯ ಪರೀಕ್ಷೆ ಮಾಡಲಾಗುವುದು. ಸಮಗ್ರ ಫಲಿತಾಂಶ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಹೀಗಾಗಿ ಮೂರು ಹಂತದಲ್ಲಿ ವಿದ್ಯಾರ್ಥಿಯ ಸಾಮಥ್ರ್ಯ ಅಳೆಯುವ ರಿಪೋರ್ಟ್ ಕಾರ್ಡ್ ಕೊಡಲಾಗುವುದು. ಜೊತೆಗೆ ಉನ್ನತ ಶಿಕ್ಷಣ ಪೂರ್ತಿಯಾಗುವವರೆಗೆ ಒಂದೇ ಮಾದರಿಯ ರಿಪೋರ್ಟ್ ನೀಡುವ ಬಗ್ಗೆ ಹೊಸ ಶಿಕ್ಷಣ ನೀತಿಯಲ್ಲಿದೆ.ಕನ್ನಡ ಭಾಷಾ ಬೆಳವಣಿಗೆಗೆ ಇದರಂದ ಸಾಕಷ್ಟು ಅನುಕೂಲವಾಗಲಿದ್ದು,ಕರ್ನಾಟ ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಸಚಿವರು ಆಶಿಸಿದರು.

ಇದೇ ವೇಳೆ ಸಚಿವ ಸಿ.ಟಿ.ರವಿ ಅವರು ಈವರೆಗೂ ಇಲಾಖೆವತಿಯಿಂದ ಕೈಗೊಂಡಿರುವ ಕಾರ್ಯ ಚಟುವಟಿಕೆಯ ವಿಸ್ತೃತ ವರದಿಯನ್ನು ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು.

ತಮಿಳುನಾಡಿನಲ್ಲಿ ಪೂರ್ಣ ಪ್ರಮಾಣದ ಅಧ್ಯಯನ ಪೀಠ ಆರಂಭವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತಿರುವುದರಿಂದ ಅನೇಕ ಅವಕಾಶಗಳು ಲಭಿಸಿವೆ. ಇದೇ ರೀತಿ ಕರ್ನಾಟಕಕ್ಕೂ ಇದರ ಪ್ರಯೋಜನ ಸಿಗಬೇಕೆಂದು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಗೆ ಕೇಂದ್ರೀಯ ಸ್ಥಾನಮಾನ ಸಿಗಬೇಕೆಂದು ಕರ್ನಾಟಕ ಜನತೆಯ ಒತ್ತಾಸೆಯಾಗಿದೆ. ಪ್ರಾಚೀನ ಭಾರತೀಯ ಪರಂಪರೆಯನ್ನು ಕಾಪಾಡಿ ಪೊಷಿಸುವುದರಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಯಾವುದಕ್ಕೂ ಕಡಿಮೆ ಇಲ್ಲ. ಆದಷ್ಟು ಶೀಘ್ರ ಕೇಂದ್ರ ಸರ್ಕಾರ ಇದಕ್ಕೆ ಅನುಮೋದನೆ ನೀಡಿದರೆ ಬಹುದಿನಗಳ ಕನಸು ಈಡೇರುತ್ತದೆ ಎಂದು ಮನವರಿಕೆ ಮಾಡಿದ್ದಾರೆ.

ಇದೇ ವೇಳೆ ಮೂರು ಸಮಿತಿಗೆ ಮುಖ್ಯಸ್ಥರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಸಚಿವ ಸಿ.ಟಿ.ರವಿ ಅವರು ಮನವಿ ಮಾಡಿದರು.ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.