ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆಗೆ ವಿರೋಧ


Team Udayavani, Aug 19, 2020, 6:53 PM IST

cm-tdy-1

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸುವುದನ್ನು ವಿವಿಧ ಸಂಘಟನೆಗಳ ಮುಖಂಡರು ತೀವ್ರವಾಗಿ ವಿರೋಧಿಸಿದರು.

ಮಂಗಳವಾರ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಮುಖಂಡರ ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತವಾಯಿತು. ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಬೋಜೇಗೌಡ ಮಾತನಾಡಿ, ಸಂರಕ್ಷಿತಮೀಸಲು ಪ್ರದೇಶದ ವ್ಯಾಪ್ತಿಯಲ್ಲಿರುವ ಜನರ ಆತಂಕ ನಿವಾರಿಸುವುದು ಹಾಗೂ ಸ್ಥಳೀಯ ನಿವಾಸಿಗಳ ಒತ್ತಾಯಗಳನ್ನು ಈಡೇರಿಸಲು ಪ್ರಮುಖ ಆದ್ಯತೆ ನೀಡಬೇಕೆಂದು ತಿಳಿಸಿದರು.

ಸಂರಕ್ಷಿತ ಮೀಸಲು ಪ್ರದೇಶದ ಘೋಷಣೆಯಿಂದ ಆ ಭಾಗದ ಹಲವಾರು ಹಳ್ಳಿಗಳ ಜನರಿಗೆ ಆಗುವ ಸಮಸ್ಯೆಯ ಬಗ್ಗೆ ಅಲ್ಲಿನ ನಿವಾಸಿಗಳಲ್ಲಿ ಆತಂಕವಿದೆ. ಜನ-ಜಾನುವಾರು ಮುಂದಿನ ದಿನಗಳಲ್ಲಿ ಬದುಕಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಾರದು. ಈಗಾಗಲೇ ಹಲವು ಅರಣ್ಯಸಂರಕ್ಷಣಾ ಯೋಜನೆಗಳ ಹೆಸರಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೇಲೆ ಸದಾ ತೂಗುಕತ್ತಿ ನೇತಾಡುತ್ತಿದೆ. ಜನರ ಬದುಕು ಆತಂಕದಲ್ಲಿದೆ ಎಂದರು.

ಚಿಕ್ಕಮಗಳೂರು ಉಪಸಂರಕ್ಷಣಾಕಾರಿ ಜಗದೀಶ್‌ ಮಾತನಾಡಿ, ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶದಲ್ಲಿ ಭವಿಷ್ಯದಲ್ಲಿ ಸಾರ್ವಜನಿಕ ಉಪಯೋಗಕ್ಕೆ ಹಾಗೂ ಇತರೆ ಸರ್ಕಾರಿ ಉದ್ದೇಶಗಳಿಗೆ ಬೇಕಾಗುವ ಕಂದಾಯಭೂಮಿ ಇಲ್ಲವಾಗುತ್ತದೆ ಎಂಬ ಆಕ್ಷೇಪಣೆ ಬಂದಿದ್ದರಿಂದ ನಮೂನೆ 50, 53, 57 ಹಾಗೂ 94ಸಿ ಯಲ್ಲಿ ಸ್ವೀಕೃತಗೊಂಡಿರುವ ಅರ್ಜಿಗಳನ್ನು ಹಾಗೂ ಅದರ ವಿಸ್ತೀರ್ಣದ ಬಗ್ಗೆ ನಿಖರ ಮಾಹಿತಿಯೊಂದಿಗೆ ಕಂದಾಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಅರಣ್ಯ, ಕಂದಾಯ ಭೂಮಾಪನಾ ಇಲಾಖೆಯವರು ದಾಖಲೆಗಳನ್ನು ಜಂಟಿಯಾಗಿ ಪರಿಶೀಲಿಸಿ ಮುಂದಿನ ಸಭೆಗೆ ಸಲ್ಲಿಸಲು ಇದೇ ಜು.28 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಕುರಿತಾದ ಸಭೆಯಲ್ಲಿ ಸೂಚಿಸಲಾಗಿದೆ ಎಂದರು.

2017ರ ಏಪ್ರಿಲ್‌ 27 ರಂದು ಮುಳ್ಳಯ್ಯನಗಿರಿ ಮೀಸಲು ಪ್ರದೇಶವೆಂದು ಘೋಷಿಸಿರುವುದರಿಂದ ಮುಂದಿನ ದಿನಗಳಲ್ಲಿ ಪರಿಸರ ನಾಶದಿಂದ ಉಂಟಾಗುವ ಸಮಸ್ಯೆಗಳನ್ನು ತಪ್ಪಿಸಬಹುದೆಂದು ಶಾಸಕರಾದ ಸಿ.ಟಿ.ರವಿಯವರು ಚಿಕ್ಕಮಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಶಿಫಾರಸ್ಸುಪತ್ರ ಬರೆದಿದ್ಯಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು.

ಯೋಜನಾ ವ್ಯಾಪ್ತಿಯ ಪ್ರದೇಶದ ಜನರ ಪರವಾಗಿ ವಿವಿಧ ರಾಜಕೀಯ ಮುಖಂಡರಾದ ಎಚ್‌.ಎಚ್‌. ದೇವರಾಜ್‌, ಎಂ.ಎಲ್‌. ಮೂರ್ತಿ, ಗಾಯತ್ರಿ ಶಾಂತೇಗೌಡ, ಕೆ.ಟಿ. ರಾಧಾಕೃಷ್ಣ, ಬಿಜೆಪಿ ಜಾಗರ ಹೋಬಳಿ ಅಧ್ಯಕ್ಷ ರವಿ, ರೇಣುಕಾರಾಧ್ಯ ಮಾತನಾಡಿದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kottigehara

Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.