ಕೋವಿಡ್ ಕಳವಳ-ಆಗಸ್ಟ್ 19: 8642 ಹೊಸ ಪ್ರಕರಣ ; 7201 ಡಿಸ್ಚಾರ್ಜ್ ; 126 ಸಾವು
ಒಟ್ಟು ಚೇತರಿಕೆ ಪ್ರಮಾಣ 1 ಲಕ್ಷದ 64 ಸಾವಿರ ; ಸಕ್ರಿಯ ಪ್ರಕರಣಗಳ ಸಂಖ್ಯೆ 81 ಸಾವಿರಕ್ಕೆ ಏರಿಕೆ
Team Udayavani, Aug 19, 2020, 8:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8642 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7201 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 126 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಗಡಿ ಸಮೀಪಿಸಿದ್ದು, ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,49,590 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಒಂದೂವರೆ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,64,150 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81,097 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4327 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 704 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2804 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಶಿವಮೊಗ್ಗ (915), ಮೈಸೂರು (562), ಬಳ್ಳಾರಿ (537), ಬೆಳಗಾವಿ (379), ಉಡುಪಿ (375), ಧಾರವಾಡ (253), ದಾವಣಗೆರೆ (228), ಹಾಸನ (228), ದಕ್ಷಿಣ ಕನ್ನಡ (234), ಮಂಡ್ಯ (185), ಬಾಗಲಕೋಟೆ (163), ಕಲಬುರಗಿ (154), ರಾಯಚೂರು (153), ಗದಗ (149), ಕೊಪ್ಪಳ (133), ಹಾವೇರಿ (137), ರಾಮನಗರ (126), ಉತ್ತರ ಕನ್ನಡ (119), ಚಾಮರಾಜನಗರ (111), ವಿಜಯಪುರ (107) ಮತ್ತು ಚಿಕ್ಕಮಗಳೂರು (100) ಜಿಲ್ಲೆಗಳಿವೆ.
ಇನ್ನುಳಿದಂತೆ, ತುಮಕೂರು (94), ಕೋಲಾರ (86), ಚಿಕ್ಕಬಳ್ಳಾಪುರ (73), ಬೆಂಗಳೂರು ಗ್ರಾಮಾಂತರ (68), ಚಿತ್ರದುರ್ಗ (47), ಬೀದರ್ (43), ಯಾದಗಿರಿ (41) ಮತ್ತು ಕೊಡಗು (38) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 30,399 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 32,686 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 63,085 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 5,82,124 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 16,15,135 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 21,97,259 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.