ಕೋವಿಡ್ ಪತ್ತೆಗೆ ತಪಾಸಣೆ ಹೆಚ್ಚಿಸಿ: ಡಿಸಿ ಕೆ.ಬಿ.ಶಿವಕುಮಾರ್ ಸೂಚನೆ
Team Udayavani, Aug 20, 2020, 12:20 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚಲು ತಪಾಸಣೆ ಪ್ರಮಾಣ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ
ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ಜಿಲ್ಲಾಭವನ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಗಂಟಲು ದ್ರವ
ಸಂಗ್ರಹಿಸುವ ಕಾರ್ಯಕ್ಕೆ 19 ಸಂಚಾರಿ ತಂಡಗಳಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ 63 ತಪಾಸಣಾ ತಂಡಗಳಿವೆ.
ಶಿವಮೊಗ್ಗ ನಗರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಗಂಟಲು ದ್ರವ ಸಂಗ್ರಹಿಸುವ ಕಾರ್ಯ ಆರಂಭಿಸಬೇಕು. ಇದಕ್ಕಾಗಿ ಐದು ಸಂಚಾರಿ ತಂಡಗಳನ್ನು ಸಜ್ಜುಗೊಳಿಸುವಂತೆ ಅವರು ತಿಳಿಸಿದರು. ಪ್ರಸ್ತುತ ನಿತ್ಯ 1200 ಸ್ಯಾಂಪಲ್ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1500ಕ್ಕೆ ಹೆಚ್ಚಿಸಬೇಕು. ಇದೇ ರೀತಿ ಆರೆಟಿ ಮೂಲಕ 600 ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು 1200ಕ್ಕೆ ಹೆಚ್ಚಿಸಬೇಕು.
ಪ್ರತಿದಿನ ಮೆಗ್ಗಾನ್ ಆಸ್ಪತ್ರೆಯಲ್ಲಿ 500, ವಿಡಿಆರ್‌ಎಲ್‌ನಲ್ಲಿ 500 ಪರೀಕ್ಷೆ ಗುರಿ ಸಾಧಿಸಬೇಕು. ಒಂದೆರಡು ದಿನಗಳಲ್ಲಿ
ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಗಂಟಲು ದ್ರವ ಪರೀಕ್ಷೆ ಆರಂಭವಾಗಲಿದ್ದು, ಅಲ್ಲಿಯೂ ಪ್ರತಿ ದಿನ 500 ಪರೀಕ್ಷೆ
ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.
ಹೋಂ ಕ್ವಾರಂಟೈನ್ ಪ್ರಮಾಣ ಹೆಚ್ಚಳ: ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರಂಟೈನ್ ಪ್ರಮಾಣ ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಹೋಂ ಕ್ವಾರಂಟೈನ್ ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ, ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು. ಕೊರೊನಾ ಪಾಸಿಟಿವ್ ವ್ಯಕ್ತಿಗಳ ಆರೋಗ್ಯ ತಪಾಸಣೆಗಾಗಿ ಆರಂಭಿಸಲಾಗಿರುವ ಟ್ರಯಾಜ್ ಕೇಂದ್ರಗಳಲ್ಲಿ ಸಂಬಂಧಪಟ್ಟ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಕನಿಷ್ಟ 6 ಮಂದಿ ಹಾಗೂ ನಗರ ಪ್ರದೇಶದಲ್ಲಿ ಕನಿಷ್ಟ 10 ಮಂದಿ ಪ್ರಾಥಮಿಕ ಸೋಂಕಿತರನ್ನು ಗುರುತಿಸಿ ಅವರ ಮೇಲೆ ನಿಗಾ ಇರಿಸಬೇಕು. ಕೋವಿಡ್ ಕೇರ್ ಸೆಂಟರ್‌ನಲ್ಲಿ ನಿಯೋಜಿಸಲಾಗಿರುವ ಆಯುರ್ವೇದಿಕ್ ವೈದ್ಯರು ಕರ್ತವ್ಯಕ್ಕೆ ತೆರಳಲು ಹಿಂದೇಟು
ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಪಂ ಸಿಇಒ ಎಂ.ಎಲ್.ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.