‘ಪ್ರಿಯ ಮಹೇಂದ್ರ..‘ ಮಾಜಿ ನಾಯಕನಿಗೆ ಸುದೀರ್ಘ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ
Team Udayavani, Aug 20, 2020, 4:06 PM IST
ಹೊಸದಿಲ್ಲಿ: “ ಪ್ರಿಯ ಮಹೇಂದ್ರ, ಆಗಸ್ಟ್ 15ರಂದು ಎಂದಿನ ನಿರ್ಭೀತ ಶೈಲಿಯಲ್ಲಿ ನೀವು ಪೋಸ್ಟ್ ಮಾಡಿದ ಸಣ್ಣ ವಿಡಿಯೋ ಇಡೀ ರಾಷ್ಟ್ರವನ್ನೇ ಚರ್ಚೆಯ ಕೇಂದ್ರವನ್ನಾಗಿಸಲು ಕಾರಣವಾಯಿತು. ದೇಶದ 130 ಕೋಟಿ ಜನರು ನಿರಾಶರಾದರು ಆದರೆ ಒಂದುವರೆ ದಶಕದಿಂದ ಭಾರತೀಯ ಕ್ರಿಕೆಟ್ ಗೆ ನೀವು ಸಲ್ಲಿಸಿರುವ ಸೇವೆಗೆ ಖಂಡಿತ ಕೃತಜ್ಞರಾಗಿರುತ್ತಾರೆ” ಹೀಗೆಂದು ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರು ಆಗಸ್ಟ್ 15ರಂದು ಸಂಜೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಭಾರತೀಯ ಕ್ರಿಕೆಟ್ ಗೆ ಧೋನಿ ನೀಡಿರುವ ಕೊಡುಗೆಗಾಗಿ ಪ್ರಧಾನಿ ಮೋದಿ ಎರಡು ಪುಟಗಳ ಸುದೀರ್ಘ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
ಕಠಿಣ ಪರಿಸ್ಥಿತಿಯಲ್ಲಿ ದಿಟ್ಟವಾಗಿ ಆಡಿ ಪಂದ್ಯವನ್ನು ಮುಗಿಸುತ್ತಿದ್ದರು. ಅದರಲ್ಲೂ ವಿಶೇಷವಾಗಿ 2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೀವು ಬಾರಿಸಿದ ಸಿಕ್ಸರ್ ಜನಮಾನಸದಲ್ಲಿ ಸದಾ ಇರುತ್ತದೆ ಎಂದು ಪ್ರಧಾನಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಧೋನಿ, ಒಬ್ಬ ಕ್ರೀಡಾಪಟು, ಕಲಾವಿದ, ಸೈನಿಕರು ಮೆಚ್ಚುಗೆಗಾಗಿ ಹಂಬಲಿಸುತ್ತಾರೆ. ತಮ್ಮ ಪರಿಶ್ರಮ, ತ್ಯಾಗ ಮನ್ನಣೆಗೆ ಪಾತ್ರವಾಗಬೇಕು ಎಂದು ಅಪೇಕ್ಷಿಸುತ್ತಾರೆ. ತಮ್ಮ ಮೆಚ್ಚುಗೆ ಮತ್ತು ಶುಭಾಶಯಗಳಿಗೆ ಧನ್ಯವಾಗಳು ಎಂದು ಟ್ವೀಟ್ ಮಾಡಿದ್ದಾರೆ.
An Artist,Soldier and Sportsperson what they crave for is appreciation, that their hard work and sacrifice is getting noticed and appreciated by everyone.thanks PM @narendramodi for your appreciation and good wishes. pic.twitter.com/T0naCT7mO7
— Mahendra Singh Dhoni (@msdhoni) August 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.