ಚಾಮರಾಜನಗರ: ಕೋವಿಡ್ ಸೋಂಕಿಗೆ ಇಬ್ಬರು ಸಾವು, 118 ಹೊಸ ಪ್ರಕರಣ ದೃಢ
Team Udayavani, Aug 20, 2020, 6:16 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 118 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 36 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ 65 ವರ್ಷದ ವೃದ್ಧರು ಆ. 14ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ನಗರದ 60 ವರ್ಷದ ವೃದ್ಧೆ ಆ. 14ರಂದು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ಮೃತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1905ಕ್ಕೇರಿದೆ. ಇದರಲ್ಲಿ 1403 ಮಂದಿ ಗುಣಮುಖರಾಗಿದ್ದಾರೆ. 469 ಸಕ್ರಿಯ ಪ್ರಕರಣಗಳಿವೆ. 36 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಚಾಮರಾಜನಗರ ತಾಲೂಕಿನಿಂದ 52, ಗುಂಡ್ಲುಪೇಟೆ ತಾಲೂಕಿನಿಂದ 32, ಹನೂರು ತಾಲೂಕಿನಿಂದ 14, ಕೊಳ್ಳೇಗಾಲ 09, ಯಳಂದೂರು 09, ಅಂತರ ಜಿಲ್ಲೆಯ 02 ಪ್ರಕರಣಗಳು ಪತ್ತೆಯಾಗಿವೆ.
ಗುರುವಾರ 22 ಮಂದಿಯನ್ನು ಹೋಂ ಐಸೋಲೇಷನ್‌ಗೊಳಪಡಿಸಲಾಗಿದೆ. ಒಟ್ಟು 181 ಮಂದಿಯನ್ನು ಹೋಂ ಐಸೋಲೇಷನ್‌ಗೊಳಪಡಿಸಲಾಗಿದ್ದು, 13 ಮಂದಿ ಗುಣಮುಖರಾಗಿ, ಹಾಲಿ 168 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದಿನ ಪ್ರಕರಣಗಳು -118
ಇಂದು ಗುಣಮುಖ -36
ಒಟ್ಟು ಗುಣಮುಖ -1403
ಇಂದಿನ ಸಾವು -2
ಒಟ್ಟು ಸಾವು -33
ಸಕ್ರಿಯ ಪ್ರಕರಣಗಳು -469
ಒಟ್ಟು ಸೋಂಕಿತರು -1905
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.