ವಿಧ್ವಂಸಕ ಕೃತ್ಯಗಳ ಸಂಚು; ಎನ್‌ಐಎ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ

Team Udayavani, Aug 21, 2020, 6:30 AM IST

ವಿಧ್ವಂಸಕ ಕೃತ್ಯಗಳ ಸಂಚು; ಎನ್‌ಐಎ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ

ಸಾಂದರ್ಭಿಕ ಚಿತ್ರ

ಬೆಂಗಳೂರು: ಇಸ್ಲಾಮಿಕ್‌ ಸ್ಟೇಟ್ಸ್‌ನ (ಐಸಿಸ್‌) ಉಗ್ರರಿಗೆ ವೈದ್ಯಕೀಯ ಸೇವೆ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಕಲ್ಪಿಸಲು ಗೌಪ್ಯವಾಗಿ ಸಂಪರ್ಕಿಸಲು ಪ್ರತ್ಯೇಕ ಆ್ಯಪ್‌ಗ್ಳನ್ನು ಅಭಿವೃದ್ಧಿಪಡಿಸುತ್ತಿದ್ದ ಡಾ| ಅಬ್ದುಲ್‌ ರೆಹಮಾನ್‌ ತನ್ನ ಸಂಘಟನೆ ಜತೆ ಸೇರಿ ಬೆಂಗಳೂರು ಸೇರಿ ವಿಶ್ವಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಎಂಬ ಸ್ಫೋಟಕ ಸಂಗತಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಭಾರತದ ಟೆಲಿಗ್ರಾಂ ಮತ್ತು ವಿದೇಶದ ತ್ರೀಮಾ ಆ್ಯಪ್‌ ಮೂಲಕ ಮಾತ್ರ ಸಿರಿಯಾದ ಉಗ್ರರನ್ನು ಸಂಪರ್ಕಿಸುತ್ತಿದ್ದ ವೈದ್ಯ, ಬೆಂಗಳೂರು ಸೇರಿ ದಕ್ಷಿಣ ಭಾರತದ ಕೆಲವೆಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ. ಮುಖ್ಯವಾಗಿ ಆ. 5ರಂದು ನಡೆದ ಅಯೋಧ್ಯೆ ಕಾರ್ಯಕ್ರಮದ ಮೊದಲು ಅಥವಾ ಅನಂತರ ಕೃತ್ಯ ನಡೆಸಲು ಚಿಂತಿಸಿದ್ದ. ಆದರೆ, ದೇಶದೆಲ್ಲೆಡೆ ಬಿಗಿ ಭದ್ರತೆಯಿದ್ದ ಕಾರಣ ಸಾಧ್ಯವಾಗಿಲ್ಲ. ಮತ್ತೂಂದೆಡೆ ಅಮೆರಿಕದಿಂದ ಬಂದ ಎಚ್ಚರಿಕೆ ಸಂದೇಶದಿಂದ ದೇಶದ ಎಲ್ಲ ರಾಜ್ಯಗಳ ಗುಪ್ತಚರ ಸಂಸ್ಥೆಗಳು ಅಲರ್ಟ್‌ ಆಗಿದ್ದವು. ಹೀಗಾಗಿ ಯಾವುದೇ ವಿಧ್ವಂಸಕ ಕೃತ್ಯ ಸಾಧ್ಯವಾಗಿಲ್ಲ.

ಪೂರಕ ಸಾಕ್ಷ್ಯ ಲಭ್ಯ
ಕೃತ್ಯಕ್ಕೆ ಪೂರಕವಾಗಿ ಆತನ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ನಲ್ಲಿ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ. ಜತೆಗೆ ಆತನೇ ಅಭಿವೃದ್ಧಿಪಡಿಸಿದ್ದ ಎರಡು ಆ್ಯಪ್‌ಗ್ಳಲ್ಲಿಯೂ ಕೆಲವು ಮಾಹಿತಿ ಪತ್ತೆಯಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಕಾಶ್ಮೀರ ದಂಪತಿ ಜತೆ ಸಂಪರ್ಕ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಐಸಿಸ್‌ ಸೋದರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್‌ ಖೋರಾಸಾನ್‌ ಪ್ರಾಂತ್ಯ (ಐಎಸ್‌ಕೆಪಿ) ಸಂಚು ರೂಪಿಸಿತ್ತು. ಈ ಮಧ್ಯೆ ಕೆಲವು ತಿಂಗಳ ಹಿಂದೆ ನಡೆದ ಎನ್‌ಐಎ ಕಾರ್ಯಾಚರಣೆಯಲ್ಲಿ ಕಾಶ್ಮೀರ ಮೂಲದ ಜಹಾನ್‌ಝೈಬ್‌ ಸಾಮಿ ವಾನಿ ಹಾಗೂ ಆತನ ಪತ್ನಿ ಹೀನಾ ಬಶೀರ್‌ ಬೇಗ್‌ರನ್ನು ದಿಲ್ಲಿಯಲ್ಲಿ ಬಂಧಿಸಲಾಗಿತ್ತು. ಈ ದಂಪತಿಗೆ ತಿಹಾರ್‌ ಜೈಲಿನಲ್ಲಿರುವ ಮತ್ತೂಬ್ಬ ಐಸಿಸ್‌ ಮುಖಂಡ ಅಬ್ದುಲ್‌ ಬಶೀತ್‌ ಜತೆ ಸಂಪರ್ಕ ಬೆಳಕಿಗೆ ಬಂದಿತ್ತು. ಬಳಿಕ ಕಾಶ್ಮೀರದ ದಂಪತಿ ಸಂಪರ್ಕ ಜಾಲವನ್ನು ಮತ್ತಷ್ಟು ಶೋಧಿಸಿದಾಗ ಪುಣೆ ಹಾಗೂ ಬೆಂಗಳೂರಿನಲ್ಲಿ ಅವರ ಜಾಲ ಹರಡಿರುವುದು ಗೊತ್ತಾಗಿ ವೈದ್ಯನನ್ನು ಬಂಧಿಸಲಾಗಿದೆ.

ಸಿರಿಯಾಕ್ಕೂ ಹೋಗಿದ್ದ
ಮುಸ್ಲಿಂ ಮೂಲಭೂತವಾದದಿಂದ ಪ್ರಭಾವಿತನಾಗಿದ್ದ ವೈದ್ಯನಿಗೆ ಐಸಿಎಸ್‌ ಮೇಲೆ ವಿಪರೀತ ಒಲವು ಬೆಳೆಯಿತು. ಎಂಬಿಬಿಎಸ್‌ ಮುಗಿಸಿದ ಬಳಿಕ 2014ರಲ್ಲಿ ಐಸಿಸ್‌ ತವರೂರು ಸಿರಿಯಾಕ್ಕೆ ಹೋಗಿ ಅಲ್ಲಿನ ವೈದ್ಯಕೀಯ ಶಿಬಿರಗಳಲ್ಲಿ ಭಾಗವಹಿಸಿ ಗಾಯಾಳು ಉಗ್ರರಿಗೆ ಚಿಕಿತ್ಸೆ ನೀಡಿದ್ದ ಎಂದುಎನ್‌ಐಎ ಮೂಲಗಳು ತಿಳಿಸಿವೆ.

ಇನ್ನೊಂದು ಮೂಲದ ಪ್ರಕಾರ, ಆರೋಪಿಯು 22 ವರ್ಷ ವಯಸ್ಸಿನಲ್ಲೇ, ಅಂದರೆ ವಿದ್ಯಾರ್ಥಿ ಯಾಗಿದ್ದಾಗಲೇ ಸಿರಿಯಾ ದೇಶದ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ.  ಎನ್‌ಐಎ ತಂಡ ಆತನ ಚಲನವಲನದ ಬಗ್ಗೆ ಕಳೆದ ಎರಡು ವರ್ಷಗಳಿಂದ ಕಣ್ಣಿಟ್ಟಿತ್ತು. ಇತ್ತೀಚೆಗೆ ಆತ ನೇರವಾಗಿ ಭಯೋತ್ಪಾದನ ಸಂಚು ಚಟುವಟಿಕೆಗಳಲ್ಲಿ ಭಾಗಿಯಾಗಿ ರುವುದು ತಿಳಿದು ಬಂದ ಬಳಿಕ ಆತನನ್ನು ಬಂಧಿಸಲಾಯಿತು. ಆತನ ಜತೆ ಇನ್ನೂ ನಾಲ್ಕು ಮಂದಿ ಸಿರಿಯಾ ಕ್ಯಾಂಪಿಗೆ ತೆರಳಿದ್ದು, ಅವರ ಚಲನವಲನದ ಬಗ್ಗೆಯೂ ನಿಗಾ ವಹಿಸಲಾಗಿದೆ

ಕೋಡ್‌ ವರ್ಡ್‌ನಲ್ಲಿ ಸಂವಹನ
ವೈದ್ಯ ರೆಹಮಾನ್‌ ಕೋಡ್‌ ವರ್ಡ್‌ಗಳ ಮೂಲಕ ಸಂವಹನ ನಡೆಸುತ್ತಿದ್ದ. “ದಿ ಬ್ರೇವ್‌’ ಹಾಗೂ “ದಿ ಬ್ರೇವ್‌ ಬಸವನಗುಡಿ’ ಎಂಬ ಕೋಡ್‌ ವರ್ಡ್‌ ಇಟ್ಟುಕೊಂಡಿದ್ದ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ “ದಿ ಬ್ರೇವ್‌ ಗುಪ್ತಾ’ ಎಂದು ಹೇಳಿಕೊಂಡಿದ್ದ. ಮತ್ತೂಂದು ಸ್ಫೋಟಕ ವಿಚಾರವೆಂದರೆ ಈತ ಅಭಿವೃದ್ಧಿಪಡಿಸಿದ್ದ ಆ್ಯಪ್‌ಗ್ಳಲ್ಲಿ ಸ್ಯಾಟಲೈಟ್‌ ಕರೆಗಳನ್ನು ಮೊಬೈಲ್‌ನಲ್ಲಿ ಸ್ವೀಕರಿಸುವ ತಂತ್ರಾಂಶ ಸಿದ್ಧಪಡಿಸಿದ್ದ. ಅದರೆ ಪ್ರಯೋಗ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.