ಪ್ರಾಮಾಣಿಕ ತನಿಖೆಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಸುಧಾಕರ್ ಪ್ರಶ್ನೆ
Team Udayavani, Aug 21, 2020, 9:07 AM IST
ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಸಚಿವ ಕೆ. ಸುಧಾಕರ್ ಪ್ರಶ್ನಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಪಶ್ನಿಸಿದ್ದಾರೆ.
ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಬಿಜೆಪಿಯವರ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದು ಈ ರೀತಿ ಕೆಲಸ ಮಾಡಿದರೆ ನಾವು ಬಿಜೆಪಿಯ ವಿರುದ್ಧ ಅಲ್ಲ ಪೋಲೀಸರ ವಿರುದ್ಧ ಹೋರಾಟ ಮಾಡಬೇಕಾಗಬಹುದು ಎಚ್ಚರಿಕೆ ಇರಲಿ ಎಂದು ಡಿ.ಕೆ. ಶಿವಕುಮಾರ್ ಗುರುವಾರ ಕಿಡಿಕಾರಿದ್ದರು.
ಇದನ್ನೂ ಓದಿ: ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಮಾತೃ ವಿಯೋಗ
ಬೆಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ಪಾರ್ಟಿಯನ್ನು ಫಿಕ್ಸ್ ಮಾಡಬೇಕು ಎಂದು ಪ್ರಯತ್ನಗಳು ನಡೆಯುತ್ತಿದೆ ಹಾಗಾಗಿ ಪೊಲೀಸರು ಬಿಜೆಪಿಯ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಬಾರದು. ಮಿಸ್ಟರ್ ಕಮಿಷನರ್ ಬಿ ಕೇರ್ ಫುಲ್ ಎಂದು ಗುಡುಗಿದ ಡಿಕೆ ಶಿವಕುಮಾರ್ ಇದನ್ನು ಮನವಿಯಾದರು ಅಂದುಕೊಳ್ಳಿ ಅಥವಾ ಎಚ್ಚರಿಕೆ ಅಂತನೂ ಅಂದುಕೊಳ್ಳಿ ಎಂದು ಡಿಕೆಶಿ ಹೇಳಿದ್ದರು.
ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ? pic.twitter.com/Ds9O6la4l2
— Dr Sudhakar K (@mla_sudhakar) August 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.