ಗಣೇಶೋತ್ಸವಕ್ಕೆ ಜಿಲ್ಲಾಡಳಿತದ ಮಾರ್ಗಸೂಚಿ
Team Udayavani, Aug 21, 2020, 6:47 PM IST
ಯಾದಗಿರಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವವನ್ನು ಸರಳ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.
ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ದೇವಸ್ಥಾನ, ಮನೆ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆ ಜನರೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಾಲ್ಕು ಅಡಿ ಎತ್ತರ ಹಾಗೂ ಮನೆಗಳಲ್ಲಿ ಎರಡು ಅಡಿ ಮೀರದಂತಿರಬೇಕು. ಗಣೇಶೋತ್ಸವ ಮಂಡಳಿಗಳು ಪೊಲೀಸ್, ಜೆಸ್ಕಾಂ, ನಗರಸಭೆ, ಕಾರ್ಪೋರೇಷನ್ ಸೇರಿ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡಿಗೆ, ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿದೆ. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸಬೇಕು.ಸುವುದು. ಒಮ್ಮೆಲೇ 20ಕ್ಕಿಂತ ಹೆಚ್ಚು ಜನ ಸೇರದಂತೆ ಎಚ್ಚರಿಕೆ
ವಹಿಸಬೇಕು. ಯಾವುದೇ ಸಾಂಸ್ಕೃತಿಕ, ಸಂಗೀತ ನೃತ್ಯ, ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಮೆರವಣಿಗೆ ನಿರ್ಬಂಧಿಸಲಾಗಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಮನೆಯಲ್ಲೇ ವಿಸರ್ಜಿಸಬೇಕು. ಮತ್ತು ಸರಕಾರ ಮತ್ತು ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಸ್ಥಳೀಯ ಆಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕರ್ ಅಥವಾ ಕೃತಕ ವಿರ್ಸಜನಾ ಟ್ಯಾಂಕರ್‌ಗಳಲ್ಲಿ ವಿರ್ಸಜಿಸಬೇಕು. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಸ್ಯಾನಿಟೈಸ್ ಮಾಡಬೇಕು. ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀ ನಿಂಗ್ ಗೆ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.