ಗಣೇಶೋತ್ಸವ; ನಿಯಮ ಪಾಲಿಸಿ

Team Udayavani, Aug 21, 2020, 6:55 PM IST

ಗಣೇಶೋತ್ಸವ; ನಿಯಮ ಪಾಲಿಸಿ

ರಾಯಚೂರು: ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿ, ಮೇ 17ರ ವರೆಗೆ ಯಾವುದೇ ಕೋವಿಡ್ ಪಾಸಿಟಿವ್‌ ಇರಲಿಲ್ಲ. ಆದರೆ, ಈಗ ನಗರದಲ್ಲಿಯೇ 25 ಪ್ರದೇಶಗಳನ್ನು ಹಾಟ್‌ಸ್ಟಾಟ್‌ ಎಂದು ಗುರುತಿಸಲಾಗಿದೆ. ನಿತ್ಯ 150 ರಿಂದ  200 ಪಾಸಿಟಿವ್‌ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಎಂದರು.

ಪಟಾಕಿ ಸಿಡಿಸುವಂತಿಲ್ಲ, ಡಿಜೆ-ಮೈಕ್‌ ಬಳಸುವಂತಿಲ್ಲ, ಪಾರಂಪರಿಕವಾಗಿ ಆಚರಿಸಲ್ಪಡುವಲ್ಲಿ ಮಾತ್ರ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. ಪೆಂಡಾಲ್‌ಗ‌ಳಲ್ಲಿ 20ಕ್ಕೂ ಹೆಚ್ಚು ಜನರು ಇರುವಂತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿದಿನ ಆ ಸ್ಥಳವನ್ನು ಸ್ಯಾನಿಟೈಜ್‌ ಮಾಡಬೇಕು. ಇದಕ್ಕೆ ಗಣೇಶ ಮಂಡಳಿಗಳ ಸಹಕಾರ ಅಗತ್ಯ ಎಂದರು.

ಸದರ ಬಜಾರ್‌ ಪೊಲೀಸ್‌ ಠಾಣೆ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಏಕಗವಾಕ್ಷಿ ಪದ್ಧತಿಯಲ್ಲಿ ಜೆಸ್ಕಾಂ, ಪೊಲೀಸ್‌, ಅಗ್ನಿ ಶಾಮಕ ಹಾಗೂ ನಗರಸಭೆ ಅಧಿ ಕಾರಿಗಳಿಂದ ಅನುಮತಿ ನೀಡಲಾಗುವುದು. ನಗರದ ಖಾಸ್‌ಬಾವಿಯಲ್ಲಿ ಈ ಬಾರಿಯೂ ಗಣೇಶ ವಿಸರ್ಜನೆಗೆ ಅವಕಾಶವಿದ್ದು, ಷರತ್ತು ವಿಧಿಸಲಾಗುವುದು. ನಗರಸಭೆಯಿಂದ ಕಳುಹಿಸಲಾಗುವ ವಾಹನಗಳಿಗೆ ಗಣೇಶ ಮೂರ್ತಿ ನೀಡಬೇಕು. ನಂತರ ಆ ವಾಹನಗಳಲ್ಲಿ ಗಣೇಶ ಮೂರ್ತಿಯನ್ನು ಖಾಸ್‌ಬಾವಿಗೆ ತಂದು ಅಲ್ಲಿ ಪುರೋಹಿತರಿಂದ ವಿಸರ್ಜನಾ ಕ್ರಮವಹಿಸಲಾಗುವುದು. ಅಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದು ತಿಳಿಸಿದರು. ಐದು ದಿನ ಮಾತ್ರ ಮೂರ್ತಿ ಕೂಡಿಸಬೇಕು. ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ನಗರದಲ್ಲಿರುವ ಕಂಟೈನ್ಮೆಂಟ್‌ ಜೋನ್‌ನಲ್ಲಿ ಮನೆಗಳಲ್ಲಿಯೇ ಆಚರಿಸಬೇಕು ಎಂದರು.

ಎಸ್‌ಪಿ ಅಮೃತ್‌ ಪ್ರಕಾಶ್‌ ನಿಕಮ್‌ ಮಾತನಾಡಿ, ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಸಿಸಿ ಟಿ.ವಿ ಅಳವಡಿಸಬೇಕು ಎಂದರು. ಈ ವೇಳೆ ಜಿಪಂ ಸಿಇಒ ಲಕ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ವಿವಿಧ ಸಮುದಾಯಗಳ ಮುಖಂಡರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.