ಬೆಲೆ ಏರಿಕೆ ನಡುವೆಯೂ ಖರೀದಿ ಭರಾಟೆ
Team Udayavani, Aug 22, 2020, 1:54 PM IST
ತುಮಕೂರು: ಕೋವಿಡ್ ಸಂಕಷ್ಟ ಬೆಲೆ ಏರಿಕೆಯ ನಡುವೆಯೂ ಕಲ್ಪತರು ನಾಡಿನ ಎಲ್ಲಾ ಕಡೆ ಗೌರಿ ಗಣೇಶ ಹಬ್ಬವನ್ನು ಸಡಗರ ಸಂಭ್ರಮ ದಿಂದ ಆಚರಿಸಲು ಸಿದ್ಧತೆ ನಡೆದಿದ್ದು ಶುಕ್ರವಾರ ಗೌರಿಯನ್ನು ಮನೆ ಮನೆಗಳಲ್ಲಿ ಗೌರಿಗೆ ಬಾಗಿನ ಅರ್ಪಿಸುವ ಮೂಲಕ ಆಚರಿಸಿದರು.
ಶುಕ್ರವಾರ ಗೌರಿ ಹಬ್ಬದ ಸಂಭ್ರಮ ಜಿಲ್ಲೆಯಲ್ಲಿ ಕಂಡು ಬಂದಿತು ಮನೆ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಬಗೆ ಬಗೆಯ ಸಿಹಿ ತಿನಿಸುಗಳನ್ನು ಮಾಡಿ ಹಬ್ಬ ಆಚರಿಸಿದರು ಜೊತೆಗೆ ಮನೆ ಮನೆಗಳಲ್ಲಿ ಗೌರಿ ಪೂಜೆ ಮಾಡಿ ಬಾಗಿನ ಅರ್ಪಿಸಿದರು. ಗಣೇಶ ಹಬ್ಬಕ್ಕೆ ಸಿದ್ಧತೆ:ಜಿಲ್ಲೆಯ ಎಲ್ಲಾ ಕಡೆ ಗಣೇಶ ಹಬ್ಬಕ್ಕಾಗಿ ಸಿದ್ಧತೆ ಬರದಿಂದ ನಡೆದಿದೆ. ನಗರದ ಎಲ್ಲಾ ಕಡೆ ಗಣೇಶ ವಿಗ್ರಹ ಮಾರಾಟಕ್ಕೆ ಅವಕಾಶ ನೀಡದೇ ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಂಡು ಗಣೇಶ ವಿಗ್ರಹಗಳನ್ನು ಮಾರಾಟ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಜನರು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಗಣೇಶ ವಿಗ್ರಹಗಳನ್ನು ಖರೀದಿಮಾಡುತ್ತಿದ್ದರು.
ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶಮೂರ್ತಿಗಳನ್ನು ವಾರ್ಡ್ ನಂ.30, ಟಿ.ಪಿ.ಕೈಲಾಸಂ ಮುಖ್ಯ ರಸ್ತೆಯಲ್ಲಿರುವ ಗಾರೆ ನರಸಯ್ಯನ ಕಟ್ಟೆಯಲ್ಲಿ ದೊಡ್ಡ ಗಣೇಶ ಮೂರ್ತಿಗಳ(ಕ್ರೇನ್ ವ್ಯವಸ್ಥೆ ಮಾಡಲಾಗಿದೆ)ಹಾಗೂ ವಿದ್ಯಾನಗರದಲ್ಲಿರುವ ಪಂಪ್‌ಹೌಸ್‌ನಲ್ಲಿ ಚಿಕ್ಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ ರೀತಿ ಆ.22ರಂದು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಚಿಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ನೀರಿನ ಟ್ಯಾಂಕರ್‌ಗಳನ್ನು ಹೊಂದಿರುವ ವಾಹನಗಳು ಬಟವಾಡಿ ಆಂಜನೇಯ ದೇವಸ್ಥಾನದ ಹತ್ತಿರ, ಶೆಟ್ಟಿಹಳ್ಳಿ ರಸ್ತೆಯ ರಾಘವೇಂದ್ರ ಸ್ವಾಮಿ ಮಠದ ಬಳಿ, ಮಹಾನಗರಪಾಲಿಕೆ ಕಚೇರಿ ಆವರಣ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ, ಅಗ್ರಹಾರದ ಶಿಶುವಿಹಾರದ ಹತ್ತಿರ(7ನೇ ವಾರ್ಡ್), ಕ್ಯಾತ್ಸಂದ್ರ ಬಸ್ ನಿಲ್ದಾಣದ ಹತ್ತಿರ ಹಾಗೂ ಶಿರಾಗೇಟ್ ಕನಕವೃತ್ತದ ಹತ್ತಿರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.