![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 22, 2020, 3:29 PM IST
ಮಾಸ್ಕೋ: ತನ್ನ ಕೋವಿಡ್ ಲಸಿಕೆಯ ಸಾಮೂಹಿಕ ಪರೀಕ್ಷೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ 40 ಸಾವಿರಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗುತ್ತದೆ. ಈ ಪ್ರಯೋಗ ಪ್ರಕ್ರಿಯೆಯು ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ವಿದೇಶಿ ಸಂಶೋಧನಾ ಸಂಸ್ಥೆಗಳನ್ನು ಇದರಲ್ಲಿ ಸೇರಿಸಲಾಗುವುದು ಎಂದು ರಷ್ಯಾ ಸರಕಾರ ಹೇಳಿದೆ. ರಷ್ಯಾ ತನ್ನ ಲಸಿಕೆಯಲ್ಲಿ ಸುಮಾರು 2 ಸಾವಿರದಷ್ಟು ಪ್ರಮಾಣವನ್ನು ಮೆಕ್ಸಿಕೋ ಕಳುಹಿಸಲು ನಿರ್ಧರಿಸಿದೆ. ಈ ಮಧ್ಯೆ ಲಸಿಕೆ ಕುರಿತಾದ ಮತ್ತಷ್ಟು ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆಗೆ (ಡಬ್ಲ್ಯುಎಚ್‌ಒ) ಕಳುಹಿಸಿದೆ.
ಕಳೆದ 24 ಗಂಟೆಗಳಲ್ಲಿ ಇಸ್ರೇಲ್‌ನಲ್ಲಿ 1630 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 99,599ಕ್ಕೆ ತಲುಪಿದೆ. ಇಲ್ಲಿಯ ವರೆಗೆ 795 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾಂಕ್ರಾಮಿಕ ಕುರಿತು ಚರ್ಚಿಸಲು ನಡೆದ ಸಂಪುಟ ಸಭೆ ನಡೆಸಿದ್ದರು. ಇದರಲ್ಲಿ ದೇಶದಲ್ಲಿ ಮತ್ತೆ ಲಾಕ್‌ಡೌನ್ ಹೇರದಿರಲು ನಿರ್ಧರಿಸಲಾಗಿತ್ತು. ಆದರೆ ಸುರಕ್ಷಾ ಕ್ರಮಗಳ ಬಗ್ಗೆ ಕಾಳಜಿ ವಹಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ಗಳು ಮತ್ತು ಸಾಮಾಜಿಕ ದೂರ ಕಾಪಾಡುವುದು ಕಡ್ಡಾಯವಾಗಿದೆ.ಮೆಕ್ಸಿಕೋ
ಕಳೆದ 24 ಗಂಟೆಗಳಲ್ಲಿ ಮೆಕ್ಸಿಕೋದಲ್ಲಿ 6775 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಇಲ್ಲಿ ಸೋಂಕಿತರ ಸಂಖ್ಯೆ 543,806ಕ್ಕೆ ತಲುಪಿದೆ. ಬಿಡುಗಡೆಯಾದ ದತ್ತಾಂಶಕ್ಕಿಂತ ಸೋಂಕಿತರ ಸಂಖ್ಯೆ ಹೆಚ್ಚಿರಬಹುದು ಎಂದು ಸರಕಾರ ಹೇಳಿದೆ. ದೇಶದ ಆರೋಗ್ಯ ಸಚಿವಾಲಯದ ಪ್ರಕಾರ ದಿನಕ್ಕೆ 625 ಹೊಸ ಸಾವುಗಳು ದಾಖಲಾಗುತ್ತಿವೆ.
ಬ್ರಿಟನ್
ದೇಶದ ಎರಡನೇ ಅತಿದೊಡ್ಡ ನಗರವಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಸೋಂಕು ಹೆಚ್ಚಾಗುತ್ತಿರುವ ಕಾರಣ ಯುಕೆ ಸರಕಾರ ಲಾಕ್‌ಡೌನ್ ಘೋಷಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ 1 ಲಕ್ಷ ಜನರ ಪರೀಕ್ಷೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಸೋಂಕು
ಪತ್ತೆಯಾಗಲು ಕಾರಣವಾದ ಅಂಶಗಳ ಮೇಲೆ ಸಮೀಕ್ಷೆ ನಡೆಸಲು ಸರಕಾರ ನಿರ್ಧರಿಸಿದೆ. ಈ ವರೆಗೆ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 41 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.