24ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ
Team Udayavani, Aug 23, 2020, 1:54 PM IST
ಕಲಬುರಗಿ: ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಆ.24ರಂದು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (ಕೆಎಎಸ್) ಗ್ರೂಪ್ “ಎ’ ಮತ್ತು “ಬಿ’ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ದೂರಿಗೆ ಅವಕಾಶ ನೀಡಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ ಅವರು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳ ಒಟ್ಟಾರೆ 14,340 ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ನಗರದಲ್ಲಿ 34 ಸಾಮಾನ್ಯ ಪರೀಕ್ಷಾ ಕೇಂದ್ರಗಳು ಮತ್ತು ಕೋವಿಡ್-19 ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗೆ ಏಷಿಯಾನ್ ಮಾಲ್ ಹಿಂಬದಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಪರೀಕ್ಷಾ ಕೇಂದ್ರದಲ್ಲಿ ಬರೆಯಲು ಅವಕಾಶ ನೀಡಲಾಗಿದೆ ಎಂದರು.
ಇದಲ್ಲದೆ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಎರಡು ಕೋಣೆಗಳನ್ನು ಕಂಟೇನ್‌ಮೆಂಟ್ ವಲಯದಿಂದ ಬಂದಿರುವ, ಕೋವಿಡ್ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಬಂದ ಅಥವಾ ಕೋವಿಡ್ ಲಕ್ಷಣವಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮೀಸಲಿರಿಸಬೇಕು ಎಂದರು.
ಪರೀಕ್ಷೆ ಸುಸೂತ್ರವಾಗಿ ನಡೆಯಲು 14 ಮಾರ್ಗಾಧಿಕಾರಿಗಳು, 35 ಕೇಂದ್ರಗಳಿಗೂ ಸ್ಥಳೀಯ ಪರಿವೀಕ್ಷಣಾಧಿಕಾರಿ ಹಾಗೂ 2-3 ಕೇಂದ್ರಗಳಿಗೆ ತಲಾ ಓರ್ವ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಎಲ್ಲಿಯಾದರು ನಕಲು ಕಂಡು ಬಂದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರೆ ಜವಾಬ್ದಾರರಾಗುತ್ತಾರೆ. ಡಿಡಿಪಿಐ ಅವರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಜನಸಂದಣಿಯಾಗದಂತೆ ಎಚ್ಚರವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ 300 ವಿದ್ಯಾರ್ಥಿಗಳಿಗೆ ಒಂದು ಮತ್ತು ಅದಕ್ಕೂ ಹೆಚ್ಚಿದಲ್ಲಿ ಎರಡು ಆರೋಗ್ಯ ತಂಡಗಳು ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಜತೆಗೆ ಒಂದು ಮೂಲ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ಡಿಡಿಪಿಐ ಎಸ್.ಪಿ. ಬಾಡಗಂಡಿ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಸಭೆಯಲ್ಲಿ ಕೆಪಿಎಸ್‌ಸಿ ಕಲಬುರಗಿ ಕಚೇರಿಯ ಹಿರಿಯ ಸಹಾಯಕಿ ಅನ್ನಪೂರ್ಣ, ಸಹಾಯಕ ನಟರಾಜ್ ಸೇರಿದಂತೆ ತಾಲೂಕುಗಳ ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.