ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ಸಭೆಯ ಪ್ರತಿಭಟನೆ ಹಿಂಪಡೆದ ವೈದ್ಯರು
Team Udayavani, Aug 23, 2020, 2:16 PM IST
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ
ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಯ ನಂತರ ಜಿಲ್ಲಾ ಪಚಾಯತ್ ಸಿಒಓ ಅಮಾನತು ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರು ಇಂದು ನಡೆದ ಸಭೆಯ ನಂತರ ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ಇಂದು ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿದೆ. ಆದರೆ, ವರ್ಗಾವಣೆಗೊಂಡಿರುವ ಜಿ.ಪಂ. ಸಿಇಒ ಅಮಾನತು ಆಗುವವರೆಗೂ ವೈದ್ಯರು ಕೈಗೆ ಕಪ್ಪುಪಟ್ಟಿ ಧರಿಸಿ ಕೆಲಸ ಮಾಡಲು ನಿರ್ಧರಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೋವಿಡ್-19 ಸಂದರ್ಭದಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಈ ಸಂಬಂಧ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಜೊತೆ ಮಾತಾಡಿದ್ದು, ನಾಳೆಯಿಂದ ಮೈಸೂರು ಜಿಲ್ಲೆಯ ಕೋವಿಡ್ ಅಪ್ಡೇಟ್ ಬರಲಿದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಶ್ರೀನಿವಾಸನ್ ಹೇಳಿದ್ದಾರೆ.
ಇದನ್ನೂ ಓದಿ: ಕಾಲಿನ ಮೂಲಕ SSLC ಪರೀಕ್ಷೆ ಬರೆದು ಗಮನಸೆಳೆದಿದ್ದ ಕೌಶಿಕ್ ನ ಇನ್ನೊಂದು ವಿಡಿಯೋ ವೈರಲ್
ಪ್ರಶಾಂತ್ ಮಿಶ್ರಾ ವರ್ಗಾವಣೆ ಸ್ವಾಗತ. ಆರೋಗ್ಯ ಇಲಾಖೆ ಅಧಿಕಾರಿಗಳೇ ನೋಡಲ್ ಆಫೀಸರ್‌ಗಳಾಗಲಿ. ಅವರ ಮಧ್ಯಪ್ರವೇಶ ಬೇಡ. ಕೆಎಎಸ್- ಐಎಎಸ್ ಅಧಿಕಾರಿಗಳು ಕೋವಿಡ್-19 ನೋಡಲ್ ಆಫೀಸರ್ ಗಳಾಗುವುದು ಬೇಡ. ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಪ್ರಕರಣ ವರದಿ ಬರೋವರೆಗೂ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ಮೈಸೂರು ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ್ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.