ಸಭೆ ಕುತೂಹಲ: ಸಿಎಂ ಯಡಿಯೂರಪ್ಪ- ಸಂತೋಷ್ ಮಾತುಕತೆ
Team Udayavani, Aug 24, 2020, 7:00 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪಕ್ಷದ ಕಚೇರಿಗೆ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಡಾ| ಕೆ. ಸುಧಾಕರ್ ಅವರನ್ನು ಕರೆಸಿ ಚರ್ಚಿಸಿದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರನ್ನೂ ಭೇಟಿಯಾಗಿ ಸಮಾಲೋಚಿಸಿರುವುದು ಇನ್ನಷ್ಟು ಕುತೂಹಲ ಕೆರಳಿಸಿದೆ.
ರಾಜ್ಯ ಬಿಜೆಪಿ ಸರಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಂತೋಷ್ ಅವರು ಸಿಎಂ ಜತೆ ಶನಿವಾರ ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಜತೆಗೆ ಪಕ್ಷ ಸಂಘಟನೆಗೂ ಒತ್ತು ನೀಡುವ ಬಗ್ಗೆ ಉಭಯ ನಾಯಕರು ವಿಸ್ತೃತವಾಗಿ ಸಮಾಲೋಚಿಸಿದ್ದಾರೆ ಎನ್ನಲಾಗಿದೆ.
ಶನಿವಾರ ‘ಕಾವೇರಿ’ ನಿವಾಸಕ್ಕೆ ಆಗಮಿಸಿದ ಸಂತೋಷ್ ಮತ್ತು ರಾಜ್ಯ ಬಿಜೆಪಿ ಸಂಘಟನ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರೊಂದಿಗೆ ಯಡಿಯೂರಪ್ಪ ಉಪಾಹಾರ ಸೇವಿಸಿದರು.
ಬಳಿಕ ಸುಮಾರು 25 ನಿಮಿಷಗಳ ಕಾಲ ಮೂವರೂ ಪ್ರತ್ಯೇಕವಾಗಿ ಚರ್ಚಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೂ ಮಾತನಾಡಿದ ಬಳಿಕ ಬಿ.ಎಲ್. ಸಂತೋಷ್ ಮತ್ತು ಅರುಣ್ ಕುಮಾರ್ ನಿರ್ಗಮಿಸಿದರು.
ಮುಂದಿನ ಆಡಳಿತ ವೈಖರಿ, ಪಕ್ಷ ಮತ್ತು ಸರಕಾರದ ಆದ್ಯತೆಗಳು, ಇತ್ತೀಚೆಗೆ ಪಕ್ಷಕ್ಕೆ ಸೇರಿದವರಿಗೆ ಸರಕಾರದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂಬ ಭಾವನೆ ಮೂಡದಂತೆ ಮುಂದುವರಿಯುವುದು. ಕೋವಿಡ್ 19, ಪ್ರವಾಹ ನಿಯಂತ್ರಣಕ್ಕೆ ಬರುತ್ತಿದ್ದಂತೆ ಜನಪರ ಯೋಜನೆಗಳ ಜಾರಿಗೆ ಒತ್ತು ನೀಡುವುದು, ಪಕ್ಷ ಸಂಘಟನೆಗಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವುದು, ಎಂಬಿತ್ಯಾದಿಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಮನ್ವಯದ ಕಾರ್ಯ ನಿರ್ವಹಣೆ
ಪಕ್ಷದ ಆಶಯಕ್ಕೆ ಪೂರಕವಾಗಿ ಸರಕಾರ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವ ಮೂಲಕ ಜನಸೇವೆ ಸಲ್ಲಿಸಬೇಕು ಎಂಬ ಬಗ್ಗೆ ಚರ್ಚಿಸಲಾಯಿತು ಎನ್ನಲಾಗಿದೆ.
ಸೆಪ್ಟಂಬರ್‌ನಲ್ಲಿ ಸಿಎಂ ದಿಲ್ಲಿ ಪ್ರವಾಸ?
ಕೋವಿಡ್-19, ನೆರೆ ಪರಿಸ್ಥಿತಿ ಸುಧಾರಿಸಿದರೆ ಸೆಪ್ಟಂಬರ್‌ನಲ್ಲಿ ದಿಲ್ಲಿಗೆ ಬರುವಂತೆ ವರಿಷ್ಠರು ಸಿಎಂ ಯಡಿಯೂರಪ್ಪ ಅವರಿಗೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಅಥವಾ ಅನಂತರ ಸಿಎಂ ದಿಲ್ಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.