ಫ್ರಾನ್ಸ್: ಮೇ ಬಳಿಕ ಅತೀ ಹೆಚ್ಚು ಪ್ರಕರಣ; ಸಿಯೋಲ್‌ನಲ್ಲಿ ಮಾಸ್ಕ್ ಕಡ್ಡಾಯ
Team Udayavani, Aug 25, 2020, 4:50 AM IST
ದಿಲ್ಲಿ: ಇಲ್ಲಿನ ಹೊಟೇಲ್‌ಗಳನ್ನು ಲಾಕ್‌ಡೌನ್ ಬಳಿಕ ಸೋಮವಾರ ತೆರೆಯಲಾಗಿದ್ದು, ಮೊದಲ ದಿನದ ದೃಶ್ಯ ಇದು.
ಮಣಿಪಾಲ: ಕಳೆದ 24 ಗಂಟೆಗಳಲ್ಲಿ ಫ್ರಾನ್ಸ್‌ನಲ್ಲಿ 4,900 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮೇ ಅನಂತರದ ಒಂದು ದಿನದಲ್ಲಿ ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈಗ ಹರಡುತ್ತಿರುವ ಸಾಂಕ್ರಾಮಿಕ ರೋಗವು ಫೆಬ್ರವರಿಯಂತೆ ತನ್ನ ಪ್ರಸರಣ ವ್ಯಾಪ್ತಿಯನ್ನು ಹೊಂದಿಲ್ಲ. ಸೋಂಕು 40ರಿಂದ 60 ವರ್ಷದೊಳಗಿನ ಜನರಲ್ಲಿ ನಾಲ್ಕು ಪಟ್ಟು ವೇಗವಾಗಿ ಹರಡುತ್ತಿದೆ. ಯುವಜನರು ಈ ರೋಗವನ್ನು ವೃದ್ಧರಿಗೆ ಹರಡಬಹುದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಸಿಯೋಲ್‌ನಲ್ಲಿ ಮಾಸ್ಕ್ ಧರಿಸುವುದು ಅವಶ್ಯಕ
ದಕ್ಷಿಣ ಕೊರಿಯಾ ಸೋಮವಾರ ರಾಜಧಾನಿ ಸಿಯೋಲ್‌ನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿದೆ. ಸಿಯೋಲ್‌ನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯ ಎಂದು ಸರಕಾರ ಹೇಳಿದೆ. ಕಳೆದ ತಿಂಗಳಿನಿಂದ ಸಿಯೋಲ್‌ನಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ ನಗರವು ಸಾಮಾಜಿಕ ದೂರವಿಡುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಾಧ್ಯತೆ ಇದೆ. ರಷ್ಯಾದಲ್ಲಿ ರವಿವಾರ 4,744 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 961493ಕ್ಕೆ ತಲುಪಿದೆ. ರವಿವಾರ 65 ಸಾವುಗಳೊಂದಿಗೆ, ಸಾವಿನ ಸಂಖ್ಯೆ 1,6448ಕ್ಕೆ ಏರಿಕೆಯಾಗಿದೆ. ಸೋಂಕು ಪ್ರಕರಣಗಳಲ್ಲಿ ರಷ್ಯಾ ವಿಶ್ವದಲ್ಲೇ ನಾಲ್ಕನೇ ಸ್ಥಾನದಲ್ಲಿದೆ. ರಷ್ಯಾ ತನ್ನ ಲಸಿಕೆಯ ಮೊದಲ ಬ್ಯಾಚ್ ಸ್ಪುಟ್ನಿಕ್-ವಿ ತಯಾರಿಸಲು ಘೋಷಿಸಿದೆ.
ವಿಶ್ವದ ಹಲವು ದೇಶಗಳಲ್ಲಿ ಇದರ ಲಸಿಕೆಯ ಬಗ್ಗೆ ಮಾನವ ಪ್ರಯೋಗ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.