ಕೊತ್ತತ್ತಿ ಗ್ರಾಮದ ಅಭಿವೃದ್ಧಿಗೆ ಬದ್ಧ
Team Udayavani, Aug 25, 2020, 1:59 PM IST
ಶ್ರೀರಂಗಪಟ್ಟಣ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊತ್ತತ್ತಿ ಗ್ರಾಮದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಪಶು ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕೊತ್ತತ್ತಿ ಗ್ರಾಮದ ಒಳಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದೇವೆ. ಗುಣಮಟ್ಟದ ರಸ್ತೆಗಳು ನಿರ್ಮಾಣಗೊಂಡಿವೆ. ಬಹಳಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದವರು, ರಸ್ತೆಗಳ ಅಭಿವೃದ್ಧಿಗೆ ಕಾಳಜಿ ವಹಿಸಿರಲಿಲ್ಲ. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದರು.
ಕೋವಿಡ್ ದಿಂದ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿವೆ. ಸರ್ಕಾರದಿಂದ ಯಾವ ಅನುದಾನವೂ ಬರುತ್ತಿಲ್ಲ. ಮಂಜೂರಾದ ಕಾಮಗಾರಿಗಳನ್ನು ಜಾರಿ ಮಾಡಲಾಗುತ್ತಿಲ್ಲ. ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಹಿಂದೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ನೀಡಿದ್ದ ಅನುದಾನವನ್ನು ಸರ್ಕಾರ ತಡೆ ಹಿಡಿದಿದೆ. ಕೊರೊನಾ ನಿಯಂತ್ರಣಕ್ಕೆ ಹೆಚ್ಚು ಹಣ ಖರ್ಚು ಮಾಡಲಾಗಿದೆ ಎಂದು ಹೇಳಿದರು.
ರೈತರಿಗೆ ಸಂಕಷ್ಟ: ಕೊತ್ತತ್ತಿಗೆ ಬಸ್ ನಿಲ್ದಾಣದ ಭೂಮಿ ಪೂಜೆ ನೆರವೇರಿಸಿ, ಹಲವಾರು ದಿನಗಳಾಗಿವೆ. ಈವರೆಗೂ ಕಾಮಗಾರಿ ಆರಂಭವಾಗಿಲ್ಲ. ಕಾಮಗಾರಿ ಗುತ್ತಿಗೆ ಪಡೆದವರು ಆದಷ್ಟು ಬೇಗ ಕೆಲಸ ಆರಂಭಿಸಬೇಕು. ರಾಜ್ಯ ಸರ್ಕಾರ ರಾಗಿ ಮತ್ತು ಭತ್ತ ಖರೀದಿಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಖರೀದಿ ಮಾಡಿಲ್ಲ. ರೈತರಿಗೆ ಸಕಾಲದಲ್ಲಿ ಹಣವನ್ನು ಪಾವತಿಸಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ ಎಂದರು.
ಜಿಪಂ ಸದಸ್ಯ ತೂಬಿನಕೆರೆ ರಾಮಲಿಂಗಯ್ಯ, ತಾಪಂ ಮಾಜಿ ಸದಸ್ಯ ಭಾಸ್ಕರ್, ಬೋರೇಗೌಡ, ಕೆ.ಸಿದ್ದೇಗೌಡ, ರಾಜೇಗೌಡ, ಗ್ರಾಪಂ ಅಧ್ಯಕ್ಷ ಸೋಮಶೇಖರ್ ಹಾಜರಿದ್ದರು.
ಸರ್ಕಾರದಿಂದ ದುಂದುವೆಚ್ಚ : ಜಿಲ್ಲಾಡಳಿತದಿಂದಲೇ ದುಂದುವೆಚ್ಚವಾಗಿದ್ದು, ಕೆಆರ್‌ಎಸ್ ಬಾಗಿನ ಕಾರ್ಯಕ್ರಮ ಆಯೋಜನೆ ಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿದ್ದು, ನಾಚಿಕೆಗೇಡಿನ ವಿಚಾರ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2 ಲಕ್ಷ ರೂ.ವೆಚ್ಚದಲ್ಲಿ ಮುಗಿಯಬೇಕಾದ ಕಾರ್ಯಕ್ರಮಕ್ಕೆ 13 ಲಕ್ಷ ರೂ. ಖರ್ಚು ಮಾಡಲಾಗಿದೆ. ಬಾಳೆಕಂದು, ಮಾವಿನ ಸೊಪ್ಪು, ಶಾಮಿಯಾನ, ವಿಡಿಯೋ, ಪೋಟೋಗೆ ಅಷ್ಟು ಹಣ ಖರ್ಚಾಗುವುದಿಲ್ಲ. ಹಿಂದೆ ನಾವು ಬಾಗಿನ ಕಾರ್ಯಕ್ರಮ ನಡೆಸಿದ್ದೇವೆ. ದುಂದುವೆಚ್ಚಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಆರೋಪಿಸಿದರು. ಬಾಗಿನ ಕಾರ್ಯಕ್ರಮ ಆಯೋಜನೆಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕ್ಷೇತ್ರದ ಶಾಸಕರ ಮಾತಿಗೆ ಬೆಲೆ ಇಲ್ಲವಾಗಿದೆ. ಡೀಸಿ, ಪೊಲೀಸ್ ಅಧೀಕ್ಷಕರು ಮತ್ತು ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.