ಉತ್ತರ ಕರ್ನಾಟಕ ಅಭಿವೃದ್ಧಿ ಶೂನ್ಯ: ವಾಟಾಳ್
ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಚಾಪೆ ಮೇಲೆ ಮಲಗಿ ವಿನೂತನ ಪ್ರತಿಭಟನೆ
Team Udayavani, Aug 25, 2020, 3:20 PM IST
ಹುಬ್ಬಳ್ಳಿ: ಕರ್ನಾಟಕ ಏಕೀಕರಣವಾಗಿ ದಶಕಗಳೇ ಉರುಳಿದರೂ ಉತ್ತರ ಕರ್ನಾಟಕದ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ಹೇಳಿದರು.
ಇಲ್ಲಿನ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಸೋಮವಾರ ಚಾಪೆಯ ಮೇಲೆ ಮಲಗುವ ಮೂಲಕ ಅವರು ವಿನೂತನ ಪ್ರತಿಭಟನೆ ನಡೆಸಿದರು. ಉತ್ತರ ಕರ್ನಾಟಕದ ಕಣ್ಣೀರಿನ ಕಥೆ ಕೇಳುವವರು ಯಾರೂ ಇಲ್ಲದಂತಾಗಿದೆ. ಕರ್ನಾಟಕದ ಏಕೀಕರಣಕ್ಕಾಗಿ ಹಲವಾರು ಹೋರಾಟಗಳ ನಂತರ ಕರ್ನಾಟಕ ಏಕೀಕರಣವಾಗುವ ಮೂಲಕ ಅಖಂಡ ಕರ್ನಾಟಕ ಒಂದು ಎಂದು ಹೇಳಲಾಯಿತು. ಆದರೆ ಉತ್ತರ ಕರ್ನಾಟಕ ಮಾತ್ರ ಅಂದಿನಿಂದಲೂ ನಿರ್ಲಕ್ಷಕ್ಕೆ ಒಳಗಾಗುತ್ತಲೇ ಬಂದಿದೆ ಎಂದರು. ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದಾರೆ ಯಾತಕ್ಕಾಗಿ ಎನ್ನುವುದೇ ತಿಳಿಯುತ್ತಿಲ್ಲ. ಸರಕಾರಿ ಕಚೇರಿಗಳು ಬರಲಿಲ್ಲ, ಸಚಿವರು ಬರುವುದಿಲ್ಲ, ಅಧಿಕಾರಿಗಳು ಬರಲಿಲ್ಲ, ಅಧಿವೇಶನಗಳು ಸರಿಯಾಗಿ ನಡೆಯುತ್ತಿಲ್ಲ, ಹೀಗಾದರೆ ಉತ್ತರ ಕರ್ನಾಟಕ ಅಭಿವೃದ್ಧಿಆಗುವುದು ಯಾವಾಗ ಎನ್ನುವುದೇ ಪ್ರಶ್ನೆಯಾಗಿ ಉಳಿಯುತ್ತಿದೆ. ಉತ್ತರ ಕರ್ನಾಟಕ ಬಗ್ಗೆ ಪ್ರಾಮಾಣಿಕ ಚಿಂತನೆಗಳಿಲ್ಲವಾಗಿದೆ. ಬೆಂಗಳೂರಿನಲ್ಲಿ ಬಿಡಿಎಮಾರಾಟ ಮಾಡಿ ಆಗಿದೆ. ಸರಕಾರಿ ಜಾಗಗಳನ್ನು ಮಾರುತ್ತಿದ್ದಾರೆ. ಮುಂದೂಂದು ದಿನ ಸುವರ್ಣ ಸೌಧವನ್ನು ಮಾರುತ್ತಾರೆ ಎಂದರು.
ಉತ್ತರ ಕರ್ನಾಟಕದ ರಾಜಕಾರಣ ಹೊಲಸಾಗಿದೆ. ಎಲ್ಲರೂ ಸ್ವಾರ್ಥಿಗಳಾಗಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆಗಳಿಲ್ಲ. ಶಾಸನ ಸಭೆ ಸುವರ್ಣ ಸೌಧದಲ್ಲೇ ಕರೆಯಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು. ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಕಳೆದ ವರ್ಷ ಅಪಾರ ಪ್ರಮಾಣದ ಹಾನಿಯಾದರೂ ಪ್ರಧಾನಮಂತ್ರಿ ಕಣ್ತೆರೆದು ನೋಡುತ್ತಿಲ್ಲ. ಪರಿಹಾರ ನೀಡಿಲ್ಲ. ಪ್ರಧಾನಮಂತ್ರಿಗಳು ಯಾಕೆ ಬರುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ರಾಜ್ಯಕ್ಕೆ 25 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲೇಬೇಕು. ಸಿಎಂ ಬಿ.ಎಸ್. ಯಡಿಯೂರಪ್ಪನವರು ವೈಮಾನಿಕ ಸಮೀಕ್ಷೆ ಬದಲಾಗಿ ರಸ್ತೆಯ ಮೂಲಕ ಆಗಮಿಸಿ ಸಮೀಕ್ಷೆ ಮಾಡಿ ಇಲ್ಲಿನ ಜನರ ಕಣ್ಣೀರೊರೆಸುವ ಕೆಲಸ ಮಾಡಬೇಕೆಂದು ಅವರು ಒತ್ತಾಯಿಸಿದರು.
ಪಾರ್ಥ ಸಾರಥಿ, ಬಾಲಾಜಿ, ಅಮೃತ ಇಜಾರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.