ಮಳೆಗಾಲದಲ್ಲೂ ರೈತನಿಗೆ ಈರುಳ್ಳಿ ಕಣ್ಣೀರು

ಟ್ರ್ಯಾಕ್ಟರ್‌ ನೇಗಿಲಿನ ಮೂಲಕ ಮುಚ್ಚಲಾಗುತ್ತಿದೆ ಈರುಳ್ಳಿ

Team Udayavani, Aug 25, 2020, 4:03 PM IST

ಮಳೆಗಾಲದಲ್ಲೂ ರೈತನಿಗೆ ಈರುಳ್ಳಿ ಕಣ್ಣೀರು

ಸಾಂದರ್ಭಿಕ ಚಿತ್ರ

ಕಲಾದಗಿ: ಬೇಸಿಗೆಯಲ್ಲಿ ಈರುಳ್ಳಿಗೆ ಬೇಡಿಕೆ ಇಲ್ಲದೇ ಬಿಡಿಗಾಸು ಸಿಗದೇ ಸಂಕಷ್ಟ ರೈತನಿಗೆ ಮಳೆಗಾಲದಲ್ಲೂ ಈರುಳ್ಳಿಯಿಂದ ರೈತ ಕಷ್ಟ-ನಷ್ಟ ಅನುಭವಿಸುವಂತಾಗಿದೆ. ಮಳೆಗಾಲದ ಈರುಳ್ಳಿ ರೋಗ ಬಾಧೆಗೆ ಸಿಲುಕಿ ಬಾಡಿ ಭೂಮಿಯಲ್ಲಿ ಕೊಳೆಯುತ್ತಿದೆ. ದಿಕ್ಕು ತೋಚದ ಈರುಳ್ಳಿ ಬೆಳೆದ ರೈತ, ಈರುಳ್ಳಿ ಬೆಳೆ ಟ್ರ್ಯಾಕ್ಟರ್‌ ಮೂಲಕ ನೇಗಿಲು ಹೊಡೆದು ಭೂಮಿಯಲ್ಲಿ ಮುಚ್ಚುತ್ತಿದ್ದಾರೆ.

ಜೂನ್‌ ಮೊದಲ ವಾರದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿತ್ತು. ಕಳೆದ ಎರಡೂವರೆ ತಿಂಗಳಿಂದ ಶ್ರಮ ವಹಿಸಿ ಲಕ್ಷಾಂತರ ರೂ. ಖರ್ಚು ಮಾಡಿದ್ದರು. ಈರುಳ್ಳಿ ಇನ್ನೇನು ಗಡ್ಡಿ ಕಟ್ಟುವಿಕೆ ಹಂತದಲ್ಲಿ ಕೊಳೆ ರೋಗ ತಗುಲಿದೆ. ಈ ಹಂತದಲ್ಲಿ ಸಾಕಷ್ಟು ಗೊಬ್ಬರ ಔಷಧ ಸಿಂಪರಣೆ ಮಾಡಿ ರೋಗ ಹತೋಟಿಗೂ ಯತ್ನಿಸಿದ್ದರೂ ನಿಯಂತ್ರಣಕ್ಕೆ ಬಂದಿಲ್ಲ. ಎಕರೆಗೆ 40 ಸಾವುರ ಖರ್ಚು ಖರ್ಚು: ಈ ಭಾಗದಲ್ಲಿ ಬಹುತೇಕ ರೈತರು ಮಳೆಗಾಲದ ಮುಂಗಾರು ಬೆಳೆ ಈರುಳ್ಳಿಯನ್ನು ಬೆಳೆಯುತ್ತಾರೆ. ಈರುಳ್ಳ ಗಡ್ಡಿ ಗಟ್ಟುವಿಕೆಯವರೆಗೂ ಸುಮಾರು 40,000ವರೆಗೂ ಖರ್ಚು ಮಾಡಿದ್ದಾನೆ. ರೋಗಕ್ಕೆ ತುತ್ತಾದ ಈರುಳ್ಳಿ ಬೆಳೆಯನ್ನು ನೇಗಿಲು ಹೊಡೆದು ಮುಚ್ಚುವಂತ ಪರಿಸ್ಥಿತಿ ರೈತರಿಗೆ ಬಂದೊದಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈರುಳ್ಳಿ ಬೆಳೆ ಹಾನಿ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಸರಕಾರದಿಂದ ಪರಿಹಾರ ಸಿಗುವಂತೆ ಮಾಡಬೇಕು ಎಂದು ರೈತರು ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ರೈತರು ಈರುಳ್ಳಿ ಬೆಳೆ ವಿಮೆ ಪಾವತಿಸಿದ್ದು, ರೈತರಿಗೆ ಜಮೆಯಾದರೆ ರೈತರಿಗೆ ಮರುಜೀವ ನೀಡಿದಂತಾಗುತ್ತದೆ.

ನಾಲ್ಕು ಲಕ್ಷ ರೂ ಖರ್ಚು ಮಾಡಿ 10 ಎಕರೆ ಪ್ರದೇಶದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದೆ, ಗಡ್ಡಿ ಕಟ್ಟುವಿಕೆಯ ಹಂತದಲ್ಲಿ ಹಳದಿ ರೋಗಕ್ಕೆ ತುತ್ತಾಗಿ ಬೆಳೆ ಬಾಡಿ ಕೊಳೆಯುತ್ತಿದೆ. ಇದನ್ನು ನೋಡಲಾಗದೆ ನೇಗಿಲು ಹೊಡೆದು ಮುಚ್ಚಿದ್ದೇವೆ. ಸರಕಾರ ಖರ್ಚು ಮಾಡಿದ ಅರ್ಧದಷ್ಟಾದರೂ ಪರಿಹಾರ ನೀಡಬೇಕು. – ಈರಪ್ಪ ಅರಕೇರಿ, ಶಾರದಾಳ ರೈತ

ಜಿಲ್ಲೆಯಲ್ಲಿ 28,000 ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ, ಇದರಲ್ಲಿ ಬಾದಾಮಿ, ಬೀಳಗಿ, ಹುನಗುಂದ, ಮುಧೋಳ, ಜಮಖಂಡಿ, ಬಾಗಲಕೋಟೆ ಸೇರಿ 7,000 ಹೆಕ್ಟೇರ್‌ ಪ್ರದೇಶ ಈರುಳ್ಳಿ ರೋಗಕ್ಕೆ ಹಾನಿಯಾಗಿದೆ, ಬೆಳೆ ಹಾನಿ ಪ್ರಾಥಮಿಕ ವರದಿಯನ್ನು ಜಿಲ್ಲಾ ಧಿಕಾರಿಗಳಿಗೆ ಸಲ್ಲಿಸಲಾಗಿದೆ. – ರಾಹುಲಕುಮಾರ ಬಾವಿದಡ್ಡಿ, ತೋ.ಇ ಉಪನಿರ್ದೇಶಕ ಬಾಗಲಕೋಟೆ

ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ 3800 ಹೆಕ್ಟೇರ್‌ ಪ್ರದೇಶ ಈರುಳ್ಳಿ ಬಿತ್ತನೆಯಾಗಿದೆ. ಆಗಸ್ಟ್‌ನಲ್ಲಿ ಎರಡನೇ ವಾರದಲ್ಲಿ ವಿವಿಧ ಗ್ರಾಮಗಳ ಈರುಳ್ಳಿ ತೋಟಕ್ಕೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಲಾಗಿದೆ. 1100 ಹೆಕ್ಟೇರ್‌ ಪ್ರದೇಶ ಈರುಳ್ಳಿ ಬೆಳೆ ಹಾನಿಯಾದ ವರದಿಯನ್ನು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಿಗೆ ಸಲ್ಲಿಸಲಾಗಿದೆ. -ಸುಭಾಸ್‌ ಸುಲ್ಪಿ , ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ

 

– ಚಂದ್ರಶೇಖರ ಆರ್‌.ಎಚ್‌

ಟಾಪ್ ನ್ಯೂಸ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.