ಹೊಸ ಶಿಕಣ ನೀತಿಯಿಂದ ಗಮನಾರ್ಹ ಬದಲಾವಣೆ


Team Udayavani, Aug 25, 2020, 4:23 PM IST

ಹೊಸ ಶಿಕಣ ನೀತಿಯಿಂದ ಗಮನಾರ್ಹ ಬದಲಾವಣೆ

ಬೆಳಗಾವಿ: ಹೊಸ ಶಿಕ್ಷಣ ನೀತಿ ಭಾರತದ ಶೈಕ್ಷಣಿಕ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದ್ದು ಬರುವ ದಿನಗಳಲ್ಲಿ ದೇಶದ ಭವ್ಯ ಭವಿಷ್ಯವನ್ನು ನಿರ್ಧರಿಸಲಿದೆ. ಈ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಶಿಕ್ಷಣ ಕ್ಷೇತ್ರ ಗಮನಾರ್ಹ ಬದಲಾವಣೆಗಳನ್ನು ಕಾಣುತ್ತದೆ ಎಂದು ಉಪಮುಖ್ಯಮಂತ್ರಿ ಮತ್ತು ವಿಟಿಯು ಸಮಕುಲಾಧಿಪತಿ ಡಾ| ಸಿ.ಎನ್‌. ಅಶ್ವತ್‌ ನಾರಾಯಣ್‌ ಹೇಳಿದರು,

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಟೆಕ್ಯುಪ್‌ ಘಟಕ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರೊಜೆಕ್ಟ್ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನದ ವರ್ಚುಯಲ್‌ ಸಮಾರಂಭ “ಆವಿಷ್ಕಾರ 2020′ ಉದ್ಘಾಟಿಸಿ ಮಾತನಾಡಿದ ಅವರು, ಈ ಶಿಕ್ಷಣ ನೀತಿಯಿಂದ ನಮ್ಮ ರಾಷ್ಟ್ರ ವಿವಿಧ ಕೌಶಲಗಳ ಜ್ಞಾನದ ಕಣಜವಾಗಲು ಬೇಕಾಗುವ ಎಲ್ಲ ಅವಶ್ಯಕ ಅಂಶಗಳನ್ನು ಪೂರೈಸಬಲ್ಲದು ಎಂದರು.

ಈ ಶಿಕ್ಷಣ ನೀತಿಯಲ್ಲಿ ಪಠ್ಯಕ್ರಮದ ಶಿಕ್ಷಣದ ಜೊತೆಗೆ ಪಠ್ಯದಿಂದ ಆಚೆಗೆ ಇರುವ ವಿಷಯಗಳಿಗೆ ಸಂಬಂಧಿಸಿದ ಕೌಶಲಗಳಿಗೆ ಪ್ರಾಮುಖ್ಯ ನೀಡಲಾಗಿದ್ದು ಎಲ್ಲಾ ಕ್ಷೇತ್ರಗಳ ಕೌಶಲ ಮತ್ತು ಜ್ಞಾನವನ್ನು ನಿಯಮಿತ ಪಠ್ಯಕ್ರಮದಲ್ಲಿ ಸಂಯೋಜಿಸಲಾಗಿದೆ. ಆದ್ದರಿಂದ ಎಂಜಿನಿಯರಿಂಗ್‌ ಶಿಕ್ಷಣ ಕ್ಷೇತ್ರವು ಈ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಹೇಳಿದರು.

ಈ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಮಾನ್ಯತೆಯನ್ನು ಕರ್ನಾಟಕಕ್ಕೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರ ಈಗಾಗಲೇ ಹೊಸ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮಾರ್ಗ ಗಳನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಿದೆ ಎಂದು ಹೇಳಿದರು.

ಆವಿಷ್ಕಾರ 2020 ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿಗಳಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಗುರುತಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಿದ ಕಾರ್ಯಕ್ರಮಗಳಿಗೆ  ವಿವಿಯನ್ನು ಶ್ಲಾಘಿಸಿದರು.ವಿಟಿಯು ಟೆಕ್ಯುಪ್‌ ಘಟಕದ ಮಾರ್ಗದರ್ಶಕ ಪ್ರೊ| ಎನ್‌.ಸಿ. ಶಿವಪ್ರಕಾಶ್‌ ಅವರು ಆವಿಷ್ಕಾರ 2020ಯ ಯೂಟ್ಯೂಬ್‌ ಚಾನೆಲ್‌ನ್ನು ಅನಾವರಣಗೊಳಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿವಿ ಕುಲಪತಿ ಪ್ರೊ| ಕರಿಸಿದ್ದಪ್ಪ ಮಾತನಾಡಿ, ಹೊಸ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ವಿಟಿಯು ಪ್ರಮುಖ ಪಾತ್ರ ವಹಿಸಲು ಸಿದ್ಧವಿದೆ ಎಂದು ಹೇಳಿದರು.

ಡಾ| ಸಂತೋಷ್‌ ದೇಶಪಾಂಡೆ ಸ್ವಾಗತಿಸಿದರು. ಡಾ| ಮೇಘನಾ ಕುಲಕರ್ಣಿ ನಿರೂಪಿಸಿದರು. ಪ್ರೊ| ಸತೀಶ್‌ ಅಣ್ಣಿಗೇರಿ ವಂದಿಸಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.