ಚಾರ್ಮಾಡಿ ಘಾಟ್ ನಡುರಸ್ತೆಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್: ಆಕ್ರೋಶ
Team Udayavani, Aug 26, 2020, 7:08 PM IST
ಕೊಟ್ಟಿಗೆಹಾರ: ವಿಲ್ಲುಪುರಂ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್‌ನಲ್ಲಿ ನಡು ರಸ್ತೆ ಹಾಗೂ ಅರಣ್ಯ ಪ್ರದೇಶದಲ್ಲಿ ಪ್ರಿ- ವೆಡ್ಡಿಂಗ್ ವೀಡಿಯೋ ಶೂಟ್ ಮಾಡುತ್ತಿರುವುದು ಮಂಗಳವಾರ ಕಂಡು ಬಂದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸದಾ ವಾಹನಗಳ ಓಡಾಟ ಇರುವ ಹಾಗೂ ಕಡಿದಾದ ತಿರುವಿನಿಂದ ಕೂಡಿರುವ ಚಾರ್ಮಾಡಿ ಘಾಟ್ ಹೆದ್ದಾರಿ ಹಾಗೂ ಆಸುಪಾಸಿನ ಅರಣ್ಯ ಪ್ರದೇಶದಲ್ಲಿ ಹಾಸನ ಮೂಲದ ನವಜೋಡಿಯೊಂದು ಫೋಟೋ ಶೂಟ್‌ನಲ್ಲಿ ನಾನಾ ಭಂಗಿಗಳಲ್ಲಿ ರಸ್ತೆ ಮಧ್ಯದಲ್ಲಿ ತೊಡಗಿತ್ತು. ರಸ್ತೆಯಲ್ಲಿ ಬರುವ ವಾಹನ ಸವಾರರು ತಿರುವಿನಲ್ಲಿ ಅಚಾನಕ್ಕಾಗಿ ರಸ್ತೆಯ ಮದ್ಯದಲ್ಲಿ ಎದುರಾಗುವ ಜನರನ್ನು ನೋಡಿ ಗಾಬರಿಗೊಂಡು ವಾಹನ ನಿಲ್ಲಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಪೊಲೀಸ್ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರದಿಂದ ಚಾರ್ಮಾಡಿ ಘಾಟ್‌ನಲ್ಲಿ ಫೋಟೋ ತೆಗೆಯದಂತೆ ಸೂಚನಾ ಫಲಕ ಹಾಕಿದ್ದರೂ ಕೂಡ ಕೆಲ ಪ್ರವಾಸಿಗರು ಫೋಟೊ ವೀಡಿಯೋ ತೆಗೆಯುತ್ತಿರುವುದು ಹೆಚ್ಚುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಅಂತಹವರಿಗೆ ದಂಡ ವಿಧಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.