ಕೋವಿಡ್ 19 ಕಳವಳ-ಆಗಸ್ಟ್ 26: 8580 ಹೊಸ ಪ್ರಕರಣ ; 7249 ಡಿಸ್ಚಾರ್ಜ್ ; 133 ಸಾವು
ರಾಜ್ಯದಲ್ಲಿ 3 ಲಕ್ಷ ದಾಟಿದ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ; 2 ಲಕ್ಷ ಸೋಂಕಿತರು ಚೇತರಿಕೆ…!
Team Udayavani, Aug 26, 2020, 7:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8580 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7249 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 133 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,00,406 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ.
ರಾಜ್ಯದಲ್ಲಿ ಇದೀಗ ಒಟ್ಟು 2,11,688 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,608 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5091 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 760 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (951), ಬಳ್ಳಾರಿ (510), ದಕ್ಷಿಣ ಕನ್ನಡ (314), ಬೆಳಗಾವಿ (289), ಧಾರವಾಡ (255), ಉಡುಪಿ (251), ದಾವಣಗೆರೆ (233), ಕಲಬುರಗಿ (180), ಶಿವಮೊಗ್ಗ (166), ಹಾವೇರಿ (164), ಕೊಪ್ಪಳ (158), ಮಂಡ್ಯ (155), ಹಾಸನ (154), ಬಾಗಲಕೋಟೆ (154), ಬೆಂಗಳೂರು ಗ್ರಾಮಾಂತರ (136), ರಾಯಚೂರು (136), ಉತ್ತರ ಕನ್ನಡ (129), ಗದಗ (124) , ವಿಜಯಪುರ (131) ಮತ್ತು ಯಾದಗಿರಿ (102) ಜಿಲ್ಲೆಗಳಿವೆ.
ಇನ್ನುಳಿದಂತೆ, ಚಿಕ್ಕಮಗಳೂರು (97), ಕೋಲಾರ (88), ತುಮಕೂರು (88), ಚಿಕ್ಕಬಳ್ಳಾಪುರ (87), ಚಿತ್ರದುರ್ಗ (78), ಚಾಮರಾಜನಗರ (51), ಬೀದರ್ (42), ರಾಮನಗರ (47), ಮತ್ತು ಕೊಡಗು (26) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 25,886 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 41,180 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 67,066 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 7,23,850 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 18,56,771 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 25,80,621 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.