ರಗಡ್ ಲುಕ್ನಲ್ಲಿ ಕ್ರೇಜಿಸನ್!
Team Udayavani, Aug 26, 2020, 8:03 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಂ ರವಿಚಂದ್ರನ್ ಅಭಿನಯದ ಚೊಚ್ಚಲ ಚಿತ್ರ “ತ್ರಿವಿಕ್ರಮ’ ಸದ್ಯ ತೆರೆಗೆ ಬರಲು ರೆಡಿಯಾಗುತ್ತಿದೆ. ವಿಕ್ರಂ ರವಿಚಂದ್ರನ್ ಈ ಚಿತ್ರದಲ್ಲಿ ಆ್ಯಕ್ಷನ್ ಕಂ ಲವರ್ ಬಾಯ್ ಲುಕ್ನಲ್ಲಿ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಇದರ ಬೆನ್ನಲ್ಲೆ ವಿಕ್ರಂ ರವಿಚಂದ್ರನ್ ಅಭಿನಯಿಸುತ್ತಿರುವ ಎರಡನೇ ಚಿತ್ರ ಕೂಡ ಅನೌನ್ಸ್ ಆಗಿದೆ.
ಹೌದು, ವಿಕ್ರಂ ರವಿಚಂದ್ರನ್ ನಾಯಕನಾಗಿರುವ ಮೊದಲ ಚಿತ್ರ ತೆರೆಗೆ ಬರುವ ಮುನ್ನವೇ, ಎರಡನೇ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ. ಸುಮಾರು ಎರಡು ವರ್ಷಗಳ ಹಿಂದೆ ಪ್ರಿಯಾಮಣಿ ಅಭಿನಯಿಸಿದ್ದ, ಬಿಗ್ ಬಿ ಅಮಿತಾಭ್ ಬಚ್ಚನ್ ಹಿನ್ನೆಲೆ ಧ್ವನಿ ನೀಡಿದ್ದ “ವೈಟ್’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಮನು ನಾಗ್ ಈ ಹೊಸಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಕನ್ನಡ ಹಾಗೂ ಮಲೆಯಾಳಂನ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವವಿರುವ ಮನು ನಾಗ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಸ್ಯಾಂಡಲ್ ವುಡ್ಗೆ ಪರಿಚಯವಾಗುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಸ್ಕ್ರಿಪ್ಟ್ ಮತ್ತಿತರ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರದ ಕಥೆ ಕೇಳಿ ಇಷ್ಟಪಟ್ಟಿರುವ ವಿಕ್ರಂ ರವಿಚಂದ್ರನ್ ಹೊಸಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ಈ ಚಿತ್ರದ ಬಾಕಿ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚೆನ್ನೈ ಮೂಲದ ನಿರ್ಮಾಪಕರೊಬ್ಬರು ಈ ಚಿತ್ರವನ್ನು ನಿರ್ಮಿ ಸು ತ್ತಿ ದ್ದಾರೆ. ಕೆಲ ದಿನಗಳಲ್ಲಿ ಚಿತ್ರದ ಟೈಟಲ್, ನಾಯಕಿ, ಉಳಿದ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಇನ್ನು ಮೊದಲ ಚಿತ್ರ “ತ್ರಿವಿಕ್ರಮ’ನಲ್ಲಿ ಆ್ಯಕ್ಷನ್ ಹೀರೋ ಕಂ ಲವರ್ಬಾಯ್ ಲುಕ್ನಲ್ಲಿ ಕಾಣಿಸಿ ಕೊಳ್ಳುತ್ತಿರುವ ವಿಕ್ರಂ ರವಿಚಂದ್ರನ್, ಈ ಚಿತ್ರದಲ್ಲಿ ಕಂಪ್ಲೀಟ್ ರಗಡ್ ಆ್ಯಂಡ್ ರಾ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಔಟ್ ಆ್ಯಂಡ್ ಔಟ್ ಮಾಸ್ ಕಥಾಹಂದರವಿರುವ ಈ ಚಿತ್ರದಲ್ಲಿ ಸಾಕಷ್ಟು ಸೆಂಟಿಮೆಂಟ್ ಸನ್ನಿವೇಶಗಳು ಕೂಡ ಇರಲಿದ್ದು, ತಾಯಿ ಹಾಗೂ ಮಗನ ನಡುವಿನ ಬಾಂಧವ್ಯ ಚಿತ್ರದ ಹೈಲೈಟ್ ಎನ್ನುತ್ತದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.