ಮೀನುಗಾರಿಕೆಗೆ ಪರ್ಸಿನ್‌, ತ್ರೀಸೆವೆಂಟಿ ಬೋಟುಗಳ ಸಿದ್ಧತೆ

ಈ ವರೆಗೆ ಕಡಲಿಗಿಳಿದದ್ದು 400 ಬೋಟುಗಳು ಮಾತ್ರ; ಮಲ್ಪೆ ಬಂದರಿನಲ್ಲಿ ಕೋವಿಡ್‌ ಸುರಕ್ಷತೆ ನಿಯಮ ಜಾರಿ

Team Udayavani, Aug 27, 2020, 6:16 AM IST

ಮೀನುಗಾರಿಕೆಗೆ ಪರ್ಸಿನ್‌, ತ್ರೀಸೆವೆಂಟಿ ಬೋಟುಗಳ ಸಿದ್ಧತೆ

ಮಲ್ಪೆ: ಯಾಂತ್ರಿಕ ಮೀನುಗಾರಿಕೆ ಋತು ಆರಂಭಗೊಂಡು ತಿಂಗಳಾ ಗುತ್ತಾ ಬಂದರೂ ಮಲ್ಪೆ ಬಂದರಿನಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ದೋಣಿಗಳು ಕಡಲಿಗಿಳಿದಿಲ್ಲ. ಆ. 20ರಿಂದ ಯಾಂತ್ರಿಕ ಮೀನುಗಾರಿಕೆ ಬೋಟುಗಳು ಕಡಲಿಗಿಳಿಯಲು ಆರಂಭಿಸಿದ್ದು, ಈಗಾಗಲೇ ಕೇವಲ 400
ರಷ್ಟು ಮಾತ್ರ ಆಳಸಮುದ್ರ ಬೋಟುಗಳು ತೆರಳಿವೆ. ಸುಮಾರು 400ರಷ್ಟು ಆಳಸಮುದ್ರ ಬೋಟುಗಳು ಸಿದ್ಧತೆಯಲ್ಲಿದ್ದು, ಇನ್ನಷ್ಟೇ ತೆರಳಬೇಕಾಗಿವೆ. ಪರ್ಸಿನ್‌ ಮೀನುಗಾರರು ತಮ್ಮ ಸಂಘದ ನಿರ್ಧಾರದಂತೆ ಸಾಮೂಹಿಕ ಪ್ರಾರ್ಥನೆ ನಡೆಸಿ ಆ. 30ರಂದು ತೆರಳಲು ತೀರ್ಮಾನಿಸಿದ್ದಾರೆ. ತ್ರೀಸೆವೆಂಟಿ, ಸಣ್ಣಟ್ರಾಲ್‌ ಬೋಟುಗಳು ಆ. 26ರಿಂದ ಮೀನುಗಾರಿಕೆಗೆ ಹೋಗಲು ನಿರ್ಧರಿಸಿದ್ದು ಹಂತ ಹಂತವಾಗಿ ಎಲ್ಲ ವರ್ಗಗಳ ದೋಣಿಗಳು ಮೀನುಗಾರಿಕೆ ತೆರಳಲಿವೆ.

ಆ. 1ರಿಂದ ಮೀನುಗಾರಿಕೆಗೆ ಅವಕಾಶ
ವಿದ್ದರೂ ಕೋವಿಡ್‌-19 ಸೋಂಕು ಆವರಿಸುವ ಭಯದಿಂದಾಗಿ ಜಿಲ್ಲಾಡಳಿತವು ಮೀನುಗಾರಿಕೆ ಚಟುವಟಿಕೆ ನಡೆಸಲು ಸೂಕ್ತ ನಿದರ್ಶನವನ್ನು ನೀಡಬೇಕೆಂದು ಮೀನುಗಾರರು ಕಾದು ಕುಳಿತಿದ್ದರು. ಮೀನುಗಾರಿಕೆಗೆ ಯಾವುದೇ ನಿರ್ಬಂಧ ಇಲ್ಲದಿದ್ದರೂ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆ ನಡೆಸಲು ನಿರ್ಬಂಧವಿದೆ. ಇದೀಗ ಮೀನುಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತ ನೀಡಿದ ನಿರ್ದೇಶನದಂತೆ ಮೀನುಗಾರಿಕೆ ಆರಂಭಗೊಂಡಿದೆ.

ಸಭೆಯ ತೀರ್ಮಾನಗಳು
ಸಭೆಯಲ್ಲಿ ಕೆಲವೊಂದು ನಿಯಮ ರೂಪಿಸಲಾಗಿದೆ. ಬಂದರಿನೊಳಗೆ ಹೊರ ರಾಜ್ಯದ ವಾಹನಗಳ ನಿಲುಗಡೆಗೆ ಅವಕಾಶ ಇರುವುದಿಲ್ಲ. ದ್ವಿಚಕ್ರ, ಕಾರುಗಳನ್ನು ನಿಗದಿತ ಸ್ಥಳದಲ್ಲಿಯೇ ಪಾರ್ಕ್‌ ಮಾಡಬೇಕು. ಮೀನು ಮಾರಾಟದ ಮಹಿಳೆಯರಿಗೆ ಬಂದರಿನೊಳಗೆ ಮೀನು ಖರೀದಿ ಮಾಡಲು ಅವಕಾಶವಿದ್ದು, ಚಿಲ್ಲರೆ ಮಾರಾಟಕ್ಕೆ ಅವಕಾಶವಿಲ್ಲ. ಮೀನುಗಾರಿಕೆ ಮುಗಿಸಿ ಬಂದರಿಗೆ ಬರುವ ದೋಣಿಗಳ ಮೀನು ಖಾಲಿ ಮಾಡುವ ಸಮಯದಲ್ಲಿ ಆಯಾಯ ವಿಭಾಗ ಮೀನುಗಾರ ಸಂಘದ ಸ್ವಯಂ ಸೇವಕರನ್ನು ನಿಯೋಜಿಸಿ, ಸಾಮಾಜಿಕ ಅಂತರವನ್ನು ಕಾಯ್ದು ಮೀನು ಖಾಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರೂ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಸುವರ್ಣ ತಿಳಿಸಿದ್ದಾರೆ.

ಪಾಳಿ ಆಧಾರದಲ್ಲಿ ಮೀನು ಅನ್‌ಲೋಡ್‌
ಪಾಳಿ ಆಧಾರದಲ್ಲಿ ವಿವಿಧ ವರ್ಗಗಳ‌ ಬೋಟ್‌ಗಳ ಮೀನುಗಳನ್ನು ಖಾಲಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಮುಂಜಾನೆ 4.30ರಿಂದ ಬೆಳಗ್ಗೆ 8 ಗಂಟೆಯವರೆಗೆ ಆಳಸಮುದ್ರ ಬೋಟ್‌, 8ರಿಂದ 9.30ರ ವರೆಗೆ ತ್ರೀಸೆವೆಂಟಿ ಬೋಟುಗಳು, ಮಧ್ಯಾಹ್ನ 1 ಗಂಟೆಯ ಬಳಿಕ ಸಣ್ಣಟ್ರಾಲ್‌ಬೋಟು, ಸಂಜೆ 4 ಗಂಟೆಯ ಅನಂತರ ಪಸೀìನ್‌ ಬೋಟುಗಳ ಮೀನುಗಳನ್ನು ಖಾಲಿ ಮಾಡಲಾಗುತ್ತದೆ.

ಬಂದರು ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ
ವಿವಿಧ ಮೀನುಗಾರ ಸಂಘಗಳ ವತಿಯಿಂದ ಮುಂದಿನ ಸೀಮಿತ ಅವಧಿಯವರೆಗೆ ಪ್ರತಿದಿನ ರಾತ್ರಿ 9 ಗಂಟೆಯ ಬಳಿಕ ಮಲ್ಪೆ ಬಂದರು ಪ್ರದೇಶವನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲು ತೀರ್ಮಾನಿಸ ಲಾಗಿದೆ. ಬಂದರು ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ. ಮಾಸ್ಕ್ ಇಲ್ಲದೆ ಪ್ರವೇಶ ಮಾಡುವವರ ಬಗ್ಗೆ ಕ್ರಮ ತೆಗೆದು ಕೊಳ್ಳಲು ಪೊಲೀಸ್‌ ಇಲಾಖೆ , ಕರಾವಳಿ ಕಾವಲು ಪಡೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.
-ಕೃಷ್ಣ ಎಸ್‌. ಸುವರ್ಣ,  ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.