ಸ್ವಾತಂತ್ರ್ಯ ಪೂರ್ವದ ಶಾಲೆಗೆ ಬೇಕಿದೆ ಕಾಯಕಲ್ಪ ; ಇರುವ 6 ಕೊಠಡಿಗಳಲ್ಲಿ 3 ಶಿಥಿಲ

Team Udayavani, Aug 27, 2020, 2:31 PM IST

ಸ್ವಾತಂತ್ರ್ಯ ಪೂರ್ವದ ಶಾಲೆಗೆ ಬೇಕಿದೆ ಕಾಯಕಲ್ಪ ; ಇರುವ 6 ಕೊಠಡಿಗಳಲ್ಲಿ 3 ಶಿಥಿಲ

ದೇವನಹಳ್ಳಿ: ಸ್ವಾತಂತ್ರ್ಯ ಕಿಚ್ಚು ಹೆಚ್ಚಾಗಿದ್ದ ಕಾಲ ಘಟ್ಟದಲ್ಲಿ ಸ್ಥಾಪನೆಯಾಗಿದ್ದ ಶತಮಾನ ಪೂರೈಸಿರುವ ತಾಲೂಕಿನ ಆರುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಭಿವೃದ್ಧಿ ಕಾರ್ಯಕಲ್ಪ ಬೇಕಾಗಿದೆ. ಶಾಲೆಯಲ್ಲಿ ಲಭ್ಯವಿರುವ ದಾಖಲಾತಿಯಂತೆ 1884ರಲ್ಲಿ ಪ್ರಾರಂಭಗೊಂಡಿದೆ. ಈ ಮೂಲಕ ಶಾಲೆ ಸ್ಥಾಪನೆಯಾಗಿ 136 ವರ್ಷವಾಗಿದೆ. ಪ್ರಾಥಮಿಕ ಶಾಲೆ ಇದಾಗಿದ್ದು 1938 ರಲ್ಲಿ ಮಾಧ್ಯಮಿಕ ಶಾಲೆಯಾಗಿ ಮೇಲ್ದರ್ಜೆಗೇರಿದೆ. 12 ಗ್ರಾಮಕ್ಕೆ ಅನುಕೂಲ ವಾಗಲು ಆರುವನಹಳ್ಳಿ ಗ್ರಾಮಸ್ಥರಾದ ಎಚ್‌. ಆಂಜನಪ್ಪ, ವೀರಪ್ಪ, ಎಂಬವರು ಶಾನು ಭೋಗರಿಂದ ಬ್ರಿಟಿಷ್‌ ಸರ್ಕಾರದ ಆಡಳಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತಾರು ಮಕ್ಕಳನ್ನು ಸೇರಿಸಿ ಶಿಕ್ಷಣ ಪ್ರಾರಂಭಿಸಿದ್ದರು ಎಂದು ನಮ್ಮ ತಂದೆ ಹೇಳುತ್ತಿದ್ದರು ಎಂದು ಗ್ರಾಮದ ವೃದ್ಧ ನಾರಾಯಣಸ್ವಾಮಿ ನೆನಪು ಮಾಡಿಕೊಳ್ಳುತ್ತಾರೆ.

ನಾರಾಯಣಸ್ವಾಮಿ ಅವರೂ ಈ ಶಾಲೆಯ ವಿದ್ಯಾರ್ಥಿ ಆಗಿದ್ದರು. ಒಂದು ಕೊಠಡಿ ಮಳೆ ಬಂದರೆ ಸೋರುವುದು. ಮತ್ತೆರಡು ಕೊಠಡಿ ಮೇಲ್ಭಾಗದಲ್ಲಿ ಹಾಕಿರುವ ಚಪ್ಪಡಿ ಕಲ್ಲು ಬಿರುಕು ಬಿಟ್ಟಿದೆ. ಶೌಚಾಲಯಗಳು ಸಮರ್ಪಕವಾಗಿಲ್ಲ. ತಾಲೂಕಿನಲ್ಲಿ ಈಗಾಗಲೇ ಸಿಎಸ್‌ಆರ್‌ ಅನುದಾನದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿವಿಧ ಕಂಪನಿಗಳು ವಿವಿಧ ಶಾಲೆಗಳ ನಿರ್ಮಾಣ ಮಾಡಿದ್ದಾರೆ. ಅದೇ ಮಾದರಿಯಲ್ಲಿ 136 ವರ್ಷದ ಇತಿಹಾಸ ಹೊಂದಿರುವ ಶಾಲೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಿದರೆ ಶಾಲೆ ದಾಖಲಾತಿ ಪ್ರಮಾಣ ಹೆಚ್ಚಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಹಲವು ವರ್ಷ ಮನೆಯಲ್ಲಿಯೇ ಪಾಠ ಬೋಧನೆ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಒಂದೆಡೆ ಶಾಲೆ ಮಾಡಬೇಕು ಎಂದು ತೀರ್ಮಾನಿಸಿ ರಾಮಸ್ವಾಮಿ, ಪದ್ಮನಾಭಯ್ಯ, ಮುನಿ ವೆಂಕಟಪ್ಪ, ಮುನಿ ಆಂಜನಪ್ಪ ಒಟ್ಟಾಗಿ ಒಂದೂವರೆ ಎಕರೆಯನ್ನು ಶಾಲೆಗೆ ದಾನ ನೀಡಿದ್ದಾರೆ. ಅದೇ ಜಾಗದಲ್ಲಿ ಪ್ರಸ್ತುತ ಶಾಲೆ ನಡೆಯುತ್ತಿದೆ. ಈ ಶಾಲೆಯಲ್ಲಿ ಓದಿದವರು ತಾಪಂ ಮಾಜಿ ಅಧ್ಯಕ್ಷರು, ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಜನ ಪ್ರತಿನಿಧಿಗಳಾಗಿ ಅಮೇರಿಕಾದಲ್ಲಿ ಅಂಬರೀಶ್‌ ಎಂಬವರು ಉದ್ಯೋಗ ಮಾಡುತ್ತಿದ್ದಾರೆ. ವೈದ್ಯರು, ಎಂಜಿನಿಯರ್‌, ಜೂನಿಯರ್‌ ವಿಜ್ಞಾನಿಗಳು, ಆಡಿಟರ್‌ಗಳೂ ಆಗಿದ್ದಾರೆ.

– ಎಸ್‌.ಮಹೇಶ್‌

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.