13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿ

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಒತ್ತಾಯ ವಿಶೇಷ ವರದಿ ಪ್ರಕಟಿಸಿದ್ದ ಉದಯವಾಣಿ

Team Udayavani, Aug 28, 2020, 2:39 PM IST

13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿ

ಬೆಂಗಳೂರು: ಕೇಂದ್ರ ಸರ್ಕಾರ ಕಳೆದ 4 ತಿಂಗಳ ಜಿಎಸ್‌ಟಿ ಪರಿಹಾರ 13,764 ಕೋಟಿ ರೂ.ಗಳನ್ನು ಕೂಡಲೇ ರಾಜ್ಯಕ್ಕೆ ನೀಡಬೇಕು ಎಂದು ರಾಜ್ಯ ಸರ್ಕಾರ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಒತ್ತಾಯಿಸಿದೆ.

ಗುರುವಾರ ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಪಾಲ್ಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದ್ದಾರೆ. ಕೋವಿಡ್‌-19 ಹಾವಳಿ ನಡುವೆಯೂ ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ ಜಿಎಸ್‌ಟಿ  ಸಂಗ್ರಹದಲ್ಲಿ ಶೇ.71.61 ಗುರಿ ಸಾಧನೆಯಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಉತ್ತಮವಾಗಿದೆ. ಆದರೆ ಕಳೆದ 4 ತಿಂಗಳಿನಿಂದ ಒಟ್ಟು 13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ರಾಜ್ಯಕ್ಕೆ ಬಿಡುಗಡೆಯಾಗಬೇಕಿದೆ. ಸಂವಿಧಾನದ 101ರ ತಿದ್ದುಪಡಿ ಸೆಕ್ಷನ್‌ 18ರಲ್ಲಿ ಜಿಎಸ್‌ಟಿ ಕೌನ್ಸಿಲ್‌ ರಾಜ್ಯಗಳಿಗೆ ತೆರಿಗೆ ಸಂಗ್ರಹ ಕೊರತೆ ನಿವಾರಿಸುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ‌. ಅದರಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ತೆರಿಗೆ ಪರಿಹಾರಕ್ಕಾಗಿ ವಿಧಿಸುವ ಸೆಸ್‌ ಕೇಂದ್ರ ಸರ್ಕಾರದ ಪರಿಹಾರ ಖಾತೆಗೆ ನೇರವಾಗಿ ಜಮೆಯಾಗುತ್ತದೆ. ಇದರಿಂದ ರಾಜ್ಯಗಳು ಸಾಲ ಪಡೆಯಲು ಕಷ್ಟವಾಗುತ್ತದೆ. ಈ ಸಾಲ ಮರು ಪಾವತಿಸಲು ಕೇಂದ್ರ ಸರ್ಕಾರ ವಿಶೇಷ ತೆರಿಗೆ ವಿಧಿಸುವ ಅಧಿಕಾರವಿದ್ದು, 2023ರ ನಂತರ ಅದರ ಅವಧಿ ವಿಸ್ತರಿಸಲು ಅಧಿಕಾರವಿದೆ. ಹಾಗಾಗಿ ಕೇಂದ್ರ ಸರ್ಕಾರ ಸಾಲ ಪಡೆದು ತೆರಿಗೆ ಪರಿಹಾರ ಕೊಡುವುದು ಸೂಕ್ತ ಎಂಬುದಾಗಿಯೂ ಅಭಿಪ್ರಾಯ ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಒಟ್ಟು ತೆರಿಗೆ ರಾಜಸ್ವದಲ್ಲಿ 1.80 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಕೋವಿಡ್‌-19 ಮಹಾಮಾರಿ ಹಾಗೂ ಪ್ರವಾಹದಿಂದ ಇದರಲ್ಲಿ ಕೊರತೆಯಾಗುವ ಎಲ್ಲ ಸಾಧ್ಯತೆಯಿದ್ದು, ಇದರಿಂದ ರಾಜ್ಯ ಆರ್ಥಿಕ ಪ್ರಗತಿ ಕಷ್ಟ. ಕೋವಿಡ್‌-19 ಎದುರಿಸಲು ಹೆಚ್ಚುವರಿ ಹಣಕಾಸಿನ ಅಗತ್ಯವಿದೆ ಎಂಬುದನ್ನು ಕೌನ್ಸಿಲ್‌ನ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚು ತೆರಿಗೆ ವಿಧಿಸಲು ಸಲಹೆ: ಐಷಾರಾಮಿ ವಸ್ತುಗಳ ಮೇಲೆ ಹಾಗೂ ತಂಬಾಕು, ಪಾನ್‌ ಮಸಾಲ ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ಅವಕಾಶವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಸದ್ಯದ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳುವುದು ಒಕ್ಕೂಟ ವ್ಯವಸ್ಥೆಯಲ್ಲಿ ಅನಿರ್ವಾಯ. ಹೀಗಾಗಿ ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಸಭೆಯಲ್ಲಿ ತಿಳಿಸಲಾಯಿತು ಎಂದು ತಿಳಿಸಿದ್ದಾರೆ.

ಸಭೆ ಅಂತ್ಯದಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಮಾತನಾಡಿದರು. ಕೇಂದ್ರ ರಾಜ್ಯಗಳಿಗೆ ಯಾವುದೇ ಹೊರೆ ಇಲ್ಲದೆ ಸಾಲ ಪಡೆಯುವ ವ್ಯವಸ್ಥೆ ಕಲ್ಪಿಸಲಿದೆ ಹಾಗೂ ಈ ಸಾಲವನ್ನು 3 ವರ್ಷ ಪರಿಹಾರ ಸೆಸ್‌ ವಿಸ್ತರಿಸುವ ಮುಖಾಂತರ ಸಾಲ ಮರುಪಾವತಿಸಲಾಗುತ್ತದೆ ಎಂದು ಪ್ರಸ್ತಾವನೆ ಮಂಡಿಸಿದರು. ಈ ಬಗ್ಗೆ ಒಪ್ಪಿಗೆ ಸೂಚಿಸಲು ರಾಜ್ಯಗಳಿಗೆ 7ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು ಎಂಬುದಾಗಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.