ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ
Team Udayavani, Aug 28, 2020, 6:22 PM IST
ಚಿಕ್ಕೋಡಿ: ಗಡಿಭಾಗದ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸದಲಗಾ ಪಟ್ಟಣದಲ್ಲಿ ಕೇಂದ್ರೀಯ ಮಹಾವಿದ್ಯಾಲಯ ಆಡಳಿತಾತ್ಮಕ ಮಂಜೂರಾತಿ ಪಡೆದಿದ್ದು, ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ತಾಲೂಕಿನ ಸದಲಗಾ ಪಟ್ಟಣದ ವ್ಯಾಪ್ತಿಯ ಬೈನಾಕವಾಡಿ ಗ್ರಾಮದಿಂದ ಕೇಂದ್ರೀಯ ಮಹಾವಿದ್ಯಾಲಯದ ಮಾರ್ಗವಾಗಿ ಸದಲಗಾ-ನಾಗರಾಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ರಸ್ತೆ ಕಾಮಗಾರಿಗೆ ಎಸ್ ಎಫ್‌ಸಿ ಅನುದಾನದ ಯೋಜನೆಯಡಿ 15.55 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಒಂದು ತಿಂಗಳಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ದೃಷ್ಟಿಕೋನ ಇಟ್ಟುಕೊಂಡು ಶ್ರಮಿಸಲಾಗುತ್ತಿದೆ. ರೈತರ ಬಗ್ಗೆ ಕಾಳಜಿ ವಹಿಸಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದರ ಜೊತೆಗೆ ಆರೋಗ್ಯದ ಕುರಿತು ಕಾಳಜಿ ವಹಿಸಲಾಗುತ್ತಿದೆ ಎಂದರು.
ಅಭಿಜಿತ ಪಾಟೀಲ, ಸತೀಶ ಪಾಟೀಲ, ಬಸವರಾಜ ಹಣಬರ, ಉದಯ ಬದನಿಕಾರಿ, ರವಿ ಗೋಸಾವಿ, ಪ್ರಕಾಶ ಅನೂರೆ, ಸಂತೋಷ ನವಲೆ, ಸಮೀರ ಪಾಟೀಲ, ಪೀರಗೌಡ ಪಾಟೀಲ, ಅಪ್ಪಾಸಾಬ ಕುರಬೇಟ್ಟಿ, ದಿಲೀಪ ಹಂಚನಾಳೆ, ಋತುರಾಜ ಪಾಟೀಲ, ಸಚಿನ್ ಬಿಂದಗೆ ಇದ್ದರು.
………………………………………………………………………………………………………………………
ಕೋವಿಡ್ ವಾರಿಯರ್ಸ್‌ಗೆ ಚಿರಋಣಿ : ಹುಕ್ಕೇರಿ: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿದ ಲಾಕ್‌ಡೌನ್ ಸಮಯದಲ್ಲಿ ತಾಲೂಕಾ ಆಡಳಿತದೊಡನೆ ಸಹಕರಿಸಿದ ಸಾರ್ವಜನಿಕರಿಗೆ ಹಾಗೂ ವಾರಿಯರ್ಸ್‌ಗಳಿಗೆ ಚಿರಋಣಿಯಾಗಿದ್ದೇನೆಂದು ತಹಶೀಲ್ದಾರ್ ಅಶೋಕ ಗುರಾಣಿ ಹೇಳಿದರು. ಪಟ್ಟಣದ ವಿಕರ್ತಮಠದಲ್ಲಿ ವೃತ್ತಿನಿರತ ಛಾಯಾಗ್ರಾಹಕರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಕೋವಿಡ್ ರೋಗವು ವ್ಯಾಪಿಸುತ್ತಿದೆ. ಸರ್ಕಾರದ ನಿಯಮಾವಳಿಗಳನ್ನು ನಾವೆಲ್ಲರೂ ಪಾಲಿಸಿದಲ್ಲಿ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ. ಕೋವಿಡ್ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಪರ್ತಕರ್ತರು, ಆರೋಗ್ಯ, ಕಂದಾಯ ಸಿಬ್ಬಂದಿ, ಛಾಯಾಗ್ರಾಹಕರು ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಕೂಡ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷ ಸುರೇಶ ಜಿನರಾಳೆ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಸಂಘದ ಅಧ್ಯಕ್ಷ ಸತೀಶ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ ಕುಂದರಗಿ, ನಿರ್ದೇಶಕ ಬಸವರಾಜ ರಾಮಣ್ಣವರ, ಮಧು ಸೋನಗೋಜೆ, ಹಿರಿಯ ಛಾಯಾಗ್ರಾಹಕ ಶಶಿಕಾಂತ ಮಿಶ್ರಕೋಟಿ, ಬಾಬು ನಾಯಿಕ, ಅಪ್ಪು ಹುಕ್ಕೇರಿ ಉಪಸ್ಥಿತರಿದ್ದರು. ಶಿದ್ರಾಮ ಮೂತ್ತೂರ ಸ್ವಾಗತಿಸಿದರು. ಸಿ.ಎಂ. ದರಬಾರಿ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.