ಶೋಪಿಯಾನ್ ಕಾರ್ಯಾಚರಣೆ; ಭದ್ರತಾ ಪಡೆ ಎನ್ ಕೌಂಟರ್ ಗೆ ನಾಲ್ವರು ಉಗ್ರರ ಸಾವು
ಕಿಲೂರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು.
Team Udayavani, Aug 28, 2020, 6:35 PM IST
ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ (ಆಗಸ್ಟ್ 28, 2020) ನಡೆದಿದೆ. ಶೋಪಿಯಾನದ ಕಿಲೂರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಬಲಿಯಾಗಿರುವುದನ್ನು ಜಮ್ಮು-ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.
ಜಮ್ಮು ಕಾಶ್ಮೀರ ಪೊಲೀಸ್ ಹಾಗೂ ಭದ್ರತಾ ಪಡೆ ಖಚಿತ ಮಾಹಿತಿ ಮೇರೆಗೆ ಕಿಲೂರಾ ಪ್ರದೇಶವನ್ನು ಸುತ್ತುವರಿದ ವೇಳೆ ಅಪಾಯದ ಸುಳಿವು ಅರಿತ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ನಡೆಸಿದ ದಾಳಿಗೆ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.
ಕಿಲೂರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು. ಘಟನೆಯ ನಂತರ ಶೋಧ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಭಾಗದಲ್ಲಿ ಅಡಗಿಕೊಂಡಿದ್ದ 150ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಇದರಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಯ 26 ಉಗ್ರ ಕಮಾಂಡರ್ಸ್ ಗಳು ಸೇರಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.