ದೇಶದಲ್ಲಿ 76,472 ಹೊಸ ಕೋವಿಡ್ ಪ್ರಕರಣ: ಸೊಂಕಿತರ ಸಂಖ್ಯೆ 3.46 ಮಿಲಿಯನ್ ಗೆ ಏರಿಕೆ
Team Udayavani, Aug 29, 2020, 10:14 AM IST
ನವದೆಹಲಿ: ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಕಳೆದ 24 ಗಂಟೆಗಳಲ್ಲಿ 76,472 ಹೊಸ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ. ಮಾತ್ರವಲ್ಲದೆ 1,021 ಜನರು ಈ ಮಾರಾಣಾಂತಿಕ ವೈರಸ್ ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ 75 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3.46 ಮಿಲಿಯನ್ ಗೆ ತಲುಪಿದೆ. ಇದೀಗ ದೇಶದಲ್ಲಿ ಒಟ್ಟು 7,52,424 ಸಕ್ರೀಯ ಪ್ರಕರಣಗಳಿದ್ದು, ಸುಮಾರು 2.6 ಮಿಲಿಯನ್ ಜನರು ಗುಣಮುಖರಾಗಿದ್ದಾರೆ.
ಸೊಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಲೇ ಇದ್ದು ಒಟ್ಟಾರೆಯಾಗಿ 62,550 ಜನರು ಮೃತಪಟ್ಟಿದ್ದಾರೆ.
ಈ ಸಾಂಕ್ರಮಿಕ ರೋಗ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚು ಪರಿಣಾಮ ಬೀರಿದ್ದು, ಮಹಾರಾಷ್ಟ್ರವೊಂದರಲ್ಲೇ 7,18,00 ಸೊಂಕಿತರು, 1,73,195 ಸಕ್ರೀಯ ಪ್ರಕರಣಗಳಿದ್ದು 23 ಸಾವಿರ ಜನರು ಪ್ರಾಣತ್ಯೆಜಿಸಿದ್ದಾರೆ.
ದೆಹಲಿ ಸೇರಿದಂತೆ ಹಲವೆಡೆ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡುಬಂದಿದ್ದು, ಸೊಂಕು ಪತ್ತೆ ಪರೀಕ್ಷೆ ಕೂಡ ಅತ್ಯಧಿಕವಾಗಿ ನಡೆಸಲಾಗುತ್ತಿದೆ. ಹೀಗಾಗಿ ಭಾರತದಲ್ಲಿ ವೈರಾಣು ಪೀಡಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ ಎಮದು ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.