ಸಮಾನತೆಯ ಸಮಾಜ ಕಟ್ಟುವ ಕೆಲಸ ಸುತ್ತೂರು ಮಠದಿಂದ ಮುಂದುವರಿಯಬೇಕು: ಸಿಎಂ BSY
Team Udayavani, Aug 29, 2020, 1:45 PM IST
ಮೈಸೂರು: ಅನ್ನ, ಅರಿವು, ಆರೋಗ್ಯ, ಸಮಾಜ ಸುಧಾರಣೆ, ಧರ್ಮಜಾಗೃತಿ, ಆಧ್ಯಾತ್ಮ ಕ್ಷೇತ್ರದಲ್ಲಿ ಸುತ್ತೂರು ಮಠದ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಭದ್ರ ಬುನಾದಿ ಹಾಕಿದ್ದಾರೆ. ಇದನ್ನು ಸುತ್ತೂರು ಮಠ ಸಮಾನತೆಯ ಸಮಾಜ ಕಟ್ಟುವ ನಿಟ್ಟಿನಲ್ಲಿ ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶನಿವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮಿಯವರ 105ನೇ ಜಯಂತಿ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಶ್ರೀಗಳ ಜೀವನ ಮೌಲ್ಯಗಳು ಹಾಗೂ ಶ್ರೀಮಠದ ಸಾಧನೆಗಳನ್ನು ಬಿಂಬಿಸುವ ಕೃತಿಗಳು ಹಾಗೂ ಆನಿಮೇಷನ್ ಚಿತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮಹಾನ್ ಸಂತರು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು ದಾಸವೇರಣ್ಯರು ತಮ್ಮ ಬದುಕನ್ನು ಮಾನವನ ಉದ್ಧಾರಕ್ಕಾಗಿ ಮುಡಿಪಾಗಿಸಿ ಮಹಾಬೆಳಕಾದರು. ಇಂತಹ ಮಹಾನ್ ಸಂತರಲ್ಲಿ ಒಬ್ಬರಾದ ನಮ್ಮ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರು ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಜೆ.ಎಸ್.ಎಸ್ ಮಹಾವಿದ್ಯಾಪೀಠವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣ ನೀಡುವ ಮಹತ್ಕಾರ್ಯವನ್ನು ಮಠದ ವತಿಯಿಂದ ಮಾಡಲಾಗುತ್ತಿದೆ.
ಶ್ರೀಗಳು ಶಾಂತಿ ಹಾಗೂ ಧಾರ್ಮಿಕ ಸಾಮರಸ್ಯದ ರೂವಾರಿಗಳಾಗಿದ್ದು, ಈ ಭಾಗದ ಜನರು ಸೌಹಾರ್ದಯುತವಾಗಿ ಬದುಕಲು ಸ್ಪೂರ್ತಿಯಾಗಿದ್ದಾರೆ. ಮಠದ ಅನ್ನ ದಾಸೋಹ, ಜ್ಞಾನ ದಾಸೋಹದಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ರೀಗಳ ಮಾರ್ಗದರ್ಶನದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿರುವುದು ಶ್ಲಾಘನೀಯ ಎಂದರು.
ಶತಮಾನಗಳಿಂದ ದೀನ ದಲಿತರು ಎಂಬ ಬೇಧಭಾವವಿಲ್ಲದೆ ದಾಸೋಹ ನಡೆಸಿ ಸಮ-ಸಮಾಜದ ನಿರ್ಮಾಣಕ್ಕೆ ಶ್ರೀ ಮಠ ಶ್ರಮಿಸಿದೆ.ಪರಮಪೂಜ್ಯ ರಾಜೇಂದ್ರ ಶ್ರೀಗಳವರ ಜಯಂತಿ ಮಹೋತ್ಸವದ ಈ ಸಂದರ್ಭದಲ್ಲಿ ವೈವಿಧ್ಯಮಯ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ರೀಮಠದ ಜನಪರ ಕಾಳಜಿಯ ಪ್ರತೀಕವಾಗಿದೆ.
ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಇನ್ನೂ ಹೆಚ್ಚು ಹೆಚ್ಚಾಗಿ ನಡೆಯಬೇಕು ಎನ್ನುವುದು ನನ್ನ ಆಶಯ. ಶ್ರೀಮಠದ ಸಮಾಜ ಕಟ್ಟುವ ಕಾರ್ಯ ನಿರಂತರವಾಗಿ ಮುಂದುವರಿಯಲಿ ಎಂದು ಆಶಿಸಿದರಲ್ಲದೆ, ಶ್ರೀಗಳ ಜೀವನ ಮೌಲ್ಯಗಳು ಹಾಗೂ ಶ್ರೀಮಠದ ಸಾಧನೆಗಳನ್ನು ಬಿಂಬಿಸುವ ಕೃತಿಗಳು ಹಾಗೂ ಆನಿಮೇಷನ್ ಚಿತ್ರಗಳನ್ನು ಬಿಡುಗಡೆಗೊಳಿಸುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.