ರೈತರ ಮೇಲಿನ ದಬ್ಟಾಳಿಕೆ ಸಹಿಸಲ್ಲ


Team Udayavani, Aug 29, 2020, 4:32 PM IST

ರೈತರ ಮೇಲಿನ ದಬ್ಟಾಳಿಕೆ ಸಹಿಸಲ್ಲ

ತುಮಕೂರು: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ಗೋಮಾಳದಲ್ಲಿ ಭೂಮಿ ಉಳುಮೆ ಮಾಡಿಕೊಂಡಿರುವ ರೈತರ ಮೇಲೆ ದಬ್ಟಾಳಿಕೆ ಮಾಡುವುದನ್ನು ನಾನು ಸಹಿಸುವುದಿಲ್ಲ ಎಂದು ಅರಣ್ಯಾಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್‌ ಖಡಕ್‌ ಎಚ್ಚರಿಕೆ ನೀಡಿದರು.

ನಗರದ ತಾಪಂ ಸಭಾಂಗಣದದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿ, ಗ್ರಾಮಾಂತರ ಕ್ಷೇತ್ರದಲ್ಲಿ ಕಾನೂನು ಉಲ್ಲಂಘನೆ ಮಾಡಿ ಅಕ್ರಮವಾಗಿ ಅರಣ್ಯವನ್ನು ಒತ್ತುವರಿ ಮಾಡಲಾಗಿದೆ ಅವರ ಮೇಲೆ ಕ್ರಮ ಕೈಗೊಳ್ಳುವುದು ಬಿಟ್ಟು ರೈತರ ಮೇಲೆ ನಿಮ್ಮ ಗಧಾಪ್ರಹಾರವೇ ಎಂದು ಪ್ರಶ್ನಿಸಿದರು.

ಅಕ್ರಮವಾಗಿ ಅರಣ್ಯವನ್ನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ಮಾಡುವವರ ಮೇಲೆ ಕ್ರಮ ಕೈಗೊಳ್ಳದೇ ರೈತರ ವಿರುದ್ಧ ಠಾಣೆಗಳಲ್ಲಿ ದೂರುಗಳನ್ನು ಸಲ್ಲಿಸುತ್ತಿದ್ದೀರಾ, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳ ಬಗ್ಗೆ ಮಾಹಿತಿ ಕೊಡಿ ಎಂದು ಅರಣ್ಯ ಇಲಾಖೆಯವಲಯ ಅಧಿಕಾರಿ ಪವಿತ್ರ ಹಾಗೂ ನಟರಾಜುರವರನ್ನು ತರಾಟೆಗೆ ತೆಗೆದುಕೊಂಡರು.

ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಕ್ರಷರ್‌ಗಳ ಮಾಲೀಕರ ಲಾರಿಗಳು ರಸ್ತೆಯಲ್ಲಿ ಸಂಚಾರ ಮಾಡುವುದರಿಂದ ರಸ್ತೆಗಳೆಲ್ಲಾ ಹಾಳಾಗಿ ಸಾರ್ವಜನಿಕರು ಸಂಚಾರ ಮಾಡಲು ಸಾಧ್ಯವಾಗುತ್ತಿಲ್ಲ, ಅವರಿಗೆ ರಸ್ತೆ ನಿರ್ಮಿಸಿಕೊಡುವಂತೆ ನೋಟಿಸ್‌ ಜಾರಿ ಮಾಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು.ಅಕ್ರಮವಾಗಿ ಕಲ್ಲು ಗಣಿಗಾರಿಕೆ ಲಾರಿಗಳ ಸಂಚಾರದಿಂದ ಮೈದಾಳ ಸೇರಿದಂತೆ ಹಲವಾರು ಕಡೆ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರು ಸಂಚಾರ ಮಾಡುವುದು ಕಷ್ಟವಾಗಿದೆ. ಈ ಕೂಡಲೇ ಗಣಿಗಾರಿಕೆ ಮಾಡುತ್ತಿರುವ ಮಾಲೀಕರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ನೋಟಿಸ್‌ ಕಳಿಸುವಂತೆ ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಗಣಿಗಾರಿಕೆ ನೆಡೆಸುತ್ತಿರುವವರ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಾ, ತಪ್ಪಿತಸ್ಥರ ವಿರುದ್ಧ ವಸೂಲಿ ಮಾಡಿರುವ ರಾಜಧನ ಎಷ್ಟಿದೆ ಮಾಹಿತಿ ಕೊಡಿ ಎಂದು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು 19.42 ರಷ್ಟು ರಾಜಧನ ಸಂಗ್ರಹಣೆ ಮಾಡಿರುವ ಬಗ್ಗೆ ಮಾಹಿತಿ ನೀಡಿದರು.  ತಾಪಂಯ ಇಒ ಜೈಪಾಲ್‌, ತಹಶೀಲ್ದಾರ್‌ ಮೋಹನ್‌ಕುಮಾರ್‌, ತಾಲೂಕು ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ ಸಿದ್ದಪ್ಪ, ತಾಪಂ ಸದಸ್ಯ ಪ್ರದೀಪ್‌ ಇದ್ದರು.

ಟಾಪ್ ನ್ಯೂಸ್

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.