ಪಶು ವೈದ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ಪಶು ವೈದ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

Team Udayavani, Aug 29, 2020, 6:59 PM IST

ಪಶು ವೈದ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ಹಾವೇರಿ: ಹೈನುಗಾರಿಕೆಯೇ ಜೀವಾಳವಾಗಿರುವ ಜಿಲ್ಲೆಯಲ್ಲಿ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಿರುವುದರಿಂದ ಜಾನುವಾರುಗಳ ಸಂರಕ್ಷಣೆ ಹಾಗೂ ರೈತರಿಗೆ ಸಕಾಲಕ್ಕೆ ಅಗತ್ಯ ಸೌಲಭ್ಯ ತಲುಪಿಸಲು ಸಮಸ್ಯೆಯಾಗುತ್ತಿದೆ. ಜಿಲ್ಲೆಯ ಪಶು ಇಲಾಖೆಯಲ್ಲಿ 521 ಹುದ್ದೆ ಪೈಕಿ 275 ಹುದ್ದೆಗಳು ಖಾಲಿ ಇವೆ. ಶೇ.55 ಹುದ್ದೆಗಳು ಭರ್ತಿಯಾಗಬೇಕಿದ್ದು, ಸದ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 246 ಸಿಬ್ಬಂದಿಗೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುವ ಸ್ಥಿತಿ ಎದುರಾಗಿದೆ.

ಪ್ರಸ್ತುತ ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಿಸಿದ್ದ ಹಿನ್ನೆಲೆಯಲ್ಲಿ ಯುವ ಸಮೂಹ ನಗರ ಪ್ರದೇಶ ತೊರೆದು ಹೈನುಗಾರಿಕೆಗಾಗಿ ಹಳ್ಳಿಗಳತ್ತ ಆಗಮಿಸಿ ಸ್ವಯಂ ಉದ್ಯೋಗದ ದಾರಿ ಕಂಡುಕೊಳ್ಳುತ್ತಿದ್ದಾರೆ. ಅಲ್ಲದೇ, ರೈತರು ಜಾನುವಾರುಗಳ ಸಂರಕ್ಷಣೆ ವಿಷಯದಲ್ಲಿ ಪಶು ಇಲಾಖೆಯನ್ನೇ ಅವಲಂಬಿಸಿದ್ದಾರೆ. ಆದರೆ,ಇಲಾಖೆಯಲ್ಲಿ ವೈದ್ಯರಿಂದ ಹಿಡಿದು ಡಿ ದರ್ಜೆಯ ಹುದ್ದೆಗಳು ಖಾಲಿ ಇರುವುದರಿಂದ ಇಲಾಖೆಯ ಸೌಲಭ್ಯಗಳನ್ನು ಪಡೆಯಲು ರೈತಾಪಿ ವರ್ಗಕ್ಕೆ ಸಮಸ್ಯೆಯಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ದೊರಕದೇ ನರಳಾಡುವಂತಾಗಿದೆ.

ಸೇವೆಗಳಿಗೆ ತೊಡಕು: ಜಿಲ್ಲೆಯ ಪಶು ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ರೈತಾಪಿ ಸಮೂಹಕ್ಕೆ ಅಗತ್ಯ ಸೇವೆ ಒದಗಿಸುವಲ್ಲಿ ತೊಡಕಾಗುತ್ತಿದೆ. ಕರ್ತವ್ಯದಲ್ಲಿರುವ ಸಿಬ್ಬಂದಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರೂ ನಿರೀಕ್ಷಿತ ಗುರಿ ಸಾಧಿ ಸಲು ಸಾಧ್ಯವಾಗುತ್ತಿಲ್ಲ. ಪಶುಸಂಗೋಪನಾ ಉತ್ಪಾದನೆ ಸುಧಾರಿಸುವುದಕ್ಕಾಗಿ ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವುದು, ದೇಶಿ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ, ಪಶು ಆರೋಗ್ಯ ಸೇವೆ ಕಲ್ಪಿಸುವುದು, ಬ್ಯಾಕ್ಟೀರಿಯಾ ಹಾಗೂ ವೈರಸ್‌ ರೋಗಗಳ ಪತ್ತೆ ಹಚ್ಚುವಿಕೆ, ರೋಗಗಳಿಂದ ನರಳುತ್ತಿರುವ ಪ್ರಾಣಿಗಳಿಗೆ ಚಿಕಿತ್ಸೆ ಹಾಗೂ ಪ್ರಾಣಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸುವುದು ಸೇರಿದಂತೆ ಹಲವು ಸೇವೆಗಳನ್ನು ಒದಗಿಸಲು ಇಲಾಖೆಗೆ ಸಿಬ್ಬಂದಿ ಕೊರತೆ ತೊಡಕಾಗುತ್ತಿದೆ.

ಖಾಲಿ ಹುದ್ದೆಗಳು: ಪ್ರಮುಖವಾಗಿ ಸಹಾಯಕ ನಿರ್ದೇಶಕರು 5, ಮುಖ್ಯ ಪಶು ವೈದ್ಯಾಧಿಕಾರಿ 10, ಹಿರಿಯ ಪಶು ವೈದ್ಯಾ ಧಿಕಾರಿ 7, ಪಶು ವೈದ್ಯಾಧಿಕಾರಿ 30, ಜಾನುವಾರು ಅಭಿವೃದ್ಧಿ ಅಧಿಕಾರಿ 5, ಜಾನುವಾರು ಅಧಿ ಕಾರಿ 11, ಹಿರಿಯ ಪಶು ವೈದ್ಯಕೀಯ ಪರೀಕ್ಷಕರು 13, ಪಶು ವೈದ್ಯಕೀಯ ಪರೀಕ್ಷಕರು 32, ಪಶು ವೈದ್ಯಕೀಯ ಸಹಾಯಕರು 37 ಹುದ್ದೆಗಳು ಖಾಲಿಯಿವೆ.

ಮತ್ತೂಂದೆಡೆ ಲ್ಯಾಬ್‌ ಟೆಕ್ನಿಷಿಯನ್‌ 1, ಬೆರಳಚ್ಚುಗಾರರು 2, ವಾಹನ ಚಾಲಕರು 9 ಹಾಗೂ ಡಿ ದರ್ಜೆ ನೌಕರರ 113 ಹುದ್ದೆಗಳು ಭರ್ತಿಯಾಗಿಲ್ಲ. ಹೀಗಾಗಿ, ಇಲಾಖೆಯ ದೈನಂದಿಕ ಕಾರ್ಯ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ. ಹುದ್ದೆ ಭರ್ತಿ ಯಾವಾಗ?: ಜಿಲ್ಲೆಯ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ ಅರ್ಧಕ್ಕಿಂತಲೂ ಹೆಚ್ಚಿನ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಶಿಗ್ಗಾವಿ, ಹಾನಗಲ್ಲ, ಹಿರೇಕೆರೂರು, ರಟ್ಟಿಹಳ್ಳಿ ಸೇರಿ 7 ತಾಲೂಕುಗಳ ವ್ಯಾಪ್ತಿಯಲ್ಲಿ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಆಯಾ ತಾಲೂಕು ಕಚೇರಿ ಸೇರಿ ಜಿಲ್ಲಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಯಾವಾಗ ಎಂದು ರೈತರು ಪಶ್ನಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಪಶು ಇಲಾಖೆಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಖಾಲಿ ಹುದ್ದೆಗಳಿಗೆ ಇಲಾಖೆ ಮಟ್ಟದಲ್ಲಿ ಬಡ್ತಿ ನೀಡುವ ಕಾರ್ಯ ನಡೆಯುತ್ತಿದೆ. ಸಿಬ್ಬಂದಿ ಕೊರತೆ ಇದ್ದರೂ ರೈತರಿಗೆ ಇಲಾಖೆಯಿಂದ ಯಾವುದೇ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಲಾಗುತ್ತಿದೆ. – ಡಾ| ರಾಜು ಕೂಲೇರ, ಉಪನಿದೇರ್ಶಕರು, ಪಶು ಇಲಾಖೆ, ಹಾವೇರಿ

ಜಿಲ್ಲೆಯ ಪಶು ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ. ಅಲ್ಲದೇ, ಇಲಾಖೆಯಿಂದ ಸರ್ಕಾರದ ಸೌಲಭ್ಯಗಳು ಸಕಾಲಕ್ಕೆ ರೈತರಿಗೆ ತಲುಪುತ್ತಿಲ್ಲ. ಆದ್ದರಿಂದ, ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಂಡರೆ ರೈತರು, ಜಾನುವಾರುಗಳಿಗೆ ಸಹಕಾರಿಯಾಗಲಿದೆ.  -ರಾಮಣ್ಣ ಕೆಂಚಳ್ಳೇರ ಜಿಲ್ಲಾಧ್ಯಕ್ಷರು, ರೈತ ಸಂಘ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.