ಸಂಚಾರಿ ನಿಯಮ ಪಾಲಿಸಿ: ಬಸವರಾಜ್
Team Udayavani, Aug 29, 2020, 8:39 PM IST
ಮೊಳಕಾಲ್ಮೂರು: ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ರಸ್ತೆ ಅಪಘಾತ ತಡೆಯಲು ಸಾಧ್ಯ ಎಂದು ಪಿಎಸ್‌ಐ ಎಂ.ಕೆ. ಬಸವರಾಜ್ ತಿಳಿಸಿದರು.
ಪಟ್ಟಣದಲ್ಲಿ ವಾಹನ ಚಾಲಕರ ಟ್ರೇಡ್ ಯೂನಿಯನ್ ಘಟಕ ವತಿಯಿಂದ ಆಯೋಜಿಸಿದ್ದ ಚಾಲಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆಗಳಲ್ಲಿ ಸಂಚರಿಸುವ ಆಟೋ, ಟ್ರಾಫಿಕ್ಸ್ ಹಾಗೂ ಇನ್ನಿತರ ವಾಹನಗಳ ಚಾಲಕರು ವಾಹನ ಚಾಲನಾ ಪರವಾನಗಿ ಪಡೆದುಕೊಂಡಲ್ಲಿ ಮಾತ್ರ ವಾಹನ ಚಲಾಯಿಸಬೇಕು. ವಾಹನ ಚಾಲಕರು ಆರ್.ಟಿ.ಒ ಕಚೇರಿಯ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದರು. ತಹಶೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿ, ವಾಹನ ಚಾಲಕರು ರಸ್ತೆ ನಿಯಮವನ್ನು ಸರಿಯಾಗಿ ಪಾಲಿಸಿದ್ದಲ್ಲಿ ಚಾಲಕರು ಸುರಕ್ಷಿತವಾ ಗಿರಲು ಸಾಧ್ಯ. ವಾಹನ ಚಾಲಕರೊಂದಿಗೆ ಪ್ರಯಾಣಿಸುವ ಪ್ರಯಾಣಿಕರನ್ನು ರಕ್ಷಿಸುವ ಮೂಲಕ ಚಾಲನೆ ಮಾಡಬೇಕು. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಮಾತನಾಡಬಾರದು ಎಂದರು.
ತಾಪಂ ಇಒ ಪ್ರಕಾಶ್, ಕಾರ್ಮಿಕ ಇಲಾಖೆ ಅಧಿ ಕಾರಿ ಕುಸುಮ, ಸಿಪಿಐ ಎಂ.ಎನ್.ಎಚ್. ಮಾರಣ್ಣ, ನಾರಾಯಣಸ್ವಾಮಿ, ಗಿರೀಶ್, ಸೈಯದ್ ಸಾದತ್, ನೂರ್ ಮಹಮ್ಮದ್, ಮಂಜು, ಬಿ.ಪಿ.ಮಂಜುನಾಥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.