ವೃತ್ತಿಪರ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸಿ ಸೀಟು ಹಂಚುವುದೇ ಉತ್ತಮ


Team Udayavani, Aug 30, 2020, 5:00 AM IST

ವೃತ್ತಿಪರ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸಿ ಸೀಟು ಹಂಚುವುದೇ ಉತ್ತಮ

ಸಾಧನೆ ಮತ್ತು ಸಾಧಕರನ್ನು ಗುರುತಿಸಲು ನಿರ್ದಿಷ್ಟ ಮಾನದಂಡ ಅನುಸರಿಸಲೇಬೇಕಾಗುತ್ತದೆ. ಅದನ್ನು ಬಿಟ್ಟು ಬೇರೆ ಮಾರ್ಗ ಅನುಸರಿಸುವುದು ಎಷ್ಟು ಸರಿ? ಹಾಗೆಯೇ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಲೇಬೇಕು. ಪ್ರವೇಶ ಪರೀಕ್ಷೆ ಇಲ್ಲದೆ ವೈದ್ಯಕೀಯ, ಎಂಜಿನಿಯರಿಂಗ್‌ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಹಂಚಿಕೆ ಅಥವಾ ಪ್ರವೇಶ ಪ್ರಕ್ರಿಯೆ ಮಾಡಬಾರದು.

2020-21ನೇ ಸಾಲಿನ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌) ಮತ್ತು ಜೆಇಇ ನಡೆಸಲೇ ಬೇಕು. ಆಗ ಮಾತ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯದ ಆಧಾರದಲ್ಲಿ ಸೀಟು ಹಂಚಿಕೆ ಮಾಡಲು ಸಾಧ್ಯ. ಹಿಂದಿನ ಪರೀಕ್ಷೆಯ ಅಂಕ ಅಥವಾ ಇನ್ಯಾವುದೋ ಮಾನದಂಡ­ದಲ್ಲಿ ಸೀಟು ಹಂಚಿಕೆ ಮಾಡುವುದು ಸರಿಯಲ್ಲ.

ನೀಟ್‌ ಅಥವಾ ಜೆಇಇನಲ್ಲಿ ಉತ್ತಮ ರ್‍ಯಾಂಕ್‌ ಪಡೆದು, ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಬೇಕು ಎಂದು ಎಷ್ಟೋ ವಿದ್ಯಾರ್ಥಿಗಳು ಕನಸು ಕಂಡಿರು­ತ್ತಾರೆ ಮತ್ತು ಅದಕ್ಕಾಗಿ ವರ್ಷ ಪೂರ್ತಿ ಕಠಿನ ಪರಿಶ್ರಮ ಪಟ್ಟು ಅಧ್ಯ ಯನ ನಡೆಸಿರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಾಗಿಯೇ ನಿತ್ಯದ ತರಗತಿಗಳ ಜತೆಗೆ ಹೆಚ್ಚುವರಿ ಕೋಚಿಂಗ್‌ ಕೂಡ ಪಡೆದಿರುತ್ತಾರೆ. ಎಲ್ಲ ರೀತಿಯಲ್ಲೂ ಪರೀಕ್ಷೆ ಎದುರಿಸಲು ಸಿದ್ಧರಾಗಿರುವ ವಿದ್ಯಾ ರ್ಥಿ ಗಳಿಗೆ ನಿರಾಸೆ ಪಡಿಸುವುದು ಸರಿಯಲ್ಲ. ಕೊರೊನಾ­ದಿಂದ ಸಂಕಷ್ಟ ಎದುರಾಗಿರು ವುದು ನಿಜ. ಹಾಗಂತ ಇದಕ್ಕಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವುದು ಬೇಡ. ಕೊರೊನಾ ಅಥವಾ ಇನ್ಯಾವುದೋ ಕಾರಣಕ್ಕಾಗಿ ಪರೀಕ್ಷೆ ಮುಂದೂಡುವುದು ಅಥವಾ ನಡೆಸದೇ ಇರುವುದು ಸರಿಯಲ್ಲ.

ಕೊರೊನಾ ನಮಗೆ ಅನೇಕ ರೀತಿಯ ಪಾಠ ಕಲಿಸಿದೆ. ಎಲ್ಲದಕ್ಕೂ ಸಿದ್ಧರಾಗಲೇ ಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಗೆ ನಿರ್ದಿಷ್ಟ ಮಾನದಂಡ ಅನುಸರಿಸಿ, ಸೂಕ್ಷ ಮುನ್ನೆಚ್ಚರಿಕೆ ಹಾಗೂ ಭದ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಬೇಕು.
ಬಿಜೆಪಿಯೇತರ ಸರಕಾರ ಇರುವ ಐದು ರಾಜ್ಯಗಳಲ್ಲಿ ನೀಟ್‌ಗೆ ವಿರೋಧ ವ್ಯಕ್ತಪಡಿಸು ತ್ತಿವೆ. ಕರ್ನಾಟಕ ಸರಕಾರ ಕೊರೊನಾ ಆತಂಕದ ನಡುವೆ ಸಿಇಟಿ, ಎಸೆಸೆಲ್ಸಿ ಪರೀಕ್ಷೆಯನ್ನು ಯಾವುದೇ ಸಮಸ್ಯೆಯಿಲ್ಲದೆ ನಡೆಸಿದೆ. ನೀಟ್‌ ಮತ್ತು ಜೆಇಇ ಮಾಡಲು ಏಕೆ ಸಾಧ್ಯವಿಲ್ಲ?. ಪರೀಕ್ಷೆ ನಡೆಸಿ, ಅದರ ರ್‍ಯಾಂಕಿಂಗ್‌ ಆಧಾರದಲ್ಲಿಯೇ ವೈದ್ಯಕೀಯ, ದಂತ ವೈದ್ಯಕೀಯ ಅಥವಾ ಎಂಜಿನಿಯ­ರಿಂಗ್‌ ಸೀಟುಗಳ ಹಂಚಿಕೆಯಾಗಬೇಕು.

ಇದನ್ನು ಹೊರತುಪಡಿಸಿ ಬೇರೆ ಮಾನದಂಡ ಅನುಸರಿಸಿ ಸೀಟು ಹಂಚಿಕೆ ಮಾಡುವುದು ಸರಿಯಲ್ಲ. ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕಾಪಾಡ ಬೇಕಾದರೆ ಪ್ರವೇಶ ಪರೀಕ್ಷೆಗಳು ನಡೆಯಬೇಕು. ಪರೀಕ್ಷೆ ನಡೆಸಿ ಸೀಟು ಹಂಚಿಕೆ ಮಾಡುವುದೇ ಉತ್ತಮ. ಇದಕ್ಕೆ ಪರ್ಯಾಯ ಹುಡುಕುವುದು ಸರಿಯಲ್ಲ.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.