ನಿರಂತರ ಕಲಿಕೆಗಾಗಿ ವಿದ್ಯಾಗಮ ಜಾರಿ


Team Udayavani, Aug 30, 2020, 1:17 PM IST

ನಿರಂತರ ಕಲಿಕೆಗಾಗಿ ವಿದ್ಯಾಗಮ ಜಾರಿ

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕಾ ಗುಣಮಟ್ಟ ಹೆಚ್ಚಳಕ್ಕಾಗಿ ವಿದ್ಯಾಗಮ ಕಾರ್ಯಕ್ರಮ ಮೂಲಕ ಶಿಕ್ಷಣ ನೀಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುನಂದನ್‌ ತಿಳಿಸಿದರು.

ತಾಲೂಕಿನ ಬೇವಿನಹಳ್ಳಿ ಗ್ರಾಮದ ಸರ್ಕಾರಿ ಶಾಲಾವರಣದಲ್ಲಿ ಮಾನವ ಹಕ್ಕುಗಳ ಸಮಿತಿ ಆಯೋಜಿಸಿದ್ದ “ಸರ್ಕಾರಿ ಶಾಲೆ ಉಳಿಸಿ-ಖಾಸಗಿ ಶಾಲೆ ವ್ಯಾಮೋಹ ಅಳಿಸಿ’ ಘೋಷ ವಾಕ್ಯದೊಂದಿಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉತ್ತಮ ಪ್ರತಿಕ್ರಿಯೆ: ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಆರಂಭವಾಗಿಲ್ಲ. ಮಕ್ಕಳಿಗೆ ನಿರಂತರ ಕಲಿಕೆಯೂ ಲಭ್ಯವಾಗುತ್ತಿಲ್ಲ. ಶಾಲೆಗಳು ಆರಂಭ ವಾಗುವವರೆಗೂ ಮಕ್ಕಳನ್ನು ನಿರಂತರ ಕಲಿಕೆಗೆ ಹಚ್ಚುವ ಸಲುವಾಗಿ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗವಾಗಿ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ತಂದಿದೆ. ಜಿಲ್ಲೆಯಲ್ಲಿಯೂ ಈ ಕಾರ್ಯ ಕ್ರಮ ಜಾರಿಯಾಗಿದ್ದು, ಪೋಷಕರು ಮತ್ತು ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.

ಕಾನೂನಿನ ನಿಯಮ ಪಾಲಿಸಿ: ಕಾನೂನು ಅರಿವು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಎಲ್ಲ ಪೋಷಕರಿಗೆ ಮತ್ತು ನಾಗರಿಕರಿಗೂ ಅಗತ್ಯವಿದೆ. ಸಂಘ ಸಂಸ್ಥೆಗಳು ಕಾನೂನು ಅರಿವು ಕಾರ್ಯ ಕ್ರಮ ಮಾಡುತ್ತಿರುವುದು ಉಪಯುಕ್ತವಾಗಿದೆ. ಎಲ್ಲರೂ ಕಾನೂನಿನ ನಿಯಮಗಳನ್ನು ಪಾಲಿಸಬೇಕು. ಖಾಸಗಿ ಶಾಲೆ ಗಳಲ್ಲಿ ಸಿಗುವ ಇಂಗ್ಲಿಷ್‌ ಮಾಧ್ಯಮ ಕಲಿಕಾ ಕೌಶಲ್ಯವನ್ನು ಸರ್ಕಾರಿ ಶಾಲೆ ಗಳಲ್ಲೂ ಆರಂಭಿಸಲಾಗಿದೆ. ಪೋಷಕರು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಸಾಧನೆ ಮಾಡಿದವರೆಲ್ಲ ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಆಗಿದ್ದಾರೆ ಎಂದು ಹೇಳಿದರು.

ಮನೆಗೆ ತೆರಳಿ ಪಾಠ ಬೋಧನೆ: ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ನೀನಾಪಟೇಲ್‌ ಮಾತನಾಡಿ, ಪ್ರಸಕ್ತ ಸಾಲಿನ  ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಜಿಲ್ಲೆಯು ರಾಜ್ಯಕ್ಕೆ 4ನೇ ಸ್ಥಾನ ಪಡೆಯುವಲ್ಲಿ ಶ್ರಮಿಸಿದ ಎಲ್ಲ ಶಿಕ್ಷಣಾಧಿಕಾರಿಗಳಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಎಲ್ಲ ಲಕ್ಷಣಗಳು ಮತ್ತು ಯೋಜನೆಗಳು ಸಫ‌ಲಗೊಳ್ಳಲಿ, ಸರ್ಕಾರಿ ಶಾಲೆ ಗಳಲ್ಲಿನ ಶಿಕ್ಷಕರು ಮೆರಿಟ್‌ ಮೇಲೆ ಹುದ್ದೆಗಳನ್ನು ಪಡೆದುಕೊಂಡವರಾಗಿದ್ದಾರೆ. ಉತ್ತಮ ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಶಿಕ್ಷಕರು ಮನೆ ಮನೆಗೆ ತೆರಳಿ ಪಾಠ ಗಳನ್ನು ಬೋಧಿಸುತ್ತಿದ್ದಾರೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್‌ ಕಾನೂನಿನ ಜಾಗೃತಿ ಮೂಡಿಸಿದರು. ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ರಜನಿರಾಜ್‌, ಅಧಿಕಾರಿಗಳಾದ ಶಿವಪ್ಪ, ಚಂದ್ರಕಾಂತ, ಮಹದೇವು, ಲೋಕೇಶ್‌, ನಾಗರಾಜು, ಮಹೇಶ್‌ಕುಮಾರ್‌, ರವಿ ಇದ್ದರು.

ಟಾಪ್ ನ್ಯೂಸ್

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.