ಕೇಂದ್ರದ ವಿರುದ್ಧ ಸಿಪಿಎಂ ಪ್ರತಿಭಟನೆ
Team Udayavani, Aug 30, 2020, 1:57 PM IST
ಹಾಸನ: ಕೋವಿಡ್ ದಿಂದ ಸಂಕಷ್ಟಕ್ಕೀಡಾಗುತ್ತಿರುವ ಜನವರ್ಗವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಮತ್ತು ತುರ್ತಾಗಿ ಜನರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿ ಸಿಪಿಐ (ಎಂ) ಕಾರ್ಯ ಕರ್ತರು ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ಧರ್ಮೇಶ್ ಮಾತ ನಾಡಿ, ದೇಶದಲ್ಲಿ ಕೋವಿಡ್ ಹಾವಳಿ ತೀವ್ರವಾಗು ತ್ಲೇ ಇದೆ. ಕೋವಿಡ್ ಸೋಂಕು ನಿಯಂತ್ರಣ ಮಾಡಲು ಲಾಕ್ಡೌನ್ ಮಾಡಲಾಗಿತ್ತು. ಇದರಿಂದ ದೇಶದ ಆರ್ಥಿಕತೆಗೆ ಹಾನಿಯಾಯಿತೇ ವಿನಃ ಕೊರೊನಾ ನಿಯಂತ್ರಣಕ್ಕೆ ಬರಲಿಲ್ಲ. ಕೇಂದ್ರ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ದೂರಿದರು.
ಲಾಕ್ಡೌನ್ ದೇಶದ ಬಹುಪಾಲು ಜನರ ಮೇಲೆ, ಅದರಲ್ಲೂ ದಲಿತರು, ಬುಡಕಟ್ಟು ಜನರು, ಮಳೆಯರು, ಅಲ್ಪಸಂಖ್ಯಾತರು ಮತ್ತು ವಿಕಲಾಂಗರ ಮೇಲೆ ಹೇಳ ತೀರದ ಸಂಕಷ್ಟಗಳನ್ನು ಹೇರಿತು. ಕೇಂದ್ರ ಬಿಜೆಪಿ ಸರ್ಕಾರ ಅವರ ನೆರವಿಗೆ ಧಾವಿಸಲಿಲ್ಲ. ಅಂತಹ ಕುಟುಂಬಗಳಿಗೆ ನಗದು ವರ್ಗಾವಣೆ ಮತ್ತು ಆಹಾರ ಧಾನ್ಯಗಳನ್ನು ಉಚಿತವಾಗಿ ತರಿಸಬೇಕೆಂಬ ಬೇಡಿಕೆಯನ್ನು ಈಡೇರಿಸುವುದನ್ನು ನಿರಾಕರಿಸಿದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ವಿಫಲವಾದ ಮೋದಿ ಸರ್ಕಾರ ಈಗ ಲಾಕ್ಡೌನ್ ತೆರವು ಮಾಡುತ್ತಾ ತಾನು ಉಂಟು ಮಾಡಿದ ಸಮಸ್ಯೆಯನ್ನು ಎದುರಿಸುವ ಹೊರೆಯನ್ನು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಿ ಕೈತೊಳೆದುಕೊಂಡಿದೆ. ಆದರೆ ಕೇಂದ್ರ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಹಾಯ ಮಾಡಲು ಮುಂದಾಗುತ್ತಿಲ್ಲವೆಂದು ಆರೋಪಿಸಿದರು. ಸಿಪಿಎಂ ಹಾಸನ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ಕುಮಾರ್ ಮಾತನಾಡಿ, ದೇಶದ ಜನರು ಹಸಿವಿನಿಂದ ಕಂಗೆಟ್ಟು ಕುಳಿತ್ತಿದ್ದಾರೆ. ದೇಶದ ಪ್ರಜೆಗಳಿಗೂ ಆಹಾರ ನೀಡುವ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ ನಿರ್ವಹಿಸುವಲ್ಲಿ ವಿಫಲವಾಗಿದೆ ಪಕ್ಷದ ಮುಖಂಡರಾದ ಎಂ.ಜಿ.ಪೃಥ್ವಿ, ರಾಜು ಸಿಗರನಹಳ್ಳಿ, ವಾಸು, ಜಿ.ಪಿ.ಸತ್ಯನಾರಾಯಣ, ಅರವಿಂದ, ವಸಂತಕುಮಾರ್, ಮೋಹನ್, ಪ್ರಸನ್ನಕುಮಾರ ಚಿಕ್ಕಕಣಗಾಲು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.