ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಬಿಡಬೇಕು: ಎಚ್ ಡಿಕೆ
Team Udayavani, Aug 30, 2020, 3:09 PM IST
ಬೆಂಗಳೂರು: ಒಳಮೀಸಲಾತಿ “ಸರ್ವರಿಗೂ ಸಮಪಾಲು ಸಮಬಾಳು” ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ. ಮೇಲ್ಜಾತಿಯಲ್ಲಿನ ಬಡವರಿಗೆ ಶೇ. 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ ಎಂದಿದ್ದಾರೆ.
ಸ್ವತಃ ಹಿಂದುಳಿದ ವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದು ಎಚ್ ಡಿಕೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.