ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢ
Team Udayavani, Aug 30, 2020, 4:41 PM IST
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ನಳಿನ್ ಕಟೀಲ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗಷ್ಟೇ ಒಂದು ವರ್ಷ ಪೂರ್ತಿಗೊಳಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.