19ರಂದು ನ್ಯಾಯಾಲಯಗಳಲ್ಲಿ ಇ-ಅದಾಲತ್‌


Team Udayavani, Aug 30, 2020, 5:26 PM IST

19ರಂದು ನ್ಯಾಯಾಲಯಗಳಲ್ಲಿ ಇ-ಅದಾಲತ್‌

ಶಿವಮೊಗ್ಗ: ಜಗತ್ತಿನಾದ್ಯಂತ ಹರಡಿರುವ ಮಾರಣಾಂತಿಕ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಾಲಯದಲ್ಲಿ ದಾಖಲಾಗಿರುವ ವಿವಿಧ ಪ್ರಕಾರದ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ವಿಳಂಬ ವಾಗುತ್ತಿರುವುದನ್ನು ಮನಗಂಡು ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ಒದಗಿಸಿಕೊಡುವ ಸದುದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ಸೆ. 19ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಇ-ಅದಾಲತ್‌ನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷ ಜಸ್ಟೀಸ್‌ ಅಲೋಕ ಆರಾಧೆ ಅವರು ಹೇಳಿದರು.

ಶುಕ್ರವಾರ ಸಂಜೆ ನ್ಯಾಯಾಧೀಶರು ಹಾಗೂ ಮಾಧ್ಯಮ ಪ್ರತಿನಿಧಿ ಗಳಿಗಾಗಿ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳ್ಳಬಹುದಾದ ಮೊಕದ್ದಮೆಗಳನ್ನು ಇ-ಅದಾಲತ್‌ನಲ್ಲಿ ವಿಚಾರಣೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದ ಅವರು, ಕಕ್ಷಿದಾರರು ಬಹಳ ಸರಳವಾಗಿ ಈ ಅದಾಲತ್‌ನಲ್ಲಿ ಭಾಗವಹಿಸಿ, ಒಪ್ಪಿತವಾಗುವಂತೆ ನ್ಯಾಯ ಪಡೆದುಕೊಳ್ಳಬಹುದಾಗಿದೆ ಎಂದರು.

ಪ್ರಕರಣದ ವಿಚಾರಣೆಗೆ ದೂರುದಾರರು ನ್ಯಾಯಾಲಯಕ್ಕೆ ಆಗಮಿಸುವ ಅಗತ್ಯವಿಲ್ಲ. ಬದಲಾಗಿ ತಾವಿರುವ ಸ್ಥಳದಿಂದಲೇ ವಿಚಾರಣೆಗೆ ಭಾಗವಹಿಸಬಹುದಾಗಿದೆ. ವಿಶೇಷವಾಗಿ ಕಂಪ್ಯೂಟರ್‌, ಲ್ಯಾಪ್‌ಟಾಪ್‌ನಂತದ ಸಾಧನ ಸಲಕರಣೆಗಳ ಅಗತ್ಯವಿಲ್ಲ ಎಂದ ಅವರು, ತಮ್ಮಲ್ಲಿರುವ ಮೊಬೈಲ್‌ನಿಂದಲೇ ತಾವಿರುವ ಸ್ಥಳದಿಂದಲೇ ಮೊಕದ್ದಮೆಯನ್ನು ದಾಖಲಿಸಲುಅವಕಾಶ ನೀಡಲಾಗಿದೆ ಎಂದರು.

ದಾಖಲಾಗಿರುವ ವ್ಯಾಜ್ಯಗಳ ವಿಚಾರಣೆ ಪೂರ್ವದಲ್ಲಿ ನ್ಯಾಯಾಲಯದ ಸಕ್ಷಮ ಸಿಬ್ಬಂದಿ  ಗಳು ದೂರುದಾರರಿಗೆ ಕರೆಮಾಡಿ, ಮಾಹಿತಿ ಪಡೆದುಕೊಳ್ಳಲಿರುವರು. ಅದಾಲತ್‌ನಲ್ಲಿ ಅಪಘಾತ, ಇನ್ಶೂರೆನ್ಸ್‌, ಹಣ ವಸೂಲಾತಿ, ಚೆಕ್‌ಬೌನ್ಸ್‌, ಮೆಂಟೇನೆನ್ಸ್‌ ಮತ್ತಿತರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುವುದು. ಗಂಭೀರ ಸ್ವರೂಪದ ವಿಚಾರಣೆಯ ಪ್ರಕರಣಗಳನ್ನು ಎಂದಿನಂತೆ ಹಂತ ಹಂತವಾಗಿ ವಿಚಾರಣೆ ನಡೆಸಲಾಗುವುದು ಎಂದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧಿಧೀಶ ಮಾಸ್ಟರ್‌ ಆರ್‌ಕೆಜಿಎಂಎಂ ಮಹಾಸ್ವಾಮೀಜಿ ಅವರು ಮಾತನಾಡಿ, ಜುಲೈ ಮಾಸಾಂತ್ಯದವರೆಗೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾದ 34,875 ಪ್ರಕರಣಗಳಲ್ಲಿ 2465ಪ್ರಕರಣಗಳನ್ನು ಗುರುತಿಸಿ, ವಿಚಾರಣೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು. ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ಹಿರಿಯ ನ್ಯಾಯಾ ಧೀಶ ಹಾಗೂ ಕಾನೂನು ಸೇವಾ ಸಮಿತಿಯ ಕಾರ್ಯನಿರ್ವಾಹಕ ಅಧ್ಯಕ್ಷ ಜಸ್ಟೀಸ್‌ ಅರವಿಂದ್‌ ಕುಮಾರ್‌ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ನ್ಯಾಯಾಧಿಧೀಶರು ಇದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.