ಕೋವಿಡ್ ಹಿನ್ನೆಲೆ: ಮೊಹರಂ ಕುಣಿತ ತಡೆಯಲು ಹೋದ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Aug 30, 2020, 7:55 PM IST
ಗಂಗಾವತಿ: ಕೋವಿಡ್ ರೋಗ ಹರಡದಂತೆ ತಡೆಯಲು ಸರಕಾರ ಸಾರ್ವಜನಿಕ ಮೊಹರಂ ಹಬ್ಬ ಆಚರಣೆ ನಿಷೇಧಿಸಿದ್ದು, ಗುಂಪುಗೂಡಿ ಮೊಹರಂ ಹಬ್ಬದ ಕುಣಿತವಾಗುತ್ತಿದ್ದ ಸಂದರ್ಭ, ತಡೆಯಲು ಯತ್ನಿಸಿದ ಪೊಲೀಸ್ ಗೆ ಅವಾಚ್ಯಶಬ್ದಗಳಿಂದ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತಾಲೂಕಿನ ಆರಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಜರುಗಿದೆ.
ತಾಲೂಕಿನ ಆರಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಸೋಮನಾಥ, ಹಬ್ಬದ ಸಂದರ್ಭದಲ್ಲಿ ಗುಂಪು ಸೇರಿ ಕುಣಿಯದಂತೆ ಸೂಚನೆ ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಆರಾಳ ಗ್ರಾಮದ ಕೆಲವರುಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪ್ರಭು,ತಿಮ್ಮಣ್ಣ, ಅಶೋಕ, ವೆಂಕಟೇಶ, ಮುದಿಯಪ್ಪ, ನಿಂಗಪ್ಪ, ಉಮೇಶ,ಶರಣಪ್ಪ,ಶಿ ವು, ರುದ್ರೇಶ, ಸಿದ್ದಪ್ಪ, ಯಮನೂರ, ಕನಕಪ್ಪ, ಗವಿಸಿದ್ದಪ್ಪ, ಮಹೇಶ, ಹಾಗೂ ಚಂದೂಸಾಬ ಹಾಗೂ 15 ಜನರು ಅವಾಚ್ಯಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣ ಪಿಎಸ್ ಐ ಜೆ.ದೊಡ್ಡಪ್ಪ ಹಾಗೂ ಇತರೆ ಪೊಲೀಸ್ ಸಿಬ್ಬಂಯಿದ್ದ ಜೀಪ್ ಬರುವುದನ್ನು ಕಂಡು ಹಲ್ಲೆ ನಿರತರು ಅಲ್ಲಿಂದ ಪರಾರಿಯಾಗಿದ್ದಾರೆ, ಹಲ್ಲೆಗೊಳಗಾದ ಪೊಲೀಸ್ ಸೋಮನಾಥ, ಪ್ರಭು ಹಾಗೂ 14 ಜನರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡ ಸೋಮನಾಥ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.