ಕಲಬುರಗಿ: ಅನುಮನಾಸ್ಪದವಾಗಿ ಮಹಿಳಾ ಪೊಲೀಸ್ ಪೇದೆಯ ಶವ ಪತ್ತೆ
Team Udayavani, Aug 30, 2020, 8:21 PM IST
ಕಲಬುರಗಿ: ಜಿಲ್ಲೆಯಲ್ಲಿ ಪೊಲೀಸ್ ಪೇದೆ ಕುಟುಂಬವೊಂದು ದುರಂತ ಅಂತ್ಯ ಕಂಡಿದೆ. ಪತಿ ಆತ್ಮಹತ್ಯೆಗೆ ಶರಣಾದ ಎರಡೂವರೆ ತಿಂಗಳಲ್ಲೇ ಪತ್ನಿ ಅನುಮಾನಾಸ್ಪವಾಗಿ ರವಿವಾರ ಮೃತಪಟ್ಟಿದ್ದಾರೆ.
ಗುಪ್ತಚರ ವಿಭಾಗದ ಮಹಿಳಾ ಪೇದೆ ಸುರೇಖಾ ಬಿರಾದಾರ (33) ಮೃತರಾಗಿದ್ದು, ಯಾಡ್ರಾಮಿ ಪಟ್ಟಣದ ಬಾವಿಯೊಂದರಲ್ಲಿ ಇವರ ಮೃತ ದೇಹ ಪತ್ತೆಯಾಗಿದೆ. ಇವರ ಪತಿ ಮಲ್ಲಿನಾಥ ಬಿರಾದಾರ ಕಳೆದ ಜೂ.12ರಂದು ಆತ್ಮಹತ್ಯೆಗೆ ಶರಣಾಗಿದ್ದರು.
ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿದ್ದ ಮಲ್ಲಿನಾಥ ಪೊಲೀಸ್ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಪತ್ನಿ ಸುರೇಖಾ ಮಾನಸಿಕವಾಗಿ ತೀವ್ರ ನೊಂದು ಕೊಂಡಿದ್ದರು. ಪತಿ ಸಾವಿನ ನಂತರದ ದಿನದಿಂದ ಇವರು ರಜೆ ಮೇಲೆ ಇದ್ದರು. ಕೆಲ ದಿನಗಳಲ್ಲಿ ಮರಳಿ ಕರ್ತವ್ಯಕ್ಕೆ ಹಾಜರಾಗಿತ್ತು ಎನ್ನಲಾಗಿದೆ.
ಆದರೆ, ರವಿವಾರ ಸಂಜೆ ಸಂಶಯಾಸ್ಪದವಾಗಿ ಮೃತ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಮೂಡಿದೆ. ಸ್ಥಳಕ್ಕೆ ಯಡ್ರಾಮಿ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದಾರೆ.
ಮೃತ ಸುರೇಖಾ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದವರಾಗಿದ್ದಾರೆ. 2007ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಪತಿ ಮಲ್ಲಿನಾಥ ಆಳಂದ ತಾಲೂಕಿನ ಕವಲಗಾ ಗ್ರಾಮದವರಾಗಿದ್ದರು. ಮಲ್ಲಿನಾಥ 2008ರಲ್ಲಿ ಸೇವೆಗೆ ಸೇರಿದ್ದರು. ಈ ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.