ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್ ವುಡ್ ನಟ ದರ್ಶನ್ ಹೇಳಿದ್ದೇನು?
Team Udayavani, Aug 31, 2020, 3:52 PM IST
ದಾವಣಗೆರೆ: ಕನ್ನಡ ಚಿತ್ರರಂಗದಲ್ಲಿ ಡ್ರಗ್ ವ್ಯವಹಾರ ನಡೆಯುತ್ತಿದೆ ಎಂದು ಕೇಳಿಬರುತ್ತಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ನಟ ದರ್ಶನ್ ಅಂತಹ ಆರೋಪ ಕೇಳಿ ಬರುತ್ತಿರುವುದು ಸ್ಯಾಂಡಲ್ ವುಡ್ ಮಾತ್ರವಲ್ಲ ಕರ್ನಾಟಕಕ್ಕೆ ಕಳಂಕ ಎಂದಿದ್ದಾರೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ರವರ ಆರೋಪ ಕುರಿತಂತೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಪೊಲೀಸ್ ತನಿಖೆ ನಡೆಯುತ್ತಿದೆ. ಒಂದು ವಾರದಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದರು.